AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌: ಜಾರಿದ ಶುಭ್​ಮನ್ ಗಿಲ್, ಜಸ್ಪ್ರೀತ್ ಬುಮ್ರಾ

ಐಸಿಸಿ ನೂತನ ಟೆಸ್ಟ್ ರ್ಯಾಂಕಿಂಗ್ ಬಿಡುಗಡೆಯಾಗಿದ್ದು, ಭಾರತದ ಶುಭ್​ಮನ್ ಗಿಲ್ ಮತ್ತು ಜಸ್ಪ್ರೀತ್ ಬುಮ್ರಾ ಶ್ರೇಯಾಂಕದಲ್ಲಿ ಕುಸಿತ ಕಂಡಿದ್ದಾರೆ. ಬುಮ್ರಾ ಗಾಯದಿಂದಾಗಿ ಮೂರನೇ ಸ್ಥಾನಕ್ಕೆ ಕುಸಿದರೆ, ಗಿಲ್ ಕಳಪೆ ಪ್ರದರ್ಶನದಿಂದ ಒಂಬತ್ತನೇ ಸ್ಥಾನಕ್ಕೆ ತಲುಪಿದ್ದಾರೆ. ಇಂಗ್ಲೆಂಡ್‌ನ ಅಲಿ ರಾಬಿನ್ಸನ್ ಟಾಪ್-5 ಪ್ರವೇಶಿಸಿದ್ದಾರೆ. ಶ್ರೀಲಂಕಾದ ಸೋನಲ್ ದಿನುಷಾ ಮತ್ತು ಕನ್ನಡಿಗ ದೇವದತ್ ಪಡಿಕ್ಕಲ್ ಗಮನಾರ್ಹ ಜಿಗಿತ ಕಂಡಿದ್ದಾರೆ.

ಪೃಥ್ವಿಶಂಕರ
|

Updated on: Sep 02, 2026 | 4:59 PM

Share
ಐಸಿಸಿ ನೂತನ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಶ್ರೇಯಾಂಕದಲ್ಲಿ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಮತ್ತು ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಕುಸಿತ ಕಂಡಿದ್ದಾರೆ. ಅದೇ ಸಮಯದಲ್ಲಿ, ಇಂಗ್ಲೆಂಡ್ ಬೌಲರ್ ಅಲಿ ರಾಬಿನ್ಸನ್ ಟೆಸ್ಟ್ ಬೌಲರ್​ಗಳ ರ್ಯಾಂಕಿಂಗ್​ನಲ್ಲಿ ಟಾಪ್ -5 ರೊಳಗೆ ಸ್ಥಾನ ಪಡೆದಿದ್ದರೆ, ಜಸ್ಪ್ರೀತ್ ಬುಮ್ರಾ ಸತತ ಎರಡನೇ ವಾರವೂ ಒಂದು ಸ್ಥಾನವನ್ನು ಕಳೆದುಕೊಂಡಿದ್ದಾರೆ(PC-PTI).

1 / 6
ಗಾಯದ ಕಾರಣದಿಂದಾಗಿ ಕಳೆದ ಮೂರು ಟೆಸ್ಟ್ ಪಂದ್ಯಗಳನ್ನು ಆಡದ ಬುಮ್ರಾ ಐಸಿಸಿ ಬೌಲಿಂಗ್ ಶ್ರೇಯಾಂಕದಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ನ್ಯೂಜಿಲೆಂಡ್ ವೇಗಿ ಮ್ಯಾಟ್ ಹೆನ್ರಿ ಬುಮ್ರಾ ಅವರನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ತಲುಪಿದ್ದಾರೆ. ಬುಮ್ರಾ ಮೈದಾನಕ್ಕೆ ಇಳಿಯದ ಕಾರಣ ರ್ಯಾಂಕಿಂಗ್ ಪಟ್ಟಿಯಲ್ಲಿ ಕುಸಿತ ಕಂಡಿದ್ದಾರೆ(PC-PTI).

