ಚಾಂಪಿಯನ್ಸ್​ ಟ್ರೋಫಿಯಿಂದ ಟೀಮ್ ಇಂಡಿಯಾ ಹಿಂದೆ ಸರಿದರೆ, ಯಾವ ತಂಡಕ್ಕೆ ಚಾನ್ಸ್?

Champions Trophy 2025: ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿದೆ. ಅದರಂತೆ ಭಾರತ, ಪಾಕಿಸ್ತಾನ್, ಸೌತ್ ಆಫ್ರಿಕಾ, ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಇಂಗ್ಲೆಂಡ್, ಬಾಂಗ್ಲಾದೇಶ್ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಣಸಲಿದೆ. ಇನ್ನು 2025ರ ಚಾಂಪಿಯನ್ಸ್​ ಟ್ರೋಫಿ ಆಯೋಜನೆಯ ಹಕ್ಕು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಕೈಯಲ್ಲಿದ್ದು, ಅದರಂತೆ ಟೂರ್ನಿಯು ಪಾಕ್​ನಲ್ಲಿ ನಡೆಯಲಿದೆ.

ಝಾಹಿರ್ ಯೂಸುಫ್
|

Updated on:Jul 11, 2024 | 1:05 PM

2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯು ಪಾಕಿಸ್ತಾನದಲ್ಲಿ ನಡೆಯಲಿದೆ. ಆದರೆ ಪಾಕ್​ನಲ್ಲಿ ಟೂರ್ನಿ ಆಡಲು ಭಾರತ ತಂಡ ಹಿಂದೇಟು ಹಾಕಿದೆ. ಅಲ್ಲದೆ ಹೈಬ್ರಿಡ್ ಮಾದರಿಯಲ್ಲಿ ಪಂದ್ಯಾವಳಿಯನ್ನು ಆಯೋಜಿಸಿದರೆ ಮಾತ್ರ ಭಾರತ ತಂಡ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸುವ ಸಾಧ್ಯತೆಯಿದೆ.

1 / 5
ಇಲ್ಲಿ ಹೈಬ್ರಿಡ್ ಮಾದರಿ ಎಂದರೆ, ಟೂರ್ನಿಯು ಪಾಕಿಸ್ತಾನದಲ್ಲೇ ನಡೆದರೂ ಭಾರತದ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ಆಯೋಜಿಸುವುದು. ಅದರಂತೆ ಭಾರತದ ಪಂದ್ಯಗಳನ್ನು ಯುಎಇ ಅಥವಾ ಶ್ರೀಲಂಕಾದಲ್ಲಿ ಆಯೋಜಿಸುವಂತೆ ಐಸಿಸಿಗೆ ಬಿಸಿಸಿಐ ಮನವಿ ಮಾಡಬಹುದು.

2 / 5
ಅತ್ತ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸಲು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ನಿರಾಕರಿಸಿದರೆ, ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿಯಲಿದೆ. ಭಾರತ ತಂಡ ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿದರೆ ಯಾವ ತಂಡಕ್ಕೆ ಚಾನ್ಸ್ ಸಿಗಲಿದೆ ಎಂಬ ಪ್ರಶ್ನೆ ಮೂಡುವುದು ಸಹಜ.

3 / 5
ಈ ಪ್ರಶ್ನೆಗೆ ಉತ್ತರ ಶ್ರೀಲಂಕಾ. ಏಕೆಂದರೆ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಏಕದಿನ ವಿಶ್ವಕಪ್ 2023 ರ ಅಂಕ ಪಟ್ಟಿಯಲ್ಲಿ ಟಾಪ್-8 ನಲ್ಲಿ ಕಾಣಿಸಿಕೊಂಡ ತಂಡಗಳು ಚಾಂಪಿಯನ್ಸ್​ ಟ್ರೋಫಿಗೆ ಅರ್ಹತೆ ಪಡೆದುಕೊಂಡಿದೆ. ಆದರೆ ಈ 8 ತಂಡಗಳಲ್ಲಿ ಶ್ರೀಲಂಕಾ ಇಲ್ಲ.

4 / 5
ಒಂದು ವೇಳೆ ಇದೀಗ ಭಾರತ ತಂಡವು ಟೂರ್ನಿಯಿಂದ ಹಿಂದೆ ಸರಿದರೆ ಶ್ರೀಲಂಕಾ ತಂಡಕ್ಕೆ ಅವಕಾಶ ಸಿಗಲಿದೆ. ಏಕೆಂದರೆ ಏಕದಿನ ವಿಶ್ವಕಪ್ 2023ರ ಅಂಕ ಪಟ್ಟಿಯಲ್ಲಿ ಶ್ರೀಲಂಕಾ ತಂಡವು 9ನೇ ಸ್ಥಾನದಲ್ಲಿದೆ. ಹೀಗಾಗಿ ಒಂದು ತಂಡ ಟೂರ್ನಿಯನ್ನು ಬಹಿಷ್ಕರಿಸಿದರೆ, ಅಂಕ ಪಟ್ಟಿಯಲ್ಲಿ ನಂತರದ ಸ್ಥಾನದಲ್ಲಿರುವ ತಂಡಕ್ಕೆ ಅವಕಾಶ ನೀಡಲಾಗುತ್ತದೆ. ಅದರಂತೆ ಭಾರತ ತಂಡವು ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿದರೆ ಶ್ರೀಲಂಕಾ ತಂಡವು ಟೂರ್ನಿಗೆ ಅರ್ಹತೆ ಪಡೆಯಲಿದೆ.

5 / 5

Published On - 1:04 pm, Thu, 11 July 24

Follow us