AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೋನಿಯ ವಿಶ್ವ ದಾಖಲೆ ಮುರಿದ ಇಮ್ರಾನ್ ತಾಹಿರ್

Global Super League 2026: ವೆಸ್ಟ್ ಇಂಡೀಸ್​ನಲ್ಲಿ ನಡೆದ ಗ್ಲೋಬಲ್ ಟಿ20 ಲೀಗ್​ನಲ್ಲಿ ಗಯಾನಾ ಅಮೆಝಾನ್ ವಾರಿಯರ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗಯಾನಾ ತಂಡ ಕೇವಲ 85 ರನ್​ಗಳಿಗೆ ಆಲೌಟ್ ಆಗಿತ್ತು. ಈ ಗುರಿಯನ್ನು ಬೆನ್ನತ್ತಿದ ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ಸ್​ 18.3 ಓವರ್​ಗಳಲ್ಲಿ 79 ರನ್​ಗಳಿಗೆ ಸರ್ವಪತನ ಕಂಡಿದೆ. ಈ ಮೂಲಕ ಗಯಾನಾ ಅಮೆಝಾನ್ ವಾರಿಯರ್ಸ್ ತಂಡ 6 ರನ್​ಗಳ ರೋಚಕ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Aug 02, 2026 | 10:22 AM

Share
ಗ್ಲೋಬಲ್ ಟಿ20 ಲೀಗ್​ ಫೈನಲ್ ಪಂದ್ಯದಲ್ಲಿ ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ಸ್​ ತಂಡಕ್ಕೆ ಸೋಲುಣಿಸಿ ಗಯಾನಾ ಅಮೆಝಾನ್ ವಾರಿಯರ್ಸ್ ಚಾಂಪಿಯನ್​ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದೊಂದಿಗೆ ಗಯಾನಾ ಅಮೆಝಾನ್ ವಾರಿಯರ್ಸ್ ತಂಡದ ನಾಯಕ ಇಮ್ರಾನ್ ತಾಹಿರ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. (PC: GSL)

1 / 5
ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಗಯಾನಾ ಅಮೆಝಾನ್ ವಾರಿಯರ್ಸ್ ತಂಡದ ನಾಯಕ ಇಮ್ರಾನ್ ತಾಹಿರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗಯಾನಾ ಅಮೆಝಾನ್ ವಾರಿಯರ್ಸ್ ತಂಡ 18.5 ಓವರ್​ಗಳಲ್ಲಿ ಕೇವಲ 85 ರನ್​ಗಳಿಸಿ ಆಲೌಟ್ ಆಗಿತ್ತು. (PC: GSL)

2 / 5
86 ರನ್​ಗಳ ಸುಲಭ ಗುರಿ ಬೆನ್ನತ್ತಿದ ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ಸ್ ತಂಡವು 18.3 ಓವರ್​ಗಳಲ್ಲಿ ಕೇವಲ 79 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಗಯಾನಾ ಅಮೆಝಾನ್ ವಾರಿಯರ್ಸ್ ತಂಡವು 6 ರನ್​ಗಳ ರೋಚಕ ಜಯದೊಂದಿಗೆ ಗ್ಲೋಬಲ್ ಟಿ20 ಲೀಗ್​​ ಕಿರೀಟವನ್ನು ಮುಡಿಗೇರಿಸಿಕೊಂಡರು. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಟ್ರೋಫಿ ಗೆದ್ದ ಅತ್ಯಂತ ಹಿರಿಯ ನಾಯಕ ಎಂಬ ವಿಶ್ವ ದಾಖಲೆ ಇಮ್ರಾನ್ ತಾಹಿರ್ ಪಾಲಾಯಿತು. (PC: GSL)

3 / 5
ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಮಹೇಂದ್ರ ಸಿಂಗ್ ಧೋನಿಯ ಹೆಸರಿನಲ್ಲಿತ್ತು. 2023 ರಲ್ಲಿ ಧೋನಿ ಐಪಿಎಲ್ ಟ್ರೋಫಿ ಗೆದ್ದಾಗ ಅವರಿಗೆ 41 ವರ್ಷ, 325 ದಿನಗಳಾಗಿತ್ತು. ಈ ಮೂಲಕ ಟಿ20 ಟ್ರೋಫಿ ಗೆದ್ದ ಅತ್ಯಂತ ಹಿರಿಯ ನಾಯಕ ಎಂಬ ವಿಶ್ವ ದಾಖಲೆ ಬರೆದಿದ್ದರು. (PC: IPL)

4 / 5
ಇದೀಗ ಗಯಾನಾ ಅಮೆಝಾನ್ ವಾರಿಯರ್ಸ್ ತಂಡವನ್ನು ಮುನ್ನಡೆಸಿ ಚಾಂಪಿಯನ್ ಪಟ್ಟಕ್ಕೇರಿಸುವ ಮೂಲಕ 47ನೇ ವಯಸ್ಸಿನಲ್ಲಿ ಇಮ್ರಾನ್ ತಾಹಿರ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಟ್ರೋಫಿ ಗೆದ್ದ ಅತ್ಯಂತ ಹಿರಿಯ ನಾಯಕನೆಂಬ ವಿಶ್ವ ದಾಖಲೆಯನ್ನು ಇಮ್ರಾನ್ ತಾಹಿರ್ ತಮ್ಮದಾಗಿಸಿಕೊಂಡಿದ್ದಾರೆ. (PC: GAW)

5 / 5
Follow Us