Imran Tahir: ಇಮ್ರಾನ್ ತಾಹಿರ್ ಹೆಸರಿಗೆ 500 ವಿಕೆಟ್​ಗಳ ವಿಶ್ವ ದಾಖಲೆ

Imran Tahir: ಟಿ20 ಕ್ರಿಕೆಟ್​ನಲ್ಲಿ 500 ವಿಕೆಟ್​ಗಳನ್ನು ಪಡೆದ ವಿಶೇಷ ಸಾಧಕರ ಪಟ್ಟಿಗೆ ಸೌತ್ ಆಫ್ರಿಕಾದ ಸ್ಪಿನ್ನರ್ ಇಮ್ರಾನ್ ತಾಹಿರ್ ಸೇರ್ಪಡೆಯಾಗಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ ನಾಲ್ಕನೇ ಆಟಗಾರ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಮೂವರು ಆಟಗಾರರು ಟಿ20 ಕ್ರಿಕೆಟ್​ನಲ್ಲಿ ಐನೂರಕ್ಕಿಂತ ಹೆಚ್ಚಿನ ವಿಕೆಟ್​ಗಳನ್ನು ಕಬಳಿಸಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Feb 15, 2024 | 8:22 AM

ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್​ನ 30ನೇ ಪಂದ್ಯದಲ್ಲಿ ಇಮ್ರಾನ್ ತಾಹಿರ್ (Imran Tahir) 5 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಐದು ವಿಕೆಟ್​ಗಳೊಂದಿಗೆ ಸೌತ್ ಆಫ್ರಿಕಾ ಸ್ಪಿನ್ನರ್ ಟಿ20 ಕ್ರಿಕೆಟ್​ನಲ್ಲಿ 500 ವಿಕೆಟ್​ಗಳ ಸಾಧನೆ ಮಾಡಿರುವುದು ವಿಶೇಷ.

1 / 6
ಚಟ್ಟೋಗ್ರಾಮ್​ನಲ್ಲಿ ನಡೆದ ಈ ಪಂದ್ಯದಲ್ಲಿ ಖುಲ್ನಾ ಟೈಗರ್ಸ್ ಮತ್ತು ರಂಗ್‌ಪುರ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಮೊದಲು ಬ್ಯಾಟ್ ಮಾಡಿದ ರಂಗ್‌ಪುರ್ ರೈಡರ್ಸ್ ತಂಡ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 219 ರನ್ ಕಲೆಹಾಕಿತು.

2 / 6
220 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಖುಲ್ನಾ ಟೈಗರ್ಸ್ ತಂಡವು ಇಮ್ರಾನ್ ತಾಹಿರ್ ಸ್ಪಿನ್ ಮೋಡಿ ಮುಂದೆ ಮಂಕಾದರು. ಹಿರಿ ವಯಸ್ಸಿನಲ್ಲೂ ಅತ್ಯುತ್ತಮ ದಾಳಿ ಸಂಘಟಿಸಿದ ತಾಹಿರ್ 4 ಓವರ್​ಗಳಲ್ಲಿ 26 ರನ್ ನೀಡಿ 5 ವಿಕೆಟ್ ಕಬಳಿಸಿದರು. ಪರಿಣಾಮ ಖುಲ್ನಾ ಟೈಗರ್ಸ್ ತಂಡವು 141 ರನ್​ಗಳಿಗೆ ಆಲೌಟ್ ಆಗಿ ಸೋಲೊಪ್ಪಿಕೊಂಡಿತು.

3 / 6
ಇನ್ನು ಈ ಪಂದ್ಯದಲ್ಲಿ 5 ವಿಕೆಟ್​ ಕಬಳಿಸುವುದರೊಂದಿಗೆ ಇಮ್ರಾನ್ ತಾಹಿರ್ ಟಿ20 ಕ್ರಿಕೆಟ್​ನಲ್ಲಿ 500 ವಿಕೆಟ್​ ಕಬಳಿಸಿದ ಸೌತ್ ಆಫ್ರಿಕಾದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ ವಿಶ್ವದ 4ನೇ ಆಟಗಾರ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.

