ಶನಿವಾರ ನಡೆದ ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನವನ್ನು ಏಳು ವಿಕೆಟ್‌ಗಳಿಂದ ಸೋಲಿಸಿದೆ. ಈ ಮೂಲಕ ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದೆ.
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ ಕೇವಲ 191 ರನ್‌ಗಳಿಗೆ ಆಲೌಟ್ ಆಯಿತು. ನಂತರ ರೋಹಿತ್ ಅವರ ಅದ್ಭುತ ಬ್ಯಾಟಿಂಗ್ ಆಧಾರದ ಮೇಲೆ ಭಾರತ 31ನೇ ಓವರ್‌ನಲ್ಲಿ ಮೂರು ವಿಕೆಟ್ ಕಳೆದುಕೊಂಡು ಪಂದ್ಯವನ್ನು ಗೆದ್ದುಕೊಂಡಿತು.
ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಈ ವಿಶ್ವಕಪ್‌ನಲ್ಲಿ ಸತತ ಮೂರನೇ ಜಯವನ್ನು ದಾಖಲಿಸಿದ್ದು, ಪಾಯಿಂಟ್ ಪಟ್ಟಿಯಲ್ಲೂ ಭರ್ಜರಿ ಮುಂಬಡ್ತಿ ಪಡೆದಿದೆ. ಈ ಹಿಂದೆ ಮೂರನೇ ಸ್ಥಾನದಲ್ಲಿದ್ದ ಭಾರತ, ಈಗ ಅಗ್ರಸ್ಥಾನಕ್ಕೇರಿದೆ.
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಾಕಿಸ್ತಾನವನ್ನು ಏಳು ವಿಕೆಟ್‌ಗಳಿಂದ ಮಣಿಸಿದ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಪ್ರಸ್ತುತ +1.821 ನೆಟ್ ರನ್ ರೇಟ್ ಹಾಗೂ ಮೂರು ಪಂದ್ಯಗಳಿಂದ ಆರು ಅಂಕಗಳೊಂದಿಗೆ ಅಗ್ರಸ್ಥಾನ ಪಡೆದುಕೊಂಡಿದೆ.
ನ್ಯೂಜಿಲೆಂಡ್ ಕೂಡ ಮೂರು ಪಂದ್ಯಗಳಿಂದ ಆರು ಪಾಯಿಂಟ್‌ಗಳನ್ನು ಹೊಂದಿದೆ ಆದರೆ +1.604 ನೆಟ್ ರನ್ ರೇಟ್ನಿಂದಾಗಿ ಎರಡನೇ ಸ್ಥಾನದಲ್ಲಿದೆ.
ದಕ್ಷಿಣ ಆಫ್ರಿಕಾ ಆಡಿರುವ ಎರಡು ಪಂದ್ಯಗಳಿಂದ ನಾಲ್ಕು ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ ಆದರೆ ಅದರ ನೆಟ್ ರನ್ ರೇಟ್ (+2.360) ಭಾರತ ಹಾಗೂ ನ್ಯೂಜಿಲೆಂಡ್ಗಿಂತ ಅದ್ಭುತವಾಗಿದೆ.
ಇನ್ನು ಭಾರತದ ವಿರುದ್ಧ ತನ್ನ ಮೊದಲ ಪಂದ್ಯವನ್ನು ಸೋತ ಪಾಕಿಸ್ತಾನ ಮೂರು ಪಂದ್ಯಗಳಿಂದ ನಾಲ್ಕು ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.
ಆಡಿರುವ ಎರಡು ಪಂದ್ಯಗಳಿಂದ ಒಂದು ಸೋಲು ಹಾಗೂ ಒಂದು ಗೆಲುವು ದಾಖಲಿಸಿರುವ ಹಾಲಿ ಚಾಂಪಿಯನ್ಸ್ ಇಂಗ್ಲೆಂಡ್ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.
ಉಳಿದಂತೆ ಬಾಂಗ್ಲಾದೇಶ, ಶ್ರೀಲಂಕಾ, ನೆದರ್ಲೆಂಡ್ಸ್, ಆಸ್ಟ್ರೇಲಿಯಾ ಹಾಗೂ ಅಫ್ಘಾನಿಸ್ತಾನ ಕ್ರಮವಾಗಿ 6,7,8,9,10 ನೇ ಸ್ಥಾನದಲ್ಲಿವೆ.