ಆಂಗ್ಲರಿಗೆ ಮರ್ಮಾಘಾತ ನೀಡಿದ ಅಫ್ಘಾನ್; ಪಾಯಿಂಟ್ ಪಟ್ಟಿಯಲ್ಲೂ ಅಚ್ಚರಿಯ ಬದಲಾವಣೆ
ICC World Cup 2023 Updated Points Table: ಇಂಗ್ಲೆಂಡ್ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ 69 ರನ್‌ಗಳ ಜಯ ಸಾಧಿಸಿದೆ. ಅಫ್ಘಾನಿಸ್ತಾನ ಬೌಲರ್‌ಗಳ ಮುಂದೆ ಇಂಗ್ಲೆಂಡ್ ಆಟಗಾರ ಮಂಡಿಯೂರಿದ್ದಾರೆ. ಈ ಗೆಲುವಿನೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಏರಿಳಿತ ಕಂಡಿದೆ.
1 / 8
ಇಂಗ್ಲೆಂಡ್ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ 69 ರನ್‌ಗಳ ಜಯ ಸಾಧಿಸಿದೆ. ಅಫ್ಘಾನಿಸ್ತಾನ ಬೌಲರ್‌ಗಳ ಮುಂದೆ ಇಂಗ್ಲೆಂಡ್ ಆಟಗಾರ ಮಂಡಿಯೂರಿದ್ದಾರೆ. ಈ ಗೆಲುವಿನೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಏರಿಳಿತ ಕಂಡಿದೆ.
2 / 8
ಅಂಕಪಟ್ಟಿಯಲ್ಲಿ ಭಾರತ ಅಗ್ರ ಸ್ಥಾನದಲ್ಲಿ ಮುಂದುವರಿದಿದ್ದು, ಮೋದಿ ಸ್ಟೇಡಿಯಂನಲ್ಲಿ ಪಾಕಿಸ್ತಾನವನ್ನು ಏಳು ವಿಕೆಟ್‌ಗಳಿಂದ ಮಣಿಸಿದ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಪ್ರಸ್ತುತ +1.821 ನೆಟ್ ರನ್ ರೇಟ್ ಹಾಗೂ ಮೂರು ಪಂದ್ಯಗಳಿಂದ ಆರು ಅಂಕಗಳೊಂದಿಗೆ ಅಗ್ರಸ್ಥಾನ ಪಡೆದುಕೊಂಡಿದೆ.
3 / 8
ಕಳೆದ ಬಾರಿಯ ರನ್ನರ್ ಅಪ್ ನ್ಯೂಜಿಲೆಂಡ್ ಕೂಡ ಮೂರು ಪಂದ್ಯಗಳಿಂದ ಆರು ಪಾಯಿಂಟ್ ಹಾಗೂ +1.604 ನೆಟ್ ರನ್ ರೇಟ್ನೊಂದಿಗೆ ಎರಡನೇ ಸ್ಥಾನದಲ್ಲಿದೆ.
4 / 8
ಈ ವಿಶ್ವಕಪ್‌ನಲ್ಲಿ ಬಲಿಷ್ಠವಾಗಿ ಕಾಣುತ್ತಿರುವ ದಕ್ಷಿಣ ಆಫ್ರಿಕಾ ಆಡಿರುವ ಎರಡು ಪಂದ್ಯಗಳಿಂದ ನಾಲ್ಕು ಅಂಕ ಹಾಗೂ +2.360 ನೆಟ್ ರನ್ ರೇಟ್ನೊಂದಿಗೆ ಮೂರನೇ ಸ್ಥಾನದಲ್ಲಿದೆ.
5 / 8
ಕಳೆದ ಪಂದ್ಯದಲ್ಲಿ ಭಾರತದ ವಿರುದ್ಧ ತನ್ನ ಮೊದಲ ಪಂದ್ಯವನ್ನು ಸೋತ ಪಾಕಿಸ್ತಾನ ಮೂರು ಪಂದ್ಯಗಳಿಂದ ನಾಲ್ಕು ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.
6 / 8
ನಿನ್ನೆಯ ಪಂದ್ಯದಲ್ಲಿ ಅಫ್ಘಾನಿಸ್ತಾನದ ವಿರುದ್ಧ ಹೀನಾಯ ಸೋಲನುಭಿಸಿದ ಇಂಗ್ಲೆಂಡ್ ತಂಡ ಆಡಿರುವ ಮೂರು ಪಂದ್ಯಗಳಿಂದ ಎರಡು ಸೋಲು ಹಾಗೂ ಒಂದು ಗೆಲುವಿನೊಂದಿಗೆ 5ನೇ ಸ್ಥಾನದಲ್ಲಿದೆ.
7 / 8
ಈ ಹಿಂದೆ ಕೊನೆಯ ಸ್ಥಾನದಲ್ಲಿದ್ದ ಅಫ್ಘಾನಿಸ್ತಾನ ತಂಡ ಇಂಗ್ಲೆಂಡ್ ವಿರುದ್ಧದ ಗೆಲುವಿನೊಂದಿಗೆ ಆರನೇ ಸ್ಥಾನಕ್ಕೆ ಏರಿದೆ. ಅಫ್ಘಾನಿಸ್ತಾನ ತಂಡ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಸೋತಿದ್ದು, ಇಂದಿನ ಪಂದ್ಯವನ್ನು ಗೆಲ್ಲುವ ಮೂಲಕ ವಿಶ್ವಕಪ್‌ನಲ್ಲಿ ಮೊದಲ ಗೆಲುವು ಸಾಧಿಸಿದೆ.
8 / 8
ಉಳಿದಂತೆ ಬಾಂಗ್ಲಾದೇಶ, ಶ್ರೀಲಂಕಾ, ನೆದರ್ಲೆಂಡ್ಸ್, ಆಸ್ಟ್ರೇಲಿಯಾ ಹಾಗೂ ಅಫ್ಘಾನಿಸ್ತಾನ ಕ್ರಮವಾಗಿ 6,7,8,9,10 ನೇ ಸ್ಥಾನದಲ್ಲಿವೆ.