IND vs SL: ಗಂಭೀರ್, ಗಿಲ್ ತಲೆನೋವ ಶಮನಗೊಳಿಸಿದ ಜೈಸ್ವಾಲ್

Updated on: Aug 09, 2026 | 5:11 PM

Yashasvi Jaiswal half-century: ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಯಶಸ್ವಿ ಜೈಸ್ವಾಲ್ ತಮ್ಮ ಹಳೆಯ ಲಯಕ್ಕೆ ಮರಳಿದ್ದಾರೆ. ಅಭ್ಯಾಸ ಪಂದ್ಯದಲ್ಲಿ ಸೊನ್ನೆಗೆ ಔಟಾಗಿದ್ದರೂ, ಎರಡನೇ ಇನ್ನಿಂಗ್ಸ್‌ನಲ್ಲಿ 46 ಎಸೆತಗಳಲ್ಲಿ 61 ರನ್ ಸಿಡಿಸಿ ಅರ್ಧಶತಕ ಬಾರಿಸಿದರು. ಶುಭ್​ಮನ್ ಗಿಲ್ ಜೊತೆ 100 ರನ್ ಪಾಲುದಾರಿಕೆ ಸಹ ಹಂಚಿಕೊಂಡರು. ಗಿಲ್ ಕೂಡ 44 ರನ್ ಗಳಿಸಿದರೂ, ಬೆರಳಿನ ನೋವಿನಿಂದ ಬಳಲುತ್ತಿದ್ದು, ಮೊದಲ ಟೆಸ್ಟ್‌ಗೆ ಚೇತರಿಸಿಕೊಳ್ಳುವ ಭರವಸೆ ಇದೆ.

1 / 5
ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೂ ಮುನ್ನ ಭಾರತೀಯ ಟೆಸ್ಟ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ತಮ್ಮ ಹಳೆಯ ಲಯಕ್ಕೆ ಮರಳಿದ್ದಾರೆ. ಶ್ರೀಲಂಕಾ XI ವಿರುದ್ಧದ ಮೂರು ದಿನಗಳ ಅಭ್ಯಾಸ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಸೊನ್ನೆಗೆ ಔಟಾಗಿದ್ದ ಯಶಸ್ವಿ ಜೈಸ್ವಾಲ್, ಎರಡನೇ ಇನ್ನಿಂಗ್ಸ್‌ನಲ್ಲಿ ಅರ್ಧಶತಕ ಬಾರಿಸುವ ಮೂಲಕ ಫಾರ್ಮ್​ ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ(PC-BCCI).

2 / 5
ಮೊದಲ ಇನ್ನಿಂಗ್ಸ್‌ನಲ್ಲಿ ಎರಡು ಎಸೆತಗಳನ್ನು ಎದುರಿಸಿ ಖಾತೆ ತೆರೆಯದೆ ವಿಕೆಟ್ ಒಪ್ಪಿಸಿದ್ದ ಜೈಸ್ವಾಲ್ ಎರಡನೇ ಇನ್ನಿಂಗ್ಸ್‌ನಲ್ಲಿ 43 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರ್ಣಗೊಳಿಸಿದರು. ಆ ಬಳಿಕ 46 ಎಸೆತಗಳಲ್ಲಿ 61 ರನ್ ಗಳಿಸಿ ರಿಟೈರ್ಡ್​ ಹರ್ಟ್​ ಆದರು. 132.61 ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ ಜೈಸ್ವಾಲ್ ಎರಡು ಸಿಕ್ಸರ್‌ಗಳು ಮತ್ತು ಒಂಬತ್ತು ಬೌಂಡರಿಗಳನ್ನು ಸಹ ಬಾರಿಸಿದರು(PC-BCCI).

3 / 5
ಜೈಸ್ವಾಲ್ ಅರ್ಧಶತಕದ ಇನ್ನಿಂಗ್ಸ್ ಆಡುವುದರ ಜೊತೆಗೆ ನಾಯಕ ಶುಭ್​ಮನ್ ಗಿಲ್ ಅವರೊಂದಿಗೆ ಮೊದಲ ವಿಕೆಟ್​ಗೆ 90 ಎಸೆತಗಳಲ್ಲಿ 100 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು. ಅರ್ಧಶತಕದ ಬಳಿಕ ತಮ್ಮ ಗೇರ್ ಬದಲಿಸಿದ ಜೈಸ್ವಾಲ್ ಬೌಂಡರಿ ಬಾರಿಸುವುದರೊಂದಿಗೆ ಅರ್ಧಶತಕ ಪೂರೈಸಿದರೆ,  ಮುಂದಿನ ಎರಡು ಎಸೆತಗಳಲ್ಲಿ ಒಂದು ಸಿಕ್ಸರ್ ಮತ್ತು ಒಂದು ಬೌಂಡರಿ ಕೂಡ ಬಾರಿಸಿದರು(PC-BCCI).

4 / 5
ಜೈಸ್ವಾಲ್ ಜೊತೆಗೆ ನಾಯಕ ಶುಭ್​ಮನ್ ಗಿಲ್ ಕೂಡ ಉಪಯುಕ್ತ ಇನ್ನಿಂಗ್ಸ್ ಆಡಿದರು. ಗಾಯದಿಂದಾಗಿ ಮೊದಲೆರಡು ದಿನ ಕಣಕ್ಕಿಳಿಯದ ಗಿಲ್, ಪಂದ್ಯದ ಮೂರನೇ ದಿನದಾಟದಂದು 54 ಎಸೆತಗಳಲ್ಲಿ 7 ಬೌಂಡರಿಗಳ ಸಹಾಯದಿಂದ 44 ರನ್ ಗಳಿಸಿ ಔಟಾದರು. ಆದಾಗ್ಯೂ ಗಿಲ್​ಗೆ ಬೆರಳಿನ ನೋವು ಹಾಗೆಯೇ ಇದೆಯಾದರೂ ಮೊದಲ ಟೆಸ್ಟ್ ವೇಳೆಗೆ ಚೇತರಿಸಿಕೊಳ್ಳುವ ಭರವಸೆ ಇದೆ(PC-BCCI).

5 / 5
ಮೂರನೇ ದಿನದ ಆಟದ ಬಗ್ಗೆ ಹೇಳುವುದಾದರೆ, ಶ್ರೀಲಂಕಾ ಕ್ರಿಕೆಟ್ XI ತಂಡ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಿ 200 ರನ್​ಗಳಿಗೆ ಡಿಕ್ಲೇರ್ ಮಾಡಿತು. ಎರಡನೇ ಇನ್ನಿಂಗ್ಸ್‌ನಲ್ಲಿ, ಅನುಭವಿ ಸ್ಪಿನ್ನರ್ ರವೀಂದ್ರ ಜಡೇಜಾ ಟೀಂ ಇಂಡಿಯಾ ಪರ ಎರಡು ವಿಕೆಟ್‌ಗಳನ್ನು ಕಬಳಿಸಿದರೆ, ವೇಗದ ಬೌಲರ್ ಗುರ್ನೂರ್ ಬ್ರಾರ್ ಈ ಬಾರಿಯೂ ಎರಡು ವಿಕೆಟ್‌ಗಳನ್ನು ಪಡೆದು ಪರಿಣಾಮಕಾರಿ ಎಂದು ಸಾಬೀತುಪಡಿಸಿದರು(PC-BCCI).

Loading...
Unable to load recommendations.
Follow Us