- Kannada News Photo gallery Cricket photos ICC WTC Points Table 2025: Team India slip to 4th Standing
WTC ಅಂಕಪಟ್ಟಿಯಲ್ಲಿ ಕೆಳಗಿಳಿದ ಟೀಮ್ ಇಂಡಿಯಾ
WTC Points Table: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯ ನೂತನ ಪಾಯಿಂಟ್ಸ್ ಟೇಬಲ್ ಬಿಡುಗಡೆಯಾಗಿದೆ. ಹೊಸ ಅಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ಟಾಪ್-5 ನಲ್ಲಿ ಕಾಣಿಸಿಕೊಂಡಿದೆ. ಆದರೆ ಈ ಬಾರಿ ಭಾರತ ತಂಡವು ಒಂದು ಸ್ಥಾನ ಕುಸಿತ ಕಂಡಿದೆ. ಮತ್ತೊಂದೆಡೆ ಆಸ್ಟ್ರೇಲಿಯಾ ತಂಡ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ.
Updated on: Nov 17, 2025 | 10:03 AM

ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಬ್ಯಾಕ್ ಟು ಬ್ಯಾಕ್ ಎರಡು ಜಯ ಸಾಧಿಸಿದ್ದ ಟೀಮ್ ಇಂಡಿಯಾ ಇದೀಗ ಸೌತ್ ಆಫ್ರಿಕಾ ವಿರುದ್ಧದ ಮೊದಲ ಪಂದ್ಯದಲ್ಲೇ ಸೋತಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಕೊನೆಯ ಇನಿಂಗ್ಸ್ನಲ್ಲಿ 124 ರನ್ ಬೆನ್ನತ್ತಲಾಗದೇ ಭಾರತ ತಂಡವು 30 ರನ್ಗಳಿಂದ ಸೋಲೊಪ್ಪಿಕೊಂಡಿದೆ.

ಈ ಹೀನಾಯ ಸೋಲಿನ ಬೆನ್ನಲ್ಲೇ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯ ನೂತನ ಅಂಕ ಪಟ್ಟಿ ಬಿಡುಗಡೆಯಾಗಿದೆ. ಕಳೆದ ಬಾರಿ ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದ ಟೀಮ್ ಇಂಡಿಯಾ ಈ ಬಾರಿ ಒಂದು ಸ್ಥಾನ ಕುಸಿತ ಕಂಡಿದ್ದು, ಸೌತ್ ಆಫ್ರಿಕಾ ತಂಡ ದ್ವಿತೀಯ ಸ್ಥಾನಕ್ಕೇರಿದೆ.

ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ನೂತನ ಅಂಕ ಪಟ್ಟಿಯಲ್ಲಿ ಆಸ್ಟ್ರೇಲಿಯಾ ತಂಡ ಮೊದಲ ಸ್ಥಾನದಲ್ಲಿದೆ. ಆಸೀಸ್ ಪಡೆ ಈವರೆಗೆ 7 ಪಂದ್ಯಗಳನ್ನು ಆಡಿದ್ದು, ಈ ವೇಳೆ 6 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಇನ್ನು ಒಂದು ಪಂದ್ಯದಲ್ಲಿ ಸೋತಿರುವ ಆಸ್ಟ್ರೇಲಿಯಾ ಇದೀಗ 85.710 ಶೇಕಡಾವಾರು ಅಂಕಗಳೊಂದಿಗೆ ಮೊದಲ ಸ್ಥಾನವನ್ನು ಕಾಯ್ದುಕೊಂಡಿದೆ.

ಟೀಮ್ ಇಂಡಿಯಾವನ್ನು 2-0 ಅಂತರದಿಂದ ಸೋಲಿಸಿರುವ ಸೌತ್ ಆಫ್ರಿಕಾ ತಂಡ ಮೂರನೇ ಸ್ಥಾನದಲ್ಲಿದೆ. ಆಫ್ರಿಕಾ ಪಡೆ ಈವರೆಗೆ 4 ಟೆಸ್ಟ್ ಪಂದ್ಯಗಳನ್ನಾಡಿದ್ದು, ಈ ನಾಲ್ಕು ಮ್ಯಾಚ್ಗಳಲ್ಲಿ 3 ಜಯ ಸಾಧಿಸಿದೆ. ಈ ಮೂಲಕ 75 ಶೇಕಡಾವಾರಿನೊಂದಿಗೆ ಸೌತ್ ಆಫ್ರಿಕಾ ತಂಡ ತೃತೀಯ ಸ್ಥಾನವನ್ನು ಅಲಂಕರಿಸಿದೆ.

ಹಾಗೆಯೇ ಶ್ರೀಲಂಕಾ ತಂಡ ನಾಲ್ಕನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಲಂಕಾ ಪಡೆ ಕೂಡ ಈವರೆಗೆ 2 ಪಂದ್ಯಗಳನ್ನು ಮಾತ್ರ ಆಡಿದ್ದು, ಈ ಮ್ಯಾಚ್ಗಳಲ್ಲಿ ಒಂದು ಜಯ ಹಾಗೂ ಒಂದು ಡ್ರಾನೊಂದಿಗೆ 66.67 ಶೇಕಡಾವಾರು ಅಂಕಗಳನ್ನು ಪಡೆದುಕೊಂಡಿದೆ.

ಇನ್ನು ಟೀಮ್ ಇಂಡಿಯಾ ಈವರೆಗೆ 9 ಪಂದ್ಯಗಳಲ್ಲಿ 4 ಗೆಲುವು ಮತ್ತು ಒಂದು ಡ್ರಾ ಸಾಧಿಸಿದೆ. ಇನ್ನುಳಿದ 4 ಮ್ಯಾಚ್ಗಳಲ್ಲೂ ಹೀನಾಯ ಸೋಲನುಭವಿಸಿದೆ. ಈ ಸೋಲು-ಗೆಲುವುಗಳೊಂದಿಗೆ 48.150 ಶೇಕಡಾವಾರು ಅಂಕ ಪಡೆದಿರುವ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯ ಅಂಕ ಪಟ್ಟಿಯಲ್ಲಿ ಆರನೇ ಸ್ಥಾನಕ್ಕೆ ಕುಸಿದಿದೆ.

ಐದನೇ ಸ್ಥಾನದಲ್ಲಿ ಈ ಬಾರಿ ಪಾಕಿಸ್ತಾನ್ ತಂಡ ಕಾಣಿಸಿಕೊಂಡಿದೆ. ಪಾಕ್ ಪಡೆ ಆಡಿರುವ 2 ಮ್ಯಾಚ್ಗಳಲ್ಲಿ ಒಂದು ಜಯ ಹಾಗೂ ಒಂದು ಸೋಲಿನೊಂದಿಗೆ 50 ಶೇಕಡಾವಾರು ಪಡೆದುಕೊಂಡಿದೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯ ಅಂಕ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೇರಿದೆ.
