AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AFG: ಅಫ್ಘಾನ್ ವಿರುದ್ಧ ಸೊನ್ನೆ ಸುತ್ತಿದರೂ ಎರಡೆರಡು ದಾಖಲೆ ಬರೆದ ರೋಹಿತ್ ಶರ್ಮಾ..!

IND vs AFG: ಈ ಪಂದ್ಯದಲ್ಲಿ ನಾಯಕ ರೋಹಿತ್​ ಶೂನ್ಯಕ್ಕೆ ಔಟಾದರು ಅವರ ಹೆಸರಿನಲ್ಲಿ ಅಪರೂಪದ ದಾಖಲೆಯೊಂದು ಸೃಷ್ಟಿಯಾಗಿದೆ. ಅಲ್ಲದೆ ಒಂದು ವಿಚಾರದಲ್ಲಿ ಈ ಹಿಂದೆ ಭಾರತ ಟಿ20 ತಂಡವನ್ನು ಮುನ್ನಡೆಸಿದ್ದ ಎಲ್ಲಾ ನಾಯಕರನ್ನು ಹಿಂದಿಕ್ಕಿದ್ದಾರೆ.

ಪೃಥ್ವಿಶಂಕರ
|

Updated on: Jan 11, 2024 | 9:43 PM

ಮೊಹಾಲಿಯಲ್ಲಿ ನಡೆಯುತ್ತಿರುವ ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಮೊದಲು ಬೌಲ್ ಮಾಡಿದ ಟೀಂ ಇಂಡಿಯಾ, ಅಫ್ಘಾನ್ ತಂಡವನ್ನು 159 ರನ್​ಗಳಿಗೆ ಕಟ್ಟಿಹಾಕಿದೆ. ಈ ಗುರಿ ಬೆನ್ನಟ್ಟಿರುವ ಭಾರತ ಕೂಡ ಗೆಲುವಿನ ಹಾದಿಯಲ್ಲಿದೆ.

1 / 8
ಆದರೆ ಈ ಪಂದ್ಯದಲ್ಲಿ ಬರೋಬ್ಬರಿ 14 ತಿಂಗಳ ನಂತರ ಭಾರತ ಟಿ20 ತಂಡಕ್ಕೆ ಮರಳಿದ್ದ ನಾಯಕ ರೋಹಿತ್ ಶರ್ಮಾ ಖಾತೆ ತೆರೆಯದೆ ಔಟಾದರು. ಇದು ಆರಂಭದಲ್ಲಿ ಭಾರತಕ್ಕೆ ಆರಂಭಿಕ ಹಿನ್ನಡೆಯನ್ನುಂಟು ಮಾಡಿತು. ಆದರೆ ಈಗ ಸುದಾರಿಸಿಕೊಂಡಿರುವ ಭಾರತ ಉತ್ತಮ ಬ್ಯಾಟಿಂಗ್ ಮಾಡುತ್ತಿದೆ.

2 / 8
ಈ ಪಂದ್ಯದಲ್ಲಿ ನಾಯಕ ರೋಹಿತ್​ ಶೂನ್ಯಕ್ಕೆ ಔಟಾದರು ಅವರ ಹೆಸರಿನಲ್ಲಿ ಅಪರೂಪದ ದಾಖಲೆಯೊಂದು ಸೃಷ್ಟಿಯಾಗಿದೆ. ಅಲ್ಲದೆ ಒಂದು ವಿಚಾರದಲ್ಲಿ ಈ ಹಿಂದೆ ಭಾರತ ಟಿ20 ತಂಡವನ್ನು ಮುನ್ನಡೆಸಿದ್ದ ಎಲ್ಲಾ ನಾಯಕರನ್ನು ಹಿಂದಿಕ್ಕಿದ್ದಾರೆ.

