David Warner: ನಿವೃತ್ತಿ ಬೆನ್ನಲ್ಲೇ ಕ್ಯಾಪಿಟಲ್ಸ್ ತಂಡದ ಕ್ಯಾಪ್ಟನ್ ಆದ ವಾರ್ನರ್
TV9 Web | Updated By: ಝಾಹಿರ್ ಯೂಸುಫ್
Updated on:
Jan 02, 2024 | 8:04 AM
David Warner: ಆಸ್ಟ್ರೇಲಿಯಾ ಪರ 161 ಏಕದಿನ ಇನ್ನಿಂಗ್ಸ್‌ಗಳನ್ನು ಆಡಿರುವ ವಾರ್ನರ್ ಒಟ್ಟು 6,932 ರನ್ ಗಳಿಸಿದ್ದಾರೆ. ಈ ವೇಳೆ ಅವರ ಬ್ಯಾಟ್ನಿಂದ 22 ಶತಕಗಳು ಮತ್ತು 33 ಅರ್ಧಶತಕಗಳು ಮೂಡಿಬಂದಿದ್ದವು. ಇದೀಗ ಏಕದಿನ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿರುವ ವಾರ್ನರ್ ಸಿಡ್ನಿಯಲ್ಲಿ ಪಾಕಿಸ್ತಾನ ವಿರುದ್ಧ ನಡೆಯಲಿರುವ 3ನೇ ಟೆಸ್ಟ್ ಪಂದ್ಯದ ಮೂಲಕ ಟೆಸ್ಟ್ ಕ್ರಿಕೆಟ್ಗೂ ವಿದಾಯ ಹೇಳಲಿದ್ದಾರೆ.
1 / 5
ಆಸ್ಟ್ರೇಲಿಯಾ ತಂಡದ ಎಡಗೈ ಆರಂಭಿಕ ಆಟಗಾರ ಡೇವಿಡ್ ವಾರ್ನರ್ (David Warner) ಏಕದಿನ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಜನವರಿ 3 ರಿಂದ ಶುರುವಾಗಲಿರುವ ಪಾಕಿಸ್ತಾನ್ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದ ಮೂಲಕ ಟೆಸ್ಟ್ ಕ್ರಿಕೆಟ್ಗೂ ವಿದಾಯ ಹೇಳಲಿದ್ದಾರೆ.
2 / 5
ಆದರೆ ಇತ್ತ ಏಕದಿನ ಕ್ರಿಕೆಟ್ಗೆ ವಿದಾಯ ಹೇಳಿದ ಬೆನ್ನಲ್ಲೇ ವಾರ್ನರ್ ಅವರು ಇಂಟರ್ನ್ಯಾಷನಲ್ ಟಿ20 ಲೀಗ್ ಕ್ರಿಕೆಟ್ನಲ್ಲಿ ಕ್ಯಾಪ್ಟನ್ ಪಟ್ಟ ದೊರೆತಿದೆ. ಅದು ಕೂಡ ಪ್ರತಿಷ್ಠಿತ ದುಬೈ ಕ್ಯಾಪಿಟಲ್ಸ್ ತಂಡದ ನಾಯಕನಾಗಿ ಎಂಬುದು ವಿಶೇಷ.
3 / 5
ಹೌದು, ಯುಎಇನಲ್ಲಿ ನಡೆಯಲಿರುವ ಇಂಟರ್ನ್ಯಾಷನಲ್ ಟಿ20 ಲೀಗ್ ಕ್ರಿಕೆಟ್ (ILT20) ನಲ್ಲಿ ಡೇವಿಡ್ ವಾರ್ನರ್ ದುಬೈ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಲಿದ್ದಾರೆ. ಕಳೆದ ಸೀಸನ್ನಲ್ಲಿ ದುಬೈ ಕ್ಯಾಪಿಟಲ್ಸ್ ತಂಡವನ್ನು ವೆಸ್ಟ್ ಇಂಡೀಸ್ ಆಟಗಾರ ರೋವ್ಮನ್ ಪೊವೆಲ್ ಮುನ್ನಡೆಸಿದ್ದರು.
4 / 5
ಇದೀಗ ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿರುವ ವಾರ್ನರ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಮಾಲೀಕತ್ವದ ದುಬೈ ಕ್ಯಾಪಿಟಲ್ಸ್ ಫ್ರಾಂಚೈಸಿಯು ನೂತನ ನಾಯಕನಾಗಿ ಆಯ್ಕೆ ಮಾಡಿದೆ. ವಿಶೇಷ ಎಂದರೆ 2023 ರಲ್ಲಿ ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ವಾರ್ನರ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಿದ್ದರು.
5 / 5
ಇದೀಗ ದುಬೈ ಕ್ಯಾಪಿಟಲ್ಸ್ ತಂಡದ ನಾಯಕತ್ವದೊಂದಿಗೆ ಹೊಸ ಲೀಗ್ನಲ್ಲಿ ಕಣಕ್ಕಿಳಿಯಲು ವಾರ್ನರ್ ಸಜ್ಜಾಗಿದ್ದಾರೆ. ಅದರಂತೆ 37 ಜನವರಿ 20 ರಿಂದ ಫೆಬ್ರವರಿ 18 ರವರೆಗೆ ನಡೆಯಲಿರುವ ILT20 2024 ರಲ್ಲಿ ದುಬೈ ಕ್ಯಾಪಿಟಲ್ಸ್ ತಂಡವನ್ನು ಡೇವಿಡ್ ವಾರ್ನರ್ ಮುನ್ನಡೆಸಲಿದ್ದಾರೆ.