AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ILT20: ಸ್ಪೋಟಕ ಶತಕ: ಟಾಮ್ ಬಿರುಗಾಳಿ ಬ್ಯಾಟಿಂಗ್​ಗೆ ನಲುಗಿದ ಕ್ಯಾಪಿಟಲ್ಸ್​

Tom Kohler-Cadmore: 19 ಎಸೆತಗಳಲ್ಲಿ ಟಾಮ್ ಕೊಹ್ಲರ್-ಕ್ಯಾಡ್ಮೋರ್ ಅರ್ಧಶತಕ ಪೂರೈಸಿದರು. ಹಾಫ್​ ಸೆಂಚುರಿಯ ಬೆನ್ನಲ್ಲೇ ಸಿಡಿಲಬ್ಬರ ಶುರು ಮಾಡಿದ ಟಾಮ್ ದುಬೈ ಕ್ಯಾಪಿಟಲ್ಸ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದರು.

TV9 Web
| Edited By: |

Updated on:Jan 22, 2023 | 3:56 PM

Share
ಯುಎಇನಲ್ಲಿ ನಡೆಯುತ್ತಿರುವ ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಯುವ ಬ್ಯಾಟರ್ ಟಾಮ್ ಕೊಹ್ಲರ್-ಕ್ಯಾಡ್ಮೋರ್ ಸ್ಪೋಟಕ ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಈ ಅಬ್ಬರದ ಶತಕದೊಂದಿಗೆ ಶಾರ್ಜಾ ವಾರಿಯರ್ಸ್ ತಂಡಕ್ಕೆ ಜಯ ತಂದುಕೊಟ್ಟಿರುವುದು ವಿಶೇಷ.

1 / 5
ದುಬೈ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಶಾರ್ಜಾ ವಾರಿಯರ್ಸ್ ಹಾಗೂ ದುಬೈ ಕ್ಯಾಪಿಟಲ್ಸ್​ ತಂಡಗಳು ಮುಖಾಮುಖಿಯಾಗಿತ್ತು. ಟಾಸ್ ಸೋತರೂ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ದುಬೈ ಕ್ಯಾಪಿಟಲ್ಸ್ ಪರ ಆರಂಭಿಕ ಆಟಗಾರ ಜೋ ರೂಟ್ 54 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 8 ಫೋರ್​ನೊಂದಿಗೆ ಅಜೇಯ 80 ರನ್​ ಬಾರಿಸಿದ್ದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ 27 ಎಸೆತಗಳಲ್ಲಿ 44 ರನ್​ ಬಾರಿಸುವ ಮೂಲಕ ರೋವ್​ಮನ್ ಪೊವೆಲ್ ನಿಗದಿತ 20 ಓವರ್​ಗಳಲ್ಲಿ ತಂಡದ ಮೊತ್ತವನ್ನು 4 ವಿಕೆಟ್ ನಷ್ಟಕ್ಕೆ 177 ಕ್ಕೆ ತಂದು ನಿಲ್ಲಿಸಿದರು.

2 / 5
178 ರನ್​ಗಳ ಕಠಿಣ ಗುರಿ ಪಡೆದ ಶಾರ್ಜಾ ವಾರಿಯರ್ಸ್​ ಪರ ಟಾಮ್ ಕೊಹ್ಲರ್-ಕ್ಯಾಡ್ಮೋರ್ ಹಾಗೂ ರಹಮನುಲ್ಲಾ ಗುರ್ಬಾಜ್ ಉತ್ತಮ ಆರಂಭ ಒದಗಿಸಿದ್ದರು. 3.3 ಓವರ್​ಗಳಲ್ಲಿ 47 ರನ್​ಗಳ ಜೊತೆಯಾಟವಾಡಿದ ಗುರ್ಬಾಜ್ ನಿರ್ಗಮಿಸಿದರು. ಆದರೆ ಮತ್ತೊಂದೆಡೆ ಟಾಮ್ ಆರ್ಭಟ ಮುಂದುವರೆಸಿದರು. ಪರಿಣಾಮ....

3 / 5
19 ಎಸೆತಗಳಲ್ಲಿ ಟಾಮ್ ಕೊಹ್ಲರ್-ಕ್ಯಾಡ್ಮೋರ್ ಅರ್ಧಶತಕ ಪೂರೈಸಿದರು. ಹಾಫ್​ ಸೆಂಚುರಿಯ ಬೆನ್ನಲ್ಲೇ ಸಿಡಿಲಬ್ಬರ ಶುರು ಮಾಡಿದ ಟಾಮ್ ದುಬೈ ಕ್ಯಾಪಿಟಲ್ಸ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದರು. ಅದರಂತೆ ಕೇವಲ 46 ಎಸೆತಗಳಲ್ಲಿ ಶತಕ ಪೂರೈಸಿ ಬ್ಯಾಟ್ ಮೇಲೆತ್ತಿದರು.

4 / 5
ಅಷ್ಟರಲ್ಲಾಗಲೇ ಶಾರ್ಜಾ ವಾರಿಯರ್ಸ್ ತಂಡವು ಗೆಲುವಿನ ಸಮೀಪಕ್ಕೆ ತಲುಪಿತ್ತು. ಇನ್ನು ಅಜೇಯರಾಗಿ ಉಳಿದ ಟಾಮ್ ಕೊಹ್ಲರ್-ಕ್ಯಾಡ್ಮೋರ್ 47 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 10 ಫೋರ್​ನೊಂದಿಗೆ 106 ರನ್​ ಚಚ್ಚಿದರು. ಈ ಮೂಲಕ 14.4 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ ತಂಡವನ್ನು ಗುರಿ ತಲುಪಿಸಿ ಭರ್ಜರಿ ತಂದುಕೊಟ್ಟರು. ವಿಶೇಷ ಎಂದರೆ ಇದು 4 ಪಂದ್ಯಗಳನ್ನಾಡಿರುವ ಶಾರ್ಜಾ ವಾರಿಯರ್ಸ್ ತಂಡದ ಮೊದಲ ಗೆಲುವಾಗಿದೆ. ಇನ್ನು ಅಮೋಘ ಶತಕ ಸಿಡಿಸಿದ ಟಾಮ್ ಕೊಹ್ಲರ್-ಕ್ಯಾಡ್ಮೋರ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

5 / 5

Published On - 3:56 pm, Sun, 22 January 23

Web contact
Web contact

TV9 Kannada

Read More
Follow Us
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!

ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ

ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ

ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ

ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​

ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?