ಪಾಯಿಂಟ್‌ ಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಜಿಗಿದ ಅಫ್ಘಾನ್! ಯಾವ್ಯಾವ ತಂಡಗಳಿಗಿದೆ ಸೆಮಿಸ್ ಅವಕಾಶ?

ICC World Cup 2023 Updated Points Table: 2023 ರ ವಿಶ್ವಕಪ್‌ನಲ್ಲಿ ನೆದರ್ಲೆಂಡ್ಸ್ ತಂಡವನ್ನು 7 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಅಫ್ಘಾನಿಸ್ತಾನ ತಂಡ ಸತತ ಮೂರನೇ ಗೆಲುವು ದಾಖಲಿಸಿದೆ. ವಿಶ್ವಕಪ್‌ನಲ್ಲಿ ಅಫ್ಘಾನಿಸ್ತಾನಕ್ಕೆ ಇದು ನಾಲ್ಕನೇ ಗೆಲುವು. ಅಫ್ಘಾನಿಸ್ತಾನದ ಈ ಗೆಲುವಿನ ಮೂಲಕ ವಿಶ್ವಕಪ್ ಪಾಯಿಂಟ್ ಪಟ್ಟಿಯಲ್ಲೂ ಮಹತ್ತರ ಬದಲಾವಣೆಗಳಾಗಿವೆ.

|

Updated on: Nov 04, 2023 | 7:40 AM

2023 ರ ವಿಶ್ವಕಪ್‌ನಲ್ಲಿ ನೆದರ್ಲೆಂಡ್ಸ್ ತಂಡವನ್ನು 7 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಅಫ್ಘಾನಿಸ್ತಾನ ತಂಡ ಸತತ ಮೂರನೇ ಗೆಲುವು ದಾಖಲಿಸಿದೆ. ವಿಶ್ವಕಪ್‌ನಲ್ಲಿ ಅಫ್ಘಾನಿಸ್ತಾನಕ್ಕೆ ಇದು ನಾಲ್ಕನೇ ಗೆಲುವು. ಅಫ್ಘಾನಿಸ್ತಾನದ ಈ ಗೆಲುವಿನ ಮೂಲಕ ವಿಶ್ವಕಪ್ ಪಾಯಿಂಟ್ ಪಟ್ಟಿಯಲ್ಲೂ ಮಹತ್ತರ ಬದಲಾವಣೆಗಳಾಗಿವೆ.

1 / 7
ಅಂಕಪಟ್ಟಿಯಲ್ಲಿ ಟೀಂ ಇಂಡಿಯಾ ಮೊದಲ ಸ್ಥಾನದಲ್ಲಿದೆ. ಏಳರಲ್ಲಿ ಏಳು ಪಂದ್ಯಗಳನ್ನು ಗೆದ್ದಿರುವ ಭಾರತ, 14 ಅಂಕಗಳು ಹಾಗೂ +2.102 ನೆಟ್​ ರನ್​ರೇಟ್ ಹೊಂದಿದೆ. ರೋಹಿತ್ ಪಡೆ ತನ್ನ ಮುಂದಿನ ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾ ಮತ್ತು ನೆದರ್ಲೆಂಡ್ಸ್ ತಂಡಗಳನ್ನು ಎದುರಿಸಲಿದೆ.

2 / 7
ದಕ್ಷಿಣ ಆಫ್ರಿಕಾ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಪ್ರೋಟಿಯಸ್ 7 ಪಂದ್ಯಗಳಲ್ಲಿ 6 ರಲ್ಲಿ ಗೆದ್ದು 12 ಅಂಕ ಹಾಗೂ +2.290 ನೆಟ್​ ರನ್​ರೇಟ್ ಹೊಂದಿದೆ. ಆಫ್ರಿಕಾ ತಂಡ ಸೆಮಿಫೈನಲ್‌ಗೆ ಲಗ್ಗೆ ಇಡಲು ಉಳಿದ ಎರಡು ಪಂದ್ಯಗಳಲ್ಲಿ ಗೆಲುವಿನ ಅಗತ್ಯವಿದೆ. ಆದರೆ, ಇಲ್ಲಿಂದ ಎರಡು ಪಂದ್ಯಗಳಲ್ಲಿ ಸೋತರೂ ಪ್ರೋಟೀಸ್ ಸೆಮಿಫೈನಲ್‌ಗೆ ಹೋಗಬಹುದು. ಇದಕ್ಕಾಗಿ, ಅದು ಇತರ ತಂಡಗಳ ಫಲಿತಾಂಶಗಳ ಮೇಲೆ ಅವಲಂಬಿತವಾಗಬೇಕಿದೆ.

