- Kannada News Photo gallery Cricket photos ILT20 2026: RCB Coach Dinesh Karthik Joins Sharjah Warriors
Dinesh Karthik: ಹೊಸ ತಂಡದತ್ತ ಮುಖ ಮಾಡಿದ ದಿನೇಶ್ ಕಾರ್ತಿಕ್..!
Dinesh Karthik ILT20 2026: ದಿನೇಶ್ ಕಾರ್ತಿಕ್ 17 ವರ್ಷಗಳ ಐಪಿಎಲ್ ಕೆರಿಯರ್ನಲ್ಲಿ ಒಟ್ಟು 6 ತಂಡಗಳ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ 2013 ರಲ್ಲಿ ಮುಂಬೈ ಇಂಡಿಯನ್ಸ್ ಪರ ಅವರು ಟ್ರೋಫಿ ಗೆದ್ದಿದ್ದರು. ಹಾಗೆಯೇ ಡೆಲ್ಲಿ ಕ್ಯಾಪಿಟಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್, ಗುಜರಾತ್ ಲಯನ್ಸ್ (ಈಗಿಲ್ಲ), ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ಪರ ಆಡಿದ್ದರು. ಇದೀಗ ವಿದೇಶಿ ಲೀಗ್ನತ್ತ ಮುಖ ಮಾಡಿದ್ದಾರೆ.
Updated on:Oct 01, 2025 | 8:24 AM

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮೆಂಟರ್ ದಿನೇಶ್ ಕಾರ್ತಿಕ್ (Dinesh Karthik) ಮುಂಬರುವ ಇಂಟರ್ನ್ಯಾಷನಲ್ ಲೀಗ್ ಟಿ20 ಟೂರ್ನಿಯಲ್ಲಿ ಶಾರ್ಜಾ ವಾರಿಯರ್ಸ್ ಪರ ಕಣಕ್ಕಿಳಿಯಲಿದ್ದಾರೆ. ಶಾರ್ಜಾ ವಾರಿಯರ್ಸ್ ಫ್ರಾಂಚೈಸಿಯು ಡ್ರಾಫ್ಟ್ ಆಯ್ಕೆಯ ಮೂಲಕ ಡಿಕೆ ಅವರನ್ನು ತಂಡಕ್ಕೆ ಸೇರಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ದಿನೇಶ್ ಕಾರ್ತಿಕ್ ಸೌತ್ ಆಫ್ರಿಕಾ ಟಿ20 ಲೀಗ್ನಲ್ಲಿ ಕಾಣಿಸಿಕೊಂಡಿದ್ದರು. ಐಪಿಎಲ್ಗೆ ಗುಡ್ ಬೈ ಹೇಳಿದ ಬಳಿಕ ಪರ್ಲ್ ರಾಯಲ್ಸ್ ಪರ ಸೆಕೆಂಡ್ ಇನಿಂಗ್ಸ್ ಆರಂಭಿಸಿದ್ದ ಕಾರ್ತಿಕ್ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಈ ವೈಫಲ್ಯದ ಹೊರತಾಗಿಯೂ ಇದೀಗ ಯುಎಇ ಟಿ20 ಲೀಗ್ನತ್ತ ಮುಖ ಮಾಡಿದ್ದಾರೆ.

ಇತ್ತ ಐಪಿಎಲ್ನಲ್ಲಿ ದಿನೇಶ್ ಕಾರ್ತಿಕ್ ಆರ್ಸಿಬಿ ತಂಡದ ಬ್ಯಾಟಿಂಗ್ ಕೋಚ್ ಹಾಗೂ ಮೆಂಟರ್ ಹುದ್ದೆಯೊಂದಿಗೆ ಮುಂದುವರೆಯಲಿದ್ದಾರೆ. ಇದರ ನಡುವೆ ಇಂಟರ್ನ್ಯಾಷನಲ್ ಟಿ20 ಲೀಗ್ನಲ್ಲಿ ಶಾರ್ಜಾ ವಾರಿಯರ್ಸ್ ಪರ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

2024 ರಲ್ಲಿ ಐಪಿಎಲ್ಗೆ ವಿದಾಯ ಹೇಳಿದ್ದ ದಿನೇಶ್ ಕಾರ್ತಿಕ್, ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೋಚಿಂಗ್ ಸಿಬ್ಬಂದಿ ವರ್ಗದಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೆ ಮೆಂಟರ್ ಆದ ಚೊಚ್ಚಲ ಸೀಸನ್ನಲ್ಲೇ ಆರ್ಸಿಬಿ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಯುಎಇ ಟಿ20 ಲೀಗ್ನಲ್ಲಿ ಆಟಗಾರನಾಗಿ ಮತ್ತೆ ಕಮಾಲ್ ಮಾಡಲಿದ್ದಾರಾ ಕಾದು ನೋಡಬೇಕಿದೆ.

ದಿನೇಶ್ ಕಾರ್ತಿಕ್ ಐಪಿಎಲ್ನಲ್ಲಿ ಒಟ್ಟು 257 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 22 ಅರ್ಧಶತಕಗಳೊಂದಿಗೆ ಒಟ್ಟು 4842 ರನ್ ಕಲೆಹಾಕಿದ್ದಾರೆ. ಅಲ್ಲದೆ ಮಹೇಂದ್ರ ಸಿಂಗ್ ಧೋನಿ ಬಳಿಕ ಐಪಿಎಲ್ನಲ್ಲಿ ಅತೀ ಹೆಚ್ಚು ಪಂದ್ಯವಾಡಿದ ವಿಕೆಟ್ ಕೀಪರ್ ಎಂಬ ದಾಖಲೆ ಕೂಡ ದಿನೇಶ್ ಕಾರ್ತಿಕ್ ನಿರ್ಮಿಸಿದ್ದಾರೆ. ಈ ಎಲ್ಲಾ ಅನುಭವಗಳೊಂದಿಗೆ ಇದೀಗ ಯುಎಇ ಟಿ20 ಲೀಗ್ನಲ್ಲಿ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ.
Published On - 8:24 am, Wed, 1 October 25
