IND vs NZ, ICC World Cup Semi Final: ಸೆಮಿಫೈನಲ್​ನಲ್ಲಿ ಬದಲಾವಣೆ ಖಚಿತ: ನ್ಯೂಝಿಲೆಂಡ್ ವಿರುದ್ಧದ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ XI ನೋಡಿ

India Playing XI vs New Zealand, ICC ODI World Cup Semi Final 1: ಐಸಿಸಿ ಏಕದಿನ ವಿಶ್ವಕಪ್ 2023 ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಬುಧವಾರದಂದು ನ್ಯೂಝಿಲೆಂಡ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ನಿರೀಕ್ಷಿಸಲಾಗಿದೆ. ಓರ್ವ ಹೊಸ ಆಟಗಾರ ಕಿವೀಸ್ ವಿರುದ್ಧ ಕಣಕ್ಕಿಳಿಯಬಹುದು. ಇಲ್ಲಿದೆ ಭಾರತ ಸಂಭಾವ್ಯ ಪ್ಲೇಯಿಂಗ್ ಇಲೆವೆನ್.

|

Updated on: Nov 14, 2023 | 10:54 AM

ಐಸಿಸಿ ಏಕದಿನ ವಿಶ್ವಕಪ್ 2023 ರ ಗುಂಪು ಹಂತದ 9 ಪಂದ್ಯಗಳಲ್ಲಿ ಒಂಬತ್ತನ್ನೂ ಗೆದ್ದು ಬೀಗಿರುವ ಭಾರತ ಕ್ರಿಕೆಟ್ ತಂಡಕ್ಕೆ ನಿಜವಾದ ಪರೀಕ್ಷೆಯನ್ನು ಪ್ರಾರಂಭವಾಗಿದೆ. ಬುಧವಾರ ವಿಶ್ವಕಪ್ 2023 ಮೊದಲ ಸೆಮಿಫೈನಲ್​ನಲ್ಲಿ ಭಾರತ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿ ಆಗಲಿದೆ.

1 / 9
ಭಾರತಕ್ಕೆ ಇದೊಂದು ಸೇಡಿನ ಪಂದ್ಯ ಎಂದು ಕೂಡ ಹೇಳಬಹುದು. ಯಾಕೆಂದರೆ, ಕಿವೀಸ್ ವಿರುದ್ಧ 2019 ರ ವಿಶ್ವಕಪ್ ಸೆಮಿ-ಫೈನಲ್​ನಲ್ಲಿ ಭಾರತ ಸೋತು ಟೂರ್ನಿಯಿಂದ ನಿರ್ಗಮಿಸಿತ್ತು. ಈಗ ಮತ್ತೊಮ್ಮೆ ಉಭಯ ತಂಡಗಳು ಸೆಮಿಫೈನಲ್​ನಲ್ಲಿ ಸೆಣೆಸಾಟ ನಡೆಸಲು ಸಜ್ಜಾಗುತ್ತಿದೆ. ರೋಹಿತ್ ಪಡೆ ವಾಂಖೆಡೆ ಸ್ಟೇಡಿಯಂನಲ್ಲಿ ಯಾವರೀತಿ ಪ್ರದರ್ಶನ ನೀಡುತ್ತೆ ನೋಡಬೇಕು.

2 / 9
ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್‌ನಲ್ಲಿ ಭಾರತ ಅತ್ಯಂತ ಬಲಿಷ್ಠವಾಗಿರುವ ತಂಡವಾಗಿದೆ. ಮೆನ್ ಇನ್ ಬ್ಲೂ ಗುಂಪು ಹಂತದಲ್ಲಿ ಒಂದೇ ಒಂದು ಸೋಲು ಕಾಣಲಿಲ್ಲ. ಎಲ್ಲ ಪಂದ್ಯವನ್ನು ಸುಲಭವಾಗಿ ಜಯಿಸಿದ್ದಾರೆ. ತಂಡದಲ್ಲಿ ಬದಲಾವಣೆ ಮಾಡಿದ್ದು ಕೂಡ ಕಡಿಮೆ. ಆದರೆ, ಈಗ ಸೆಮೀಸ್ ಕದನಕ್ಕೆ ಒಂದು ಬದಲಾವಣೆ ನಿರೀಕ್ಷಿಸಲಾಗಿದೆ.

