AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ಭರ್ಜರಿ ಸಿಕ್ಸ್, 11 ಫೋರ್​:  ಶತಕದಂಚಿನಲ್ಲಿ ಎಡವಿದ ರಿಷಭ್ ಪಂತ್

India A vs South Africa A: ಸೌತ್ ಆಫ್ರಿಕಾ ಎ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಎ ತಂಡ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡದಿ ಸೌತ್ ಆಫ್ರಿಕಾ ಮೊದಲ ಇನಿಂಗ್ಸ್​​ನಲ್ಲಿ 309 ರನ್​ಗಳಿಸಿದರೆ, ಭಾರತ 234 ರನ್​ ಕಲೆಹಾಕಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಸೌತ್ ಆಫ್ರಿಕಾ ಕೇವಲ 199 ರನ್​ಗಳಿಗೆ ಆಲೌಟ್ ಆಗಿದೆ. ಅದರಂತೆ ಕೊನೆಯ ಇನಿಂಗ್ಸ್​ನಲ್ಲಿ 275 ರನ್​ಗಳ ಗುರಿ ಪಡೆದ ಟೀಮ್ ಇಂಡಿಯಾ ಇದೀಗ ರೋಚಕ ಗೆಲುವು ದಾಖಲಿಸಿದೆ.

ಝಾಹಿರ್ ಯೂಸುಫ್
|

Updated on: Nov 02, 2025 | 2:55 PM

Share
ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ (Rishabh Pant) ಕಂಬ್ಯಾಕ್ ಪಂದ್ಯದಲ್ಲೇ ಅಬ್ಬರಿಸಿದ್ದಾರೆ. ಸೌತ್ ಆಫ್ರಿಕಾ ಎ ವಿರುದ್ಧದ ಪಂದ್ಯದಲ್ಲಿ ಭಾರತ ಎ ತಂಡದ ನಾಯಕನಾಗಿ ಕಣಕ್ಕಿಳಿದಿರುವ ಪಂತ್ ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ.

1 / 5
ಬೆಂಗಳೂರಿನ ಸೆಂಟ್ರಲ್ ಆಫ್ ಎಕ್ಸಲೆನ್ಸ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಷಭ್ ಪಂತ್ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​​ಗೆ ಒತ್ತು ನೀಡಿದ ಎಡಗೈ ದಾಂಡಿಗ ಸೌತ್ ಆಫ್ರಿಕಾ ಬೌಲರ್​ಗಳ ಬೆಂಡೆತ್ತಿದರು.

2 / 5
ಪರಿಣಾಮ ರಿಷಭ್ ಪಂತ್ ಬ್ಯಾಟ್​ನಿಂದ 65 ಎಸೆತಗಳಲ್ಲಿ ಅರ್ಧಶತಕ ಮೂಡಿಬಂತು. ಈ ಅರ್ಧಶತಕದ ಬಳಿಕ ಕೂಡ ಸಿಡಿಲಬ್ಬರದ ಮುಂದುವರೆಸಿದ ಪಂತ್ 113 ಎಸೆತಗಳಲ್ಲಿ 4 ಭರ್ಜರಿ ಸಿಕ್ಸರ್ ಹಾಗೂ 11 ಫೋರ್​ಗಳೊಂದಿಗೆ 90 ರನ್ ಬಾರಿಸಿದರು.

3 / 5
ಆದರೆ ಶತಕದಂಚಿನಲ್ಲಿ ಬಿರುಸಿನ ಹೊಡೆತಕ್ಕೆ ಮುಂದಾದ ರಿಷಭ್ ಪಂತ್ ಸೌತ್ ಆಫ್ರಿಕಾ ಟಿಯಾನ್ ವ್ಯಾನ್ ವುರೆನ್ ಎಸೆತದಲ್ಲಿ ರಿವಾಲ್ಡೊಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಪಂತ್ ಔಟಾದ ಬಳಿಕ ಟೀಮ್ ಇಂಡಿಯಾದ ಗೆಲುವಿನ ನೊಗ ಹೊತ್ತ ಅನ್ಶುಲ್ ಕಂಬೋಜ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು.

4 / 5
ಅಂತಿಮ ಹಂತದಲ್ಲಿ ಅನ್ಶುಲ್ ಕಂಬೋಜ್ ಬಾರಿಸಿದ 37 ರನ್​ಗಳ ನೆರವಿನೊಂದಿಗೆ ಟೀಮ್ ಇಂಡಿಯಾ 277 ರನ್​ಗಳ ಗುರಿ ತಲುಪಿತು. ಈ ಮೂಲಕ ಸೌತ್ ಆಫ್ರಿಕಾ ಎ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 3 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