2 / 6
ಹಾಗೆಯೇ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಪ್ರದರ್ಶನ ನೀಡುವಲ್ಲಿ ವಿಫಲರಾದ ನಾಯಕ ಶುಭ್​ಮನ್ ಗಿಲ್ ಕೂಡ ಶ್ರೇಯಾಂಕದಲ್ಲಿ ಹಿಂಬಡ್ತಿ ಪಡೆದಿದ್ದಾರೆ. ಸರಣಿಯ ಮೂರು ಇನ್ನಿಂಗ್ಸ್‌ಗಳಲ್ಲಿ ಕೇವಲ 74 ರನ್ ಕಲೆಹಾಕಲಷ್ಟೇ ಶಕ್ತರಾಗಿದ್ದ ಗಿಲ್ ಟೆಸ್ಟ್ ಬ್ಯಾಟರ್​ಗಳ ರ್ಯಾಂಕಿಂಗ್ ಪಟ್ಟಿಯಲ್ಲಿ ಎರಡು ಸ್ಥಾನ ಕುಸಿದು ಒಂಬತ್ತನೇ ಸ್ಥಾನಕ್ಕೆ ತಲುಪಿದ್ದಾರೆ(PC-PTI).

3 / 6
ಇನ್ನು ಪಾಕಿಸ್ತಾನ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಇಂಗ್ಲೆಂಡ್ ವೇಗಿ ಅಲಿ ರಾಬಿನ್ಸನ್ ರ್ಯಾಂಕಿಂಗ್ ಪಟ್ಟಿಯಲ್ಲಿ ಮುಂಬಡ್ತಿ ಪಡೆದಿದ್ದಾರೆ. ಎರಡು ಇನ್ನಿಂಗ್ಸ್‌ಗಳಲ್ಲಿ 8 ವಿಕೆಟ್‌ಗಳನ್ನು ಪಡೆಯುವ ಮೂಲಕ ಇಂಗ್ಲೆಂಡ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಅಲಿ ರಾಬಿನ್ಸನ್, ಐಸಿಸಿ ಬೌಲಿಂಗ್ ಶ್ರೇಯಾಂಕದಲ್ಲಿ ಐದನೇ ಸ್ಥಾನಕ್ಕೆ ಏರಿದ್ದಾರೆ(PC-PTI).

4 / 6
ಇತ್ತ ಭಾರತದ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಮಿಂಚಿದ ಶ್ರೀಲಂಕಾದ ಬ್ಯಾಟ್ಸ್‌ಮನ್ ಸೋನಲ್ ದಿನೂಶಾ ಬ್ಯಾಟಿಂಗ್ ಶ್ರೇಯಾಂಕದಲ್ಲಿ 29 ಸ್ಥಾನಗಳ ಜಿಗಿತವನ್ನು ಕಂಡಿದ್ದು, 25 ನೇ ಸ್ಥಾನಕ್ಕೆ ತಲುಪಿದ್ದಾರೆ. ಹಾಗೆಯೇ ಕನ್ನಡಿಗ ದೇವದತ್ ಪಡಿಕ್ಕಲ್ 54 ನೇ ಸ್ಥಾನವನ್ನು ತಲುಪಿದ್ದಾರೆ(PC-PTI).

5 / 6
ಉಳಿದಂತೆ ಬ್ಯಾಟಿಂಗ್ ವಿಭಾಗದಲ್ಲಿ ಹ್ಯಾರಿ ಬ್ರೂಕ್ ನಂಬರ್ 1 ಸ್ಥಾನದಲ್ಲಿ ಮುಂದುವರಿದಿದ್ದರೆ, ಜೋ ರೂಟ್ ಒಂದು ಸ್ಥಾನ ಕಳೆದುಕೊಂಡು ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಸ್ಟೀವ್ ಸ್ಮಿತ್ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಭವಿಷ್ಯದಲ್ಲಿ ನಡೆಯಲಿರುವ ನಿರ್ಣಾಯಕ ಸರಣಿಯಲ್ಲಿ ಭಾರತೀಯ ಆಟಗಾರರು ಚೇತರಿಸಿಕೊಂಡರೆ ಮಾತ್ರ, ಶ್ರೇಯಾಂಕದಲ್ಲಿ ಮುಂಬಡ್ತಿ ಪಡೆಯುವ ಅವಕಾಶವಿದೆ(PC-PTI).

6 / 6
Follow Us
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ

ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ

KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!

ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?

SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!

ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು

'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ

ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!

ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್

ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು