IPL 2023: RCB ಸೋತರೆ, CSK ಮತ್ತು LSG ಪ್ಲೇಆಫ್​ಗೆ ಎಂಟ್ರಿ..!

| Updated By: ಝಾಹಿರ್ ಯೂಸುಫ್

Updated on: May 18, 2023 | 3:57 PM

IPL 2023 Kannada: ಹೈದರಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯವು ಆರ್​ಸಿಬಿ ಪಾಲಿಗೆ ನಿರ್ಣಾಯಕ. ಏಕೆಂದರೆ ಫಾಫ್ ಡುಪ್ಲೆಸಿಸ್ ಪಡೆ ಪ್ಲೇಆಫ್ ರೇಸ್​ನಲ್ಲಿ ಉಳಿಯಬೇಕಿದ್ದರೆ ಈ ಪಂದ್ಯದಲ್ಲಿ ಗೆಲ್ಲಲೇಬೇಕು.

1 / 6
IPL 2023: ಐಪಿಎಲ್​ನ 65ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ. ಇಂದು (ಮೆ 18) ಹೈದರಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯವು ಆರ್​ಸಿಬಿ ಪಾಲಿಗೆ ನಿರ್ಣಾಯಕ. ಏಕೆಂದರೆ ಫಾಫ್ ಡುಪ್ಲೆಸಿಸ್ ಪಡೆ ಪ್ಲೇಆಫ್ ರೇಸ್​ನಲ್ಲಿ ಉಳಿಯಬೇಕಿದ್ದರೆ ಈ ಪಂದ್ಯದಲ್ಲಿ ಗೆಲ್ಲಲೇಬೇಕು.

2 / 6
ಆದರೆ ಇದೇ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕೂಡ ಎದುರು ನೋಡುತ್ತಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಸೋತರೆ ಸಿಎಸ್​ಕೆ ಹಾಗೂ ಎಲ್​ಎಸ್​ಜಿ ತಂಡಕ್ಕೆ ನೇರವಾಗಿ ಪ್ಲೇಆಫ್​​ಗೆ ಪ್ರವೇಶಿಸುವ ಅವಕಾಶ ದೊರೆಯಲಿದೆ.

3 / 6
ಏಕೆಂದರೆ 15 ಅಂಕಗಳೊಂದಿಗೆ ಸಿಎಸ್​ಕೆ ಹಾಗೂ ಎಲ್​ಎಸ್​ಜಿ ತಂಡಗಳು ಅಂಕ ಪಟ್ಟಿಯಲ್ಲಿ ಕ್ರಮವಾಗಿ 2ನೇ ಹಾಗೂ 3ನೇ ಸ್ಥಾನದಲ್ಲಿದೆ. ಇತ್ತ ಎಸ್​ಆರ್​ಹೆಚ್ ವಿರುದ್ಧ ಆರ್​ಸಿಬಿ ತಂಡ ಸೋತು ಮುಂದಿನ ಪಂದ್ಯವನ್ನು ಗೆದ್ದರೂ 14 ಪಾಯಿಂಟ್ಸ್ ಮಾತ್ರ ಆಗಲಿದೆ.

4 / 6
ಹೀಗಾಗಿ ಇಂದು ಸನ್​ರೈಸರ್ಸ್ ಹೈದರಾಬಾದ್ ತಂಡ​ ಗೆದ್ದರೆ, ಅತ್ತ ಅಂಕಪಟ್ಟಿಯಲ್ಲಿ 15 ಪಾಯಿಂಟ್ಸ್​ ಹೊಂದಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ತಂಡಗಳು 3ನೇ ಹಾಗೂ 4ನೇ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ.

5 / 6
ಹಾಗೆಯೇ ಪ್ರಸ್ತುತ ಪಾಯಿಂಟ್ಸ್ ಟೇಬಲ್​​ನಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ತಂಡವು ಮುಂದಿನ ಪಂದ್ಯದಲ್ಲಿ ಜಯ ಸಾಧಿಸಿದರೆ 16 ಪಾಯಿಂಟ್ಸ್​ ಕಲೆಹಾಕಿ ಪ್ಲೇಆಫ್ ಪ್ರವೇಶಿಸಬಹುದು. ಇದರ ಹೊರತಾಗಿ ಬೇರೆ ಯಾವುದೇ ತಂಡಕ್ಕೆ 16 ಪಾಯಿಂಟ್ಸ್​ಗಳಿಸಲು ಅವಕಾಶ ಇರುವುದಿಲ್ಲ.

6 / 6
ಹೀಗಾಗಿಯೇ ಆರ್​ಸಿಬಿ ತಂಡದ ಫಲಿತಾಂಶವು 15 ಅಂಕಗಳನ್ನು ಹೊಂದಿರುವ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ಲೇಆಫ್ ಎಂಟ್ರಿಯನ್ನು ನಿರ್ಧರಿಸಲಿದೆ. ಒಂದು ವೇಳೆ ಎಸ್​ಆರ್​ಹೆಚ್ ವಿರುದ್ಧ ಆರ್​ಸಿಬಿ ಗೆದ್ದರೆ, ಸಿಎಸ್​ಕೆ ಹಾಗೂ ಎಲ್​ಎಸ್​ಜಿ ತಂಡಗಳು ಮುಂದಿನ ಪಂದ್ಯಗಳನ್ನು ಗೆದ್ದು ಪ್ಲೇಆಫ್​ಗೆ ಪ್ರವೇಶೀಸಬೇಕಾಗುತ್ತದೆ.