4 / 6
ಇದಕ್ಕೂ ಮುನ್ನ ವೆಸ್ಟ್ ಇಂಡೀಸ್​ನ ಡ್ವೇನ್ ಬ್ರಾವೊ (624), ಅಫ್ಘಾನಿಸ್ತಾನದ ರಶೀದ್ ಖಾನ್ (556), ಮತ್ತು ವೆಸ್ಟ್ ಇಂಡೀಸ್​ನ ಸುನಿಲ್ ನರೈನ್ (532) ಮಾತ್ರ ಈ ಸಾಧನೆ ಮಾಡಿದ್ದರು.

5 / 6
ಇದೀಗ 387 ಟಿ20 ಇನಿಂಗ್ಸ್​ಗಳ ಮೂಲಕ ಇಮ್ರಾನ್ ತಾಹಿರ್ 502 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ ಅತ್ಯಂತ ಹಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ 44 ವರ್ಷದ ಇಮ್ರಾನ್ ತಾಹಿರ್ ಪಾತ್ರರಾಗಿದ್ದಾರೆ.

6 / 6
Follow us
‘ಮ್ಯಾಕ್ಸ್’ ಸಿನಿಮಾದ ಆಡಿಯೋ ರಿಲೀಸ್​ ಕಾರ್ಯಕ್ರಮ; ಲೈವ್​ ವಿಡಿಯೋ ನೋಡಿ..

ಬೆಂಗಳೂರಲ್ಲಿ ಮಿತಿ ಮೀರಿದ ಮೊಬೈಲ್ ಕಳ್ಳರ ಅಟ್ಟಹಾಸ: ಲಾಂಗ್ ತೋರಿಸಿ ಪರಾರಿ

ಸುದೀಪ್​ ಮುಂದೆ ನಡೆಯಲಿಲ್ಲ ಗೌತಮಿಯ ಪಾಸಿಟಿವ್ ಮುಖವಾಡ

ಸಿದ್ದರಾಮೋತ್ಸವ ಮಾದರಿಯಲ್ಲೇ ಯಡಿಯೂರಪ್ಪ ಜನ್ಮದಿನೋತ್ಸವ ಆಚರಣೆಗೆ ನಿರ್ಧಾರ

ಕುಟುಂಬದಲ್ಲಿ ತುರ್ತು ಪರಿಸ್ಥಿತಿ; ಬಿಗ್ ಬಾಸ್​ನಿಂದ ಹೊರಬಂದ ಗೋಲ್ಡ್ ಸುರೇಶ್

ಸಿಟ್ಟಿದ್ದವರ ಮೇಲೆ ಗುದ್ದಿ ಕೋಪ ತೀರಿಸಿಕೊಂಡ ಬಿಗ್​ಬಾಸ್ ಸ್ಪರ್ಧಿಗಳು

ಅತುಲ್ ಸುಭಾಷ್ ​: ಪುರುಷರ ಮೇಲೆ ದೌರ್ಜನ್ಯ, ಬದಲಾಗುತ್ತಾ ಕಾನೂನು?

46 ವರ್ಷಗಳ ಬಳಿಕ ಬಾಗಿಲು ತೆರೆದ ದೇವಾಲಯ, ಶಿವ, ಹನುಮಂತನಿಗೆ ಆರತಿ

ಸೈಲೆಂಟ್​​ ಆಗಿ ಇದ್ಬಿಡಿ... ಆಸ್ಟ್ರೇಲಿಯನ್ನರಿಗೆ ವಿರಾಟ್ ಕೊಹ್ಲಿ ತಾಕೀತು!

ಗಿನ್ನೆಸ್ ವಿಶ್ವ ದಾಖಲೆ ಬರೆದ ವಿಶ್ವದ ಅತಿ ಉದ್ದದ ಕಾರು