AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dinesh Karthik: ಹೊಸ ತಂಡದತ್ತ ಮುಖ ಮಾಡಿದ ದಿನೇಶ್ ಕಾರ್ತಿಕ್..!

Dinesh Karthik ILT20 2026: ದಿನೇಶ್ ಕಾರ್ತಿಕ್ 17 ವರ್ಷಗಳ ಐಪಿಎಲ್​ ಕೆರಿಯರ್​ನಲ್ಲಿ ಒಟ್ಟು 6 ತಂಡಗಳ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ 2013 ರಲ್ಲಿ ಮುಂಬೈ ಇಂಡಿಯನ್ಸ್ ಪರ ಅವರು ಟ್ರೋಫಿ ಗೆದ್ದಿದ್ದರು. ಹಾಗೆಯೇ ಡೆಲ್ಲಿ ಕ್ಯಾಪಿಟಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್​, ಗುಜರಾತ್ ಲಯನ್ಸ್ (ಈಗಿಲ್ಲ), ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ಪರ ಆಡಿದ್ದರು. ಇದೀಗ ವಿದೇಶಿ ಲೀಗ್​ನತ್ತ ಮುಖ ಮಾಡಿದ್ದಾರೆ.

ಝಾಹಿರ್ ಯೂಸುಫ್
|

Updated on:Oct 01, 2025 | 8:24 AM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮೆಂಟರ್ ದಿನೇಶ್ ಕಾರ್ತಿಕ್ (Dinesh Karthik) ಮುಂಬರುವ ಇಂಟರ್​ನ್ಯಾಷನಲ್ ಲೀಗ್ ಟಿ20 ಟೂರ್ನಿಯಲ್ಲಿ ಶಾರ್ಜಾ ವಾರಿಯರ್ಸ್ ಪರ ಕಣಕ್ಕಿಳಿಯಲಿದ್ದಾರೆ. ಶಾರ್ಜಾ ವಾರಿಯರ್ಸ್ ಫ್ರಾಂಚೈಸಿಯು ಡ್ರಾಫ್ಟ್ ಆಯ್ಕೆಯ ಮೂಲಕ ಡಿಕೆ ಅವರನ್ನು ತಂಡಕ್ಕೆ ಸೇರಿಸಿಕೊಂಡಿದ್ದಾರೆ.

1 / 5
ಇದಕ್ಕೂ ಮುನ್ನ ದಿನೇಶ್ ಕಾರ್ತಿಕ್ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಕಾಣಿಸಿಕೊಂಡಿದ್ದರು. ಐಪಿಎಲ್​ಗೆ ಗುಡ್ ಬೈ ಹೇಳಿದ ಬಳಿಕ ಪರ್ಲ್ ರಾಯಲ್ಸ್ ಪರ ಸೆಕೆಂಡ್ ಇನಿಂಗ್ಸ್ ಆರಂಭಿಸಿದ್ದ ಕಾರ್ತಿಕ್​​ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಈ ವೈಫಲ್ಯದ ಹೊರತಾಗಿಯೂ ಇದೀಗ ಯುಎಇ ಟಿ20 ಲೀಗ್​ನತ್ತ ಮುಖ ಮಾಡಿದ್ದಾರೆ.

2 / 5
ಇತ್ತ ಐಪಿಎಲ್​ನಲ್ಲಿ ದಿನೇಶ್ ಕಾರ್ತಿಕ್ ಆರ್​ಸಿಬಿ ತಂಡದ ಬ್ಯಾಟಿಂಗ್ ಕೋಚ್ ಹಾಗೂ ಮೆಂಟರ್ ಹುದ್ದೆಯೊಂದಿಗೆ ಮುಂದುವರೆಯಲಿದ್ದಾರೆ. ಇದರ ನಡುವೆ ಇಂಟರ್​ನ್ಯಾಷನಲ್ ಟಿ20 ಲೀಗ್​ನಲ್ಲಿ ಶಾರ್ಜಾ ವಾರಿಯರ್ಸ್ ಪರ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

3 / 5
2024 ರಲ್ಲಿ ಐಪಿಎಲ್​ಗೆ ವಿದಾಯ ಹೇಳಿದ್ದ ದಿನೇಶ್ ಕಾರ್ತಿಕ್, ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೋಚಿಂಗ್ ಸಿಬ್ಬಂದಿ ವರ್ಗದಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೆ ಮೆಂಟರ್ ಆದ ಚೊಚ್ಚಲ ಸೀಸನ್​ನಲ್ಲೇ ಆರ್​ಸಿಬಿ ತಂಡವನ್ನು ಚಾಂಪಿಯನ್​ ಪಟ್ಟಕ್ಕೇರಿಸುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಯುಎಇ ಟಿ20 ಲೀಗ್​ನಲ್ಲಿ ಆಟಗಾರನಾಗಿ ಮತ್ತೆ ಕಮಾಲ್ ಮಾಡಲಿದ್ದಾರಾ ಕಾದು ನೋಡಬೇಕಿದೆ.

4 / 5
ದಿನೇಶ್ ಕಾರ್ತಿಕ್ ಐಪಿಎಲ್​ನಲ್ಲಿ ಒಟ್ಟು 257 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 22 ಅರ್ಧಶತಕಗಳೊಂದಿಗೆ ಒಟ್ಟು 4842 ರನ್ ಕಲೆಹಾಕಿದ್ದಾರೆ. ಅಲ್ಲದೆ ಮಹೇಂದ್ರ ಸಿಂಗ್ ಧೋನಿ ಬಳಿಕ ಐಪಿಎಲ್​ನಲ್ಲಿ ಅತೀ ಹೆಚ್ಚು ಪಂದ್ಯವಾಡಿದ ವಿಕೆಟ್ ಕೀಪರ್ ಎಂಬ ದಾಖಲೆ ಕೂಡ ದಿನೇಶ್ ಕಾರ್ತಿಕ್ ನಿರ್ಮಿಸಿದ್ದಾರೆ. ಈ ಎಲ್ಲಾ ಅನುಭವಗಳೊಂದಿಗೆ ಇದೀಗ ಯುಎಇ ಟಿ20 ಲೀಗ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ.

5 / 5

Published On - 8:24 am, Wed, 1 October 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