AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC 2023 Final Timings: ಭಾರತದಲ್ಲಿ ಬೆಳಗ್ಗೆ ಪ್ರಸಾರವಾಗುವುದಿಲ್ಲ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್: ಹಾಗಾದರೆ ಎಷ್ಟು ಗಂಟೆಗೆ?

India vs Australia Final: ಸಾಕಷ್ಟು ರೋಚಕತೆ ಸೃಷ್ಟಿಸಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ಈ ಹಿಂದಿನಂತೆ ಭಾರತದಲ್ಲಿ ಬೆಳಗಿನ ಜಾವ ಶುರುವಾಗುದಿಲ್ಲ.

Vinay Bhat
|

Updated on: Jun 06, 2023 | 9:48 AM

Share
ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಬಹುನಿರೀಕ್ಷಿತ ಐಸಿಸಿ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಜೂನ್ 7 ರಿಂದ 11 ರ ವರೆಗೆ ಈ ಮಹತ್ವದ ಪಂದ್ಯ ನಡೆಯಲಿದ್ದು, ಇನ್ನು ಕೇವಲ ಒಂದು ದಿನವಷ್ಟೇ ಬಾಕಿಯಿದೆ.

1 / 7
ಈಗಾಗಲೇ ಉಭಯ ತಂಡಗಳು ಲಂಡನ್​ನ ಪ್ರತಿಷ್ಠಿತ ಕೆನ್ನಿಂಗ್ಟನ್ ಓವಲ್ ಮೈದಾನಕ್ಕೆ ತಲುಪಿದ್ದು ಅಭ್ಯಾಸದಲ್ಲಿ ನಿರತರಾಗಿದ್ದಾರೆ. ರೋಹಿತ್ ಪಡೆ ಹೊಸ ವಾತಾವರಣಕ್ಕೆ ಹೊಂದಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

2 / 7
143 ವರ್ಷಗಳ ಇತಿಹಾಸ ಹೊಂದಿರುವ ಓವಲ್‌ ಗ್ರೌಂಡ್‌ನಲ್ಲಿ ಇದೇ ಮೊದಲ ಬಾರಿಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನ ಫೈನಲ್‌ ನಡೆಯುತ್ತಿದೆ. ಅಲ್ಲದೆ ಈ ಅಂಗಳದಲ್ಲಿ ಬೌಲರ್‌ಗಳಿಗೆ ಪಿಚ್‌ ಹೇಗೆ ವರ್ತಿಸುತ್ತದೆ ಎಂಬುದು ಇನ್ನೂ ಗೊತ್ತಾಗದ ಸಂಗತಿ.

3 / 7
ವಿಶೇಷ ಎಂದರೆ ಐಸಿಸಿ ಟೆಸ್ಟ್ ಚಾಂಪಿಯನ್​ಶಿಪ್ ಟ್ರೋಫಿ ಗೆಲ್ಲುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾದರೆ ಇದುವರೆಗಿನ ಕ್ರಿಕೆಟ್ ಇತಿಹಾಸದಲ್ಲಿ ಯಾವ ತಂಡವೂ ಮಾಡಲಾಗದ ಅಪರೂಪದ ದಾಖಲೆಯೊಂದನ್ನು ಬರೆಯಲಿದೆ.

4 / 7
ಆಸೀಸ್ ವಿರುದ್ಧ ಭಾರತ ಟೆಸ್ಟ್ ಚಾಂಪಿಯನ್​ಶಿಪ್ ಗೆದ್ದರೆ, ಏಕದಿನ, ಟಿ20 ಮತ್ತು ಟೆಸ್ಟ್ ಮೂರು ಮಾದರಿಗಳಲ್ಲಿ ವಿಶ್ವಕಪ್ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಜೊತೆಗೆ ಭಾರತ ತಂಡ 2013ರ ಬಳಿಕ ಒಂದೇ ಒಂದು ಐಸಿಸಿ ಟ್ರೋಫಿ ಗೆಲ್ಲದ ಬರವನ್ನು ನೀಗಿಸಿಕೊಳ್ಳಿದೆ.

5 / 7
ಹೀಗೆ ಸಾಕಷ್ಟು ರೋಚಕತೆ ಸೃಷ್ಟಿಸಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ಈ ಹಿಂದಿನಂತೆ ಭಾರತದಲ್ಲಿ ಬೆಳಗಿನ ಜಾವ ಶುರುವಾಗುದಿಲ್ಲ. ಇಂಗ್ಲೆಂಡ್​ನಲ್ಲಿ ಬೆಳಗ್ಗೆ 10:30ಕ್ಕೆ ಆರಂಭವಾದರೆ ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಮಧ್ಯಾಹ್ನ 3 ಗಂಟೆಗೆ ಶುರುವಾಗಲಿದೆ. 2:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.

6 / 7
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್‌ ಪಂದ್ಯ ಸ್ಟಾರ್‌ ಸ್ಪೋರ್ಟ್ಸ್‌ ಟೆಲಿವಿಷನ್‌ ವಾಹಿನಿಯಲ್ಲಿ ನೇರ ಪ್ರಸಾರವಾಗಲಿದೆ. ಲೈವ್‌ ಸ್ಟ್ರೀಮಿಂಗ್‌ ಡಿಸ್ನಿ ಪ್ಲಸ್‌ ಹಾಟ್‌ ಸ್ಟಾರ್‌ ಮೊಬೈಲ್‌ ಅಪ್ಲಿಕೇಷನ್‌ನಲ್ಲಿ ನೋಡಬಹುದು. ಡಿಡಿ ದೂರದರ್ಶನದಲ್ಲೂ ನೇರಪ್ರಸಾರ ಕಾಣಲಿದೆ.

7 / 7
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