
ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ವಿಶ್ವಕಪ್ನ ಐದನೇ ಪಂದ್ಯದಲ್ಲಿ ಆತಿಥೇಯ ಟೀಂ ಇಂಡಿಯಾ, ಬಲಿಷ್ಠ ಆಸೀಸ್ ತಂಡವನ್ನು 6 ವಿಕೆಟ್ಗಳಿಂದ ಮಣಿಸಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಟೀಂ ಇಂಡಿಯಾ ಗೆಲುವಿಗೆ 200 ರನ್‌ಗಳ ಸವಾಲನ್ನು ನೀಡಿತ್ತು. ಈ ಸವಾಲನ್ನು ಟೀಂ ಇಂಡಿಯಾ 41.2 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಪೂರ್ಣಗೊಳಿಸಿತು.

ಈ ಗೆಲುವಿನೊಂದಿಗೆ ವಿಶ್ವಕಪ್ ಪಾಯಿಂಟ್ ಪಟ್ಟಿಯಲ್ಲಿ ಗಮನಾರ್ಹ ಬದಲಾವಣೆ ಕಂಡುಬಂದಿದ್ದು, ಬಲಿಷ್ಠ ಆಸೀಸ್ ಪಡೆಯನ್ನು 6 ವಿಕೆಟ್ಗಳಿಂದ ಮಣಿಸಿದರೂ ಭಾರತಕ್ಕೆ ಟಾಪ್ 4ರಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಿಲ್ಲ.

ವಿಶ್ವಕಪ್ ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ನ್ಯೂಜಿಲೆಂಡ್ ತಂಡ ಆಡಿರುವ ಏಕೈಕ ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್ ತಂಡವನ್ನು ಹೀನಾಯವಾಗಿ ಸೋಲಿಸಿತು. ಈ ಮೂಲಕ +2.149 ನೆಟ್ ರನ್ರೇಟ್ ಹೊಂದಿರುವ ಕಿವೀಸ್ 2 ಅಂಕ ಪಡೆದುಕೊಂಡಿದೆ.

ಶ್ರೀಲಂಕಾ ತಂಡವನ್ನು 100 ಕ್ಕೂ ಅಧಿಕ ರನ್ಗಳಿಂದ ಮಣಿಸಿದ ದಕ್ಷಿಣ ಆಫ್ರಿಕಾ +2.040 ನೆಟ್ ರನ್ ರೇಟ್ ಜೊತೆಗೆ 2 ಅಂಕ ಸಂಪಾದಿಸಿ ಪಾಯಿಂಟ್ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ.

ನೆದರ್ಲೆಂಡ್ಸ್ ತಂಡದ ವಿರುದ್ಧ ಭರ್ಜರಿ ಜಯ ಗಳಿಸಿದ ಪಾಕಿಸ್ತಾನ +1.620 ನೆಟ್ ರನ್ರೇಟ್ ಜೊತೆಗೆ 2 ಅಂಕ ಸಂಪಾದಿಸಿ ಪಾಯಿಂಟ್ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ.

ನಾಲ್ಕನೇ ಸ್ಥಾನದಲ್ಲಿರುವ ಬಾಂಗ್ಲಾದೇ ಆಡಿದ ಏಕೈಕ ಪಂದ್ಯದಲ್ಲಿ ಅಫ್ಘಾನಿಸ್ತಾನವನ್ನು ಮಣಿಸಿ +1.438 ನೆಟ್ ರನ್ರೇಟ್ ಜೊತೆಗೆ 2 ಅಂಕ ಸಂಪಾದಿಸಿ ಪಾಯಿಂಟ್ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.

ಇನ್ನು ಐದನೇ ಸ್ಥಾನದಲ್ಲಿರುವ ಭಾರತ +0.883 ನೆಟ್ ರನ್ರೇಟ್ ಜೊತೆಗೆ 2 ಅಂಕ ಸಂಪಾದಿಸಿ 5ನೇ ಸ್ಥಾನದಲ್ಲಿದೆ.

ಉಳಿದಂತೆ ತಲಾ ಒಂದೊಂದು ಪಂದ್ಯ ಸೋತಿರುವ ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ನೆದರ್ಲೆಂಡ್ಸ್, ಶ್ರೀಲಂಕಾ, ಇಂಗ್ಲೆಂಡ್ ಕ್ರಮವಾಗಿ 6,7,8,9,10ನೇ ಸ್ಥಾನ ಪಡೆದುಕೊಂಡಿವೆ.
Published On - 10:36 am, Mon, 9 October 23