3 / 7
ಪಾಯಿಂಟ್ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಮೂರನೇ ಸ್ಥಾನದಲ್ಲಿದೆ. ಆಡಿರುವ ಆರು ಪಂದ್ಯಗಳಿಂದ 8 ಅಂಕಗಳನ್ನು ಆಸೀಸ್ ಹೊಂದಿದೆ. ಸೆಮಿಫೈನಲ್‌ಗೆ ಹೋಗುವ ಹಾದಿಯಲ್ಲಿ, ವಾಸ್ತವಿಕವಾಗಿ ಎಲ್ಲಾ ಪಂದ್ಯಗಳು ಈಗ ಆಸೀಸ್​ಗೆ ಬಹುಮುಖ್ಯವಾಗಿದೆ. ಇಂದು ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯಲ್ಲಿರುವ ಆಸೀಸ್, ಆ ನಂತರ ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ವಿರುದ್ಧ ಪಂದ್ಯವನ್ನಾಡಬೇಕಿದೆ.

4 / 7
ನ್ಯೂಜಿಲೆಂಡ್ ನಾಲ್ಕನೇ ಸ್ಥಾನದಲ್ಲಿದೆ. ಹ್ಯಾಟ್ರಿಕ್ ಸೋಲಿನೊಂದಿಗೆ ಕಿವೀಸ್ ಭಾರೀ ಒತ್ತಡದಲ್ಲಿದೆ. ಆಡಿರುವ 7 ಪಂದ್ಯಗಳಿಂದ 8 ಅಂಕಗಳನ್ನು ಹೊಂದಿದೆ. ಕಿವೀಸ್ ಪಡೆಗೆ ಎರಡು ಪಂದ್ಯಗಳು ಮಾತ್ರ ಬಾಕಿ ಉಳಿದಿವೆ. ಇಂದು ಪಾಕಿಸ್ತಾನದ ವಿರುದ್ಧ ಕಣಕ್ಕಿಳಿಯಲ್ಲಿರುವ ಕಿವೀಸ್, ನಂತರ ನವೆಂಬರ್ 9 ರಂದು ಶ್ರೀಲಂಕಾ ವಿರುದ್ಧ ಪಂದ್ಯವನ್ನಾಡಲಿದೆ.

5 / 7
ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಅಫ್ಘಾನಿಸ್ತಾನದಂತೆಯೇ 8 ಅಂಕಗಳನ್ನು ಹೊಂದಿದೆ. ನೆಟ್ ರನ್ ರೇಟ್​ನಲ್ಲಿ ಅಫ್ಘಾನಿಸ್ತಾನ ಐದನೇ ಸ್ಥಾನದಲ್ಲಿದೆ. ಅಫ್ಘಾನ್​ಗೆ ಇನ್ನೂ ಎರಡು ಪಂದ್ಯಗಳು ಬಾಕಿ ಇವೆ. ಈ ಎರಡೂ ಕಠಿಣ ಪಂದ್ಯಗಳಾಗಿವೆ. ಒಂದು ಆಸ್ಟ್ರೇಲಿಯಾ ವಿರುದ್ಧವಾಗಿದ್ದರೆ, ಇನ್ನೊಂದು ದಕ್ಷಿಣ ಆಫ್ರಿಕಾ ವಿರುದ್ಧ. ಈ ಎರಡು ಪಂದ್ಯಗಳನ್ನು ಗೆದ್ದರೆ ಅಫ್ಘಾನಿಸ್ತಾನ ತಂಡ ಸೆಮಿಫೈನಲ್‌ಗೆ ಹೋಗುವ ಪ್ರಬಲ ಸಾಧ್ಯತೆಯಿದೆ.

6 / 7
ಪಾಕಿಸ್ತಾನ ಆರನೇ ಸ್ಥಾನದಲ್ಲಿದೆ. ತಂಡದ ಬಳಿ ಕೇವಲ ಆರು ಅಂಕಗಳಿವೆ. ಹೀಗಾಗಿ ಪಾಕಿಸ್ತಾನಕ್ಕೆ ಸೆಮಿಫೈನಲ್‌ಗೆ  ಹೋಗುವ ಅವಕಾಶ ಕಡಿಮೆ ಇದೆ. ಪಾಕ್ ತಂಡ ಇಂದು ನ್ಯೂಜಿಲೆಂಡ್ ವಿರುದ್ಧ, ನಂತರ ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯಲ್ಲಿದೆ. ಈ ಎರಡು ಪಂದ್ಯಗಳಲ್ಲಿ ಪಾಕಿಸ್ತಾನ ಗೆದ್ದರೆ ಮತ್ತು ನ್ಯೂಜಿಲೆಂಡ್ ಕೊನೆಯ ಪಂದ್ಯದಲ್ಲೂ ಸೋತರೆ. ಆಸ್ಟ್ರೇಲಿಯ ಅಥವಾ ಅಫ್ಘಾನಿಸ್ತಾನ ಸತತ ಸೋಲನುಭವಿಸಿದರೆ, ಪಾಕಿಸ್ತಾನಕ್ಕೆ ಸೆಮಿಫೈನಲ್‌ಗೆ ಪ್ರವೇಶಿಸುವ ಅವಕಾಶವಿದೆ.

7 / 7
Follow us
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್

ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್

ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ

ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ

ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು

ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ

ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ

ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ

ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ

ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