- Kannada News Photo gallery Cricket photos Imran Tahir becomes the oldest captain to win a T20 tournament
ಟಿ20 ಕ್ರಿಕೆಟ್ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಇಮ್ರಾನ್ ತಾಹಿರ್
Imran Tahir Record: ಕೆರಿಬಿಯನ್ ಪ್ರೀಮಿಯರ್ ಲೀಗ್ನಲ್ಲಿ ಗಯಾನಾ ಅಮೆಝಾನ್ ವಾರಿಯರ್ಸ್ ಪರ ಕಣಕ್ಕಿಳಿಯುವ ಮೂಲಕ ಸೌತ್ ಆಫ್ರಿಕಾ ಸ್ಪಿನ್ನರ್ ಇಮ್ರಾನ್ ತಾಹಿರ್ ಹೊಸ ದಾಖಲೆ ಬರೆದಿದ್ದಾರೆ. ಅದು ಸಹ ತಮ್ಮ 45ನೇ ವಯಸ್ಸಿನಲ್ಲಿ ತಂಡವೊಂದನ್ನು ಮುನ್ನಡೆಸುವ ಮೂಲಕ ಎಂಬುದು ವಿಶೇಷ.
Updated on: Sep 04, 2024 | 11:22 AM

ಟಿ20 ಕ್ರಿಕೆಟ್ನಲ್ಲಿ ಸೌತ್ ಆಫ್ರಿಕಾದ ಕ್ರಿಕೆಟಿಗ ಇಮ್ರಾನ್ ತಾಹಿರ್ ಹೊಸ ಇತಿಹಾಸ ಬರೆದಿದ್ದಾರೆ. ಅದು ಸಹ 45ನೇ ವಯಸ್ಸಿನಲ್ಲಿ ನಾಯಕನಾಗಿ ಕಣಕ್ಕಿಳಿಯುವ ಮೂಲಕ ಎಂಬುದು ವಿಶೇಷ. ಅಂದರೆ ಟಿ20 ಕ್ರಿಕೆಟ್ನಲ್ಲಿ ನಾಯಕನಾಗಿ ಕಣಕ್ಕಿಳಿದ ಅತ್ಯಂತ ಹಿರಿಯ ಆಟಗಾರ ಎಂಬ ದಾಖಲೆ ಇದೀಗ ಇಮ್ರಾನ್ ತಾಹಿರ್ ಪಾಲಾಗಿದೆ.

ಇಮ್ರಾನ್ ತಾಹಿರ್ ಪ್ರಸ್ತುತ ನಡೆಯುತ್ತಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್ನಲ್ಲಿ ಗಯಾನಾ ಅಮೆಝಾನ್ ವಾರಿಯರ್ಸ್ ತಂಡದ ನಾಯಕರಾಗಿ ಕಣಕ್ಕಿಳಿಯುತ್ತಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ತಂಡವನ್ನು ಮುನ್ನಡೆಸಿದ ಅತ್ಯಂತ ಹಿರಿಯ ಕ್ಯಾಪ್ಟನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ಆಸ್ಟ್ರೇಲಿಯಾದ ಶೇನ್ ವಾರ್ನ್ ಹೆಸರಿನಲ್ಲಿತ್ತು. 2013 ರ ಬಿಗ್ ಬ್ಯಾಷ್ ಲೀಗ್ನಲ್ಲಿ ವಾರ್ನ್ ಮೆಲ್ಬೋರ್ನ್ ಸ್ಟಾರ್ಸ್ ತಂಡ ನಾಯಕರಾಗಿ ಕಣಕ್ಕಿಳಿದಿದ್ದರು. ಈ ವೇಳೆ ಅವರಿಗೆ 43 ವರ್ಷ, 115 ದಿನಗಳ ವಯಸ್ಸಾಗಿತ್ತು.

ಇದೀಗ ಈ ದಾಖಲೆಯನ್ನು ಇಮ್ರಾನ್ ತಾಹಿರ್ ಮುರಿದಿದ್ದಾರೆ. 45ನೇ ವಯಸ್ಸಿನಲ್ಲಿ ಗಯಾನಾ ಅಮೆಝಾನ್ ವಾರಿಯರ್ಸ್ ತಂಡವನ್ನು ಮುನ್ನಡೆಸುವ ಮೂಲಕ ಟಿ20 ಕ್ರಿಕೆಟ್ನಲ್ಲಿ ನಾಯಕನಾಗಿ ಕಾಣಿಸಿಕೊಂಡ ಅತ್ಯಂತ ಹಿರಿಯ ಆಟಗಾರ ಎನಿಸಿಕೊಂಡಿದ್ದಾರೆ.

ಇನ್ನು ಐಪಿಎಲ್ನಲ್ಲಿ ತಂಡವನ್ನು ಮುನ್ನಡೆಸಿದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದೆ. 2023 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸುವ ಮೂಲಕ 41 ವರ್ಷದ ಧೋನಿ ಈ ದಾಖಲೆ ನಿರ್ಮಿಸಿದ್ದಾರೆ.
