ಧೋನಿ ದಾಖಲೆ ಮುರಿದ ಇಮ್ರಾನ್ ತಾಹಿರ್
TV9 Web | Updated By: ಝಾಹಿರ್ ಯೂಸುಫ್
Updated on:
Sep 25, 2023 | 8:29 PM
CPL 2023: ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಗಯಾನಾ ಅಮೆಜಾನ್ ವಾರಿಯರ್ಸ್ ತಂಡದ ನಾಯಕ ಇಮ್ರಾನ್ ತಾಹಿರ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಕೀರನ್ ಪೊಲಾರ್ಡ್ ನಾಯಕತ್ವದ ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡವು ಕೇವಲ 94 ರನ್ಗಳಿಗೆ ಆಲೌಟ್ ಆಗಿತ್ತು.
1 / 6
ಕೆರಿಬಿಯನ್ ಪ್ರೀಮಿಯರ್ ಲೀಗ್ನ ಫೈನಲ್ ಪಂದ್ಯದಲ್ಲಿ ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡಕ್ಕೆ ಸೋಲುಣಿಸಿ ಗಯಾನಾ ಅಮೆಜಾನ್ ವಾರಿಯರ್ಸ್ ಚಾಂಪಿಯನ್ ಪಟ್ಟ ಅಲಂಕರಿಸಿದೆ.
2 / 6
ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಗಯಾನಾ ಅಮೆಜಾನ್ ವಾರಿಯರ್ಸ್ ತಂಡದ ನಾಯಕ ಇಮ್ರಾನ್ ತಾಹಿರ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಕೀರನ್ ಪೊಲಾರ್ಡ್ ನಾಯಕತ್ವದ ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡವು ಕೇವಲ 94 ರನ್ಗಳಿಗೆ ಆಲೌಟ್ ಆಗಿತ್ತು.
3 / 6
95 ರನ್ಗಳ ಸುಲಭ ಗುರಿ ಬೆನ್ನತ್ತಿದ ಗಯಾನಾ ಅಮೆಜಾನ್ ವಾರಿಯರ್ಸ್ ತಂಡವು 14 ಓವರ್ಗಳಲ್ಲಿ ಗುರಿ ಮುಟ್ಟುವ ಮೂಲಕ ಸಿಪಿಎಲ್ ಕಿರೀಟವನ್ನು ಮುಡಿಗೇರಿಸಿಕೊಂಡರು. ಇದರೊಂದಿಗೆ ಟಿ20 ಕ್ರಿಕೆಟ್ನಲ್ಲಿ ಟ್ರೋಫಿ ಗೆದ್ದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆ ಇಮ್ರಾನ್ ತಾಹಿರ್ ಪಾಲಾಯಿತು.
4 / 6
ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಮಹೇಂದ್ರ ಸಿಂಗ್ ಧೋನಿಯ ಹೆಸರಿನಲ್ಲಿತ್ತು. 2023 ರಲ್ಲಿ ಧೋನಿ ಐಪಿಎಲ್ ಟ್ರೋಫಿ ಗೆದ್ದಾಗ ಅವರಿಗೆ 41 ವರ್ಷ, 325 ದಿನಗಳಾಗಿತ್ತು. ಈ ಮೂಲಕ ಟಿ20 ಟ್ರೋಫಿ ಗೆದ್ದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆ ಬರೆದಿದ್ದರು.
5 / 6
ಇದೀಗ ಗಯಾನಾ ಅಮೆಜಾನ್ ವಾರಿಯರ್ಸ್ ತಂಡವನ್ನು ಮುನ್ನಡೆಸಿ ಚಾಂಪಿಯನ್ ಪಟ್ಟಕ್ಕೇರಿಸುವ ಮೂಲಕ 44ನೇ ವಯಸ್ಸಿನಲ್ಲಿ ಇಮ್ರಾನ್ ತಾಹಿರ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಧೋನಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸೌತ್ ಆಫ್ರಿಕಾ ಕ್ರಿಕೆಟಿಗ ತಮ್ಮದಾಗಿಸಿಕೊಂಡಿದ್ದಾರೆ.
6 / 6
ಗಯಾನಾ ಅಮೆಜಾನ್ ವಾರಿಯರ್ಸ್ ತಂಡ: ಸೈಮ್ ಅಯೂಬ್ , ಶಾಯ್ ಹೋಪ್ , ಶಿಮ್ರಾನ್ ಹೆಟ್ಮೆಯರ್ , ಆಝಮ್ ಖಾನ್ (ವಿಕೆಟ್ ಕೀಪರ್) , ಡ್ವೈನ್ ಪ್ರಿಟೋರಿಯಸ್ , ಕೀಮೋ ಪಾಲ್ , ಓಡಿಯನ್ ಸ್ಮಿತ್ , ರೊಮಾರಿಯೋ ಶೆಫರ್ಡ್ , ಗುಡಾಕೇಶ್ ಮೋಟಿ , ಇಮ್ರಾನ್ ತಾಹಿರ್ (ನಾಯಕ) , ರಾನ್ಸ್‌ಫೋರ್ಡ್ ಬೀಟನ್.