3 / 9
ರೋಹಿತ್ ಶರ್ಮಾ ಮತ್ತು ರಾಹುಲ್ ದ್ರಾವಿಡ್‌ಗೆ ಪ್ಲೇಯಿಂಗ್ XI ಸಂಯೋಜನೆಯಲ್ಲಿ ಎದುರಾಳಿಗೆ ಟಕ್ಕರ್ ಕೊಡಲು ಪ್ರಯೋಗ ಮಾಡಬಹುದು. ಯಾಕೆಂದರೆ ಈ ಬಾರಿಯ ವಿಶ್ವಕಪ್​ನಲ್ಲಿ ನ್ಯೂಝಿಲೆಂಡ್ ಭಾರತವನ್ನು ಒಂದು ಬಾರಿ ಎದುರಿಸಿದೆ. ಹೀಗಾಗಿ ಭಾರತದ ಬೌಲರ್​ಗಳ ಕೆಲ ವರ್ಮವನ್ನು ಅವರು ಅರಿತಿರಬಹುದು. ಇದಕ್ಕಾಗಿ ಬೌಲಿಂಗ್ ವಿಭಾಗದಲ್ಲಿ ಹೊಸ ಆಟಗಾರ ಬರುವ ನಿರೀಕ್ಷೆಯಿದೆ.

4 / 9
ವಿಶ್ವಕಪ್ ಆರಂಭದಲ್ಲಿ ಸ್ಪಿನ್ ಮೂಲಕ ಮಾರಕವಾಗಿದ್ದ ಕುಲ್ದೀಪ್ ಯಾದವ್ ಈಗ ಯಾಕೊ ಮಂಕಾದಂತಿದೆ. ಹೀಗಾಗಿ ಇವರು ಜಾಗಕ್ಕೆ ರವಿಚಂದ್ರನ್ ಅಶ್ವಿನ್ ಕರೆತರುವ ಪ್ಲಾನ್ ಭಾರತ ಮಾಡಬಹುದು. ಅಲ್ಲದೆ ಅಶ್ವಿನ್ ಪ್ಲೇಯಿಂಗ್ ಇಲೆವೆನ್​ಗೆ ಬಂದರೆ ಸ್ಪಿನ್ ಜೊತೆ ಬ್ಯಾಟಿಂಗ್​ನಲ್ಲೂ ಕೊಡುಗೆ ನೀಡಬಲ್ಲರು.

5 / 9
ಉಳಿದಂತೆ ತಂಡದಲ್ಲಿ ಬದಲಾವಣೆ ಅನುಮಾನ. ನಾಯಕ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಟಿ20 ಮಾದರಿಯಂತೆ ತಂಡಕ್ಕೆ ಸ್ಫೋಟಕ ಆರಂಭ ಒದಗಿಸುತ್ತಿದ್ದಾರೆ. ಗಿಲ್ ಬ್ಯಾಟ್​ನಿಂದ ಇನ್ನೂ ಶತಕ ಬಂದಿಲ್ಲ ಎಂಬುದು ಬೇಸರವಷ್ಟೆ. ಕಿವೀಸ್ ವಿರುದ್ಧ ದೊಡ್ಡ ಸ್ಕೋರ್ ಮಾಡುತ್ತಾರ ನೋಡಬೇಕು.

6 / 9
ಪ್ರಸ್ತುತ ಅತಿ ಹೆಚ್ಚು ರನ್ ಗಳಿಸಿದ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ವಿರಾಟ್ ಕೊಹ್ಲಿ ಮೇಲೆ ಎಲ್ಲರ ಕಣ್ಣಿದೆ. ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ಇಬ್ಬರೂ ನೆದರ್ಲೆಂಡ್ಸ್ ವಿರುದ್ಧ ಶತಕಗಳನ್ನು ಸಿಡಿಸಿ ಬೊಂಬಾಟ್ ಫಾರ್ಮ್​ನಲ್ಲಿದ್ದಾರೆ. ಸೂರ್ಯಕುಮಾರ್​ಗೆ ಅವಕಾಶ ಸಿಕ್ಕಿದ್ದು ಕಡಿಮೆ. ಸಿಕ್ಕ ಸಂದರ್ಭ ತಂಡಕ್ಕೆ ನೆರವಾಗಿದ್ದಾರೆ.

7 / 9
ರವೀಂದ್ರ ಜಡೇಜಾ ಫಿನಿಶರ್‌ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ. ರವಿಚಂದ್ರನ್ ಅಶ್ವಿನ್ ಬಂದರೆ ಬ್ಯಾಟಿಂಗ್ ಡೆಪ್ತ್ ಹೆಚ್ಚಲಿದೆ. ವೇಗಿಗಳಾಗಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ ತಮ್ಮ ಪ್ರಬಲ ಸ್ವಿಂಗ್ ಮತ್ತು ವೇಗದಿಂದ ಮಾರಕವಾಗಿದ್ದಾರೆ.

8 / 9
ನ್ಯೂಝಿಲೆಂಡ್ ವಿರುದ್ಧದ ಪಂದ್ಯಕ್ಕೆ ಭಾರತ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ಉಪನಾಯಕ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ.

9 / 9
Follow us
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್

20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ

ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ

ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್

ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!

ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು

ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ

ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ

ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್