AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC ಅಂಕ ಪಟ್ಟಿಯಲ್ಲಿ ಮೇಲೇರಿದ ಟೀಮ್ ಇಂಡಿಯಾ

WTC 2025-27 Points Table: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ಒಟ್ಟು 9 ತಂಡಗಳು ಕಣಕ್ಕಿಳಿಯುತ್ತಿವೆ. 2025 ರಿಂದ 2027 ರವರೆಗೆ ನಡೆಯಲಿರುವ ಈ ಸರಣಿಯಲ್ಲಿ ಅತ್ಯಧಿಕ ಶೇಕಡಾವಾರು ಅಂಕಗಳನ್ನು ಪಡೆಯುವ ಮೊದಲೆರಡು ತಂಡಗಳು ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್​ನ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

ಝಾಹಿರ್ ಯೂಸುಫ್
|

Updated on: Jul 28, 2025 | 10:09 AM

Share
ಭಾರತ ಮತ್ತು ಇಂಗ್ಲೆಂಡ್ ನಡುವಣ 4ನೇ ಟೆಸ್ಟ್ ಪಂದ್ಯದ ಮುಕ್ತಾಯದ ಬೆನ್ನಲ್ಲೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ (WTC 2025-27)​ ಸರಣಿಯ ನೂತನ ಪಾಯಿಂಟ್ಸ್ ಟೇಬಲ್ ಪ್ರಕಟವಾಗಿದೆ. ಮ್ಯಾಂಚೆಸ್ಟರ್​ ಟೆಸ್ಟ್​​ನಲ್ಲಿ ಡ್ರಾ ಸಾಧಿಸುವಲ್ಲಿ ಯಶಸ್ವಿಯಾಗಿರುವ ಟೀಮ್ ಇಂಡಿಯಾ WTC ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಿದೆ. ಅದರಂತೆ ನೂತನ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿ ಈ ಕೆಳಗಿನಂತಿದೆ...

1 / 7
1- ಆಸ್ಟ್ರೇಲಿಯಾ: ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿ ಆಸ್ಟ್ರೇಲಿಯಾ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ನೂತನ ಸರಣಿಯಲ್ಲಿ ಶುಭಾರಂಭ ಮಾಡಿದೆ. ಈ ಶುಭಾರಂಭದೊಂದಿಗೆ ಶೇಕಡಾವಾರು 100 ಅಂಕಗಳೊಂದಿಗೆ ಆಸೀಸ್ ಪಡೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿದೆ.

2 / 7
2- ಶ್ರೀಲಂಕಾ: ಬಾಂಗ್ಲಾದೇಶ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಒಂದು ಗೆಲುವು ಹಾಗೂ ಒಂದು ಡ್ರಾ ಸಾಧಿಸಿರುವ ಶ್ರೀಲಂಕಾ ತಂಡವು  ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸರಣಿಯ ನೂತನ ಅಂಕ ಪಟ್ಟಿಯಲ್ಲಿ ಶೇಕಡಾವಾರು 66.67 ಅಂಕಗಳನ್ನು ಪಡೆದಿದ್ದು, ಈ ಮೂಲಕ ದ್ವಿತೀಯ ಸ್ಥಾನ ಅಲಂಕರಿಸಿದೆ.

3 / 7
3- ಇಂಗ್ಲೆಂಡ್: ಟೀಮ್ ಇಂಡಿಯಾ ವಿರುದ್ಧದ ಐದು ಪಂದ್ಯಗಳ ಅ್ಯಂಡರ್ಸನ್-ತೆಂಡೂಲ್ಕರ್ ಸರಣಿಯಲ್ಲಿ 2 ಗೆಲುವು ದಾಖಲಿಸಿರುವ ಇಂಗ್ಲೆಂಡ್ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಶೇಕಡವಾರು 54.17 ಅಂಕಗಳನ್ನು ಹೊಂದಿರುವ ಆಂಗ್ಲರು ಭಾರತದ ವಿರುದ್ಧದ ಮುಂದಿನ ಪಂದ್ಯದಲ್ಲಿ ಗೆದ್ದರೆ ದ್ವಿತೀಯ ಸ್ಥಾನಕ್ಕೇರಬಹುದು.

4 / 7
4- ಭಾರತ: ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಸರಣಿಯ ದ್ವಿತೀಯ ಟೆಸ್ಟ್​ನಲ್ಲಿ ಜಯ ಗಳಿಸಿರುವ ಟೀಮ್ ಇಂಡಿಯಾ ನಾಲ್ಕನೇ ಪಂದ್ಯವನ್ನು ಡ್ರಾನಲ್ಲಿ ಕೊನೆಗೊಳಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಭಾರತ ತಂಡವು 33.33 ಶೇಕಡಾವಾರು ಅಂಕಗಳೊಂದಿಗೆ WTC ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಅಲಂಕರಿಸಿದೆ. 

5 / 7
5- ಬಾಂಗ್ಲಾದೇಶ್: ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ನಲ್ಲಿ ಡ್ರಾ ಸಾಧಿಸಿದ್ದ ಬಾಂಗ್ಲಾದೇಶ್ ತಂಡವು ದ್ವಿತೀಯ ಪಂದ್ಯದಲ್ಲಿ ಸೋಲನುಭವಿಸಿದ್ದರು. ಅತ್ತ ಡ್ರಾ ಸಾಧಿಸುವ ಮೂಲಕ ಬಾಂಗ್ಲಾದೇಶ್ ತಂಡವು ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಸರಣಿಯ ನೂತನ ಅಂಕ ಪಟ್ಟಿಯಲ್ಲಿ 16.67 ಶೇಕಡಾವಾರು ಅಂಕಗಳೊಂದಿಗೆ ಐದನೇ ಸ್ಥಾನ ಅಲಂಕರಿಸಿದೆ.

6 / 7
ಇನ್ನು ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳನ್ನು ಸೋತಿರುವ ವೆಸ್ಟ್ ಇಂಡೀಸ್ ತಂಡ ಇನ್ನೂ ಸಹ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲಿ ಪಾಯಿಂಟ್ಸ್ ಖಾತೆ ತೆರೆದಿಲ್ಲ. ಹಾಗೆಯೇ ನ್ಯೂಝಿಲೆಂಡ್, ಪಾಕಿಸ್ತಾನ್ ಹಾಗೂ ಸೌತ್ ಆಫ್ರಿಕಾ ತಂಡಗಳು ಇನ್ನೂ ಸಹ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 205-2027ರ ಸರಣಿಯಲ್ಲಿ ಮೊದಲ ಪಂದ್ಯವಾಡಿಲ್ಲ.

7 / 7
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