3 / 8
14 ತಿಂಗಳ ಬಳಿಕ ಟಿ20ಯಲ್ಲಿ ಭಾರತದ ನಾಯಕತ್ವ ವಹಿಸಿಕೊಂಡಿರುವ ರೋಹಿತ್ ಶರ್ಮಾ ಇದೀಗ ಟಿ20ಯಲ್ಲಿ ಭಾರತ ತಂಡವನ್ನು ಮುನ್ನಡೆಸಿದ ಅತ್ಯಂತ ಹಿರಿಯ ನಾಯಕ ಎನಿಸಿಕೊಂಡಿದ್ದಾರೆ. ರೋಹಿತ್ 36 ವರ್ಷ 256 ದಿನಗಳಲ್ಲಿ ಭಾರತ ತಂಡವನ್ನು ಮುನ್ನಡೆಸುವ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

4 / 8
ಇದರೊಂದಿಗೆ ಶಿಖರ್ ಧವನ್ ಅವರ ದಾಖಲೆಯನ್ನು ರೋಹಿತ್ ಮುರಿದಿದ್ದಾರೆ. ಇದಕ್ಕೂ ಮುನ್ನ ಶಿಖರ್ ಧವನ್ ಭಾರತ ಟಿ20 ತಂಡದ ಅತ್ಯಂತ ಹಿರಿಯ ನಾಯಕರಾಗಿದ್ದರು. ಅವರು 35 ವರ್ಷ 236 ದಿನಗಳಲ್ಲಿ ಭಾರತ ಟಿ20 ತಂಡವನ್ನು ನಾಯಕರಾಗಿ ಮುನ್ನಡೆಸಿದ್ದರು.

5 / 8
ಹಾಗೆಯೇ 35 ವರ್ಷ 52 ದಿನಗಳಲ್ಲಿ ಭಾರತ ಟಿ20 ತಂಡವನ್ನು ಮುನ್ನಡೆಸಿದ್ದ ಎಂಎಸ್ ಧೋನಿ, 33 ವರ್ಷ 3 ದಿನಗಳಲ್ಲಿ ಭಾರತ ಟಿ20 ತಂಡದ ನಾಯಕತ್ವವಹಿಸಿದ್ದ ವಿರಾಟ್ ಕೊಹ್ಲಿಯನ್ನು ಸಹ ಈ ವಿಚಾರದಲ್ಲಿ ಹಿಂದಿಕ್ಕಿದ್ದಾರೆ.

6 / 8
ಇದರೊಂದಿಗೆ ರೋಹಿತ್ ಶರ್ಮಾ ಭಾರತ ಪರ ಅತಿ ಹೆಚ್ಚು ಟಿ20 ಪಂದ್ಯಗಳನ್ನು ಆಡಿದ ಆಟಗಾರ ಎಂಬ ದಾಖಲೆಯನ್ನೂ ನಿರ್ಮಿಸಿದ್ದಾರೆ. ರೋಹಿತ್ ಇದುವರೆಗೆ ಭಾರತದ ಪರ 149ನೇ ಟಿ20 ಪಂದ್ಯ ಆಡುತ್ತಿದ್ದಾರೆ.

7 / 8
ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದು, ಅವರು 115 ಟಿ20 ಪಂದ್ಯಗಳನ್ನು ಆಡಿದ್ದಾರೆ. ಹಾಗೆಯೇ ಎಂಎಸ್ ಧೋನಿ 98 ಟಿ20 ಪಂದ್ಯಗಳನ್ನು ಆಡಿದ್ದರೆ, ಮತ್ತೊಂದೆಡೆ ಹಾರ್ದಿಕ್ ಪಾಂಡ್ಯ 92 ಟಿ20 ಪಂದ್ಯಗಳನ್ನು ಆಡಿದ್ದು, ಭುವನೇಶ್ವರ್ ಕುಮಾರ್ 87 ಟಿ20 ಪಂದ್ಯಗಳನ್ನು ಆಡಿದ್ದಾರೆ.

8 / 8
Follow us
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ

ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ

ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ

ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು

ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ

ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್

ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ

ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ

ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​

ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು