AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AFG: ಅರ್ಧಶತಕದಿಂದ ವಂಚಿತರಾದ್ರು ಹೊಸ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ

Rohit Sharma: ರೋಹಿತ್ ಶರ್ಮಾ 2027ರ ವಿಶ್ವಕಪ್ ಸ್ಥಾನಕ್ಕಾಗಿ ಅಫ್ಘಾನಿಸ್ತಾನ ಸರಣಿಯಲ್ಲಿ ಮಿಂಚಲೇಬೇಕಿದೆ. ಅರ್ಧಶತಕದ ಸನಿಹದಲ್ಲಿ ಎಡವಿದರೂ, ಲಿಸ್ಟ್ ಎ ಕ್ರಿಕೆಟ್‌ನಲ್ಲಿ 14,000 ರನ್‌ಗಳನ್ನು ಪೂರೈಸುವ ಮೂಲಕ ಪ್ರಮುಖ ಮೈಲಿಗಲ್ಲು ಸಾಧಿಸಿದ್ದಾರೆ. ಈ ಸಾಧನೆ ಮಾಡಿದ ಐದನೇ ಭಾರತೀಯ ಹಾಗೂ ವೇಗದ ಎರಡನೇ ಭಾರತೀಯ ಬ್ಯಾಟ್ಸ್‌ಮನ್ ಆಗಿದ್ದಾರೆ. ಸರಣಿ ಪ್ರದರ್ಶನ ಅವರ ಭವಿಷ್ಯಕ್ಕೆ ನಿರ್ಣಾಯಕವಾಗಿದೆ.

ಪೃಥ್ವಿಶಂಕರ
|

Updated on:Jun 17, 2026 | 3:02 PM

Share
ಟೀಂ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ 2027 ರ ನಡೆಯಲಿರುವ ಏಕದಿನ ವಿಶ್ವಕಪ್​ ತಂಡದಲ್ಲಿ ಸ್ಥಾನ ಪಡೆಯಬೇಕೆಂದರೆ ಪ್ರಸ್ತುತ ನಡೆಯುತ್ತಿರುವ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಮಿಂಚಲೇಬೇಕಿದೆ. ಮೊದಲ ಏಕದಿನದಲ್ಲಿ ಕೇವಲ 16 ರನ್​​ಗಳಿಗೆ ಸುಸ್ತಾಗಿದ್ದ ರೋಹಿತ್ ಎರಡನೇ ಏಕದಿನ ಪಂದ್ಯದಲ್ಲಿ ಲಯದಲ್ಲಿ ಕಾಣಿಸಿಕೊಂಡರಾದರೂ ಅರ್ಧಶತಕದಂಚಿನಲ್ಲಿ ಎಡವಿದರು (PC-PTI).

1 / 6
ಲಕ್ನೋದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ 39 ಎಸೆತಗಳನ್ನು ಎದುರಿಸಿದ ರೋಹಿತ್ 6 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 48 ರನ್ ಬಾರಿಸಿ ಔಟಾದರು. ಅಂದರೆ ರೋಹಿತ್ ಕೇವಲ 2 ರನ್​ಗಳಿಂದ ಈ ವರ್ಷದ ಮೊದಲ ಏಕದಿನ ಅರ್ಧಶತಕದಿಂದ ವಂಚಿತರಾದರು. ವಾಸ್ತವವಾಗಿ ರೋಹಿತ್ ಕಳೆದ ಡಿಸೆಂಬರ್​ನಲ್ಲಿ ಕೊನೆಯದಾಗಿ ಅರ್ಧಶತಕ ಬಾರಿಸಿದ್ದರು (PC-PTI).

2 / 6
ಅದಾದ ಬಳಿಕ ನಡೆದಿದ್ದ ನ್ಯೂಜಿಲೆಂಡ್ ಹಾಗೂ ಈಗ ನಡೆಯುತ್ತಿರುವ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ರೋಹಿತ್​ಗೆ ಅರ್ಧಶತಕದ ಗಡಿ ದಾಟಲು ಸಾಧ್ಯವಾಗಿಲ್ಲ. ಆದಾಗ್ಯೂ ಈ 48 ರನ್​ಗಳ ಇನ್ನಿಂಗ್ಸ್ ಮೂಲಕ ರೋಹಿತ್ 14,000 ಲಿಸ್ಟ್ ಎ ರನ್‌ಗಳನ್ನು ಪೂರ್ಣಗೊಳಿಸುವ ಮೂಲಕ ತಮ್ಮ ವೃತ್ತಿಜೀವನದಲ್ಲಿ ಮತ್ತೊಂದು ಪ್ರಮುಖ ಮೈಲಿಗಲ್ಲು ಸಾಧಿಸಿದರು (PC-PTI).

3 / 6
ಸೀಮಿತ ಓವರ್‌ಗಳ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ಆರಂಭಿಕ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿರುವ ರೋಹಿತ್ 4 ನೇ ಓವರ್‌ನ ಮೂರನೇ ಎಸೆತದಲ್ಲಿ ಸಿಕ್ಸ್ ಬಾರಿಸುವ ಮೂಲಕ ಈ ಮೈಲಿಗಲ್ಲು ತಲುಪಿದರು. ಈ ಮೂಲಕ ಈ ಸಾಧನೆ ಮಾಡಿದ ಐದನೇ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು (PC-PTI).

4 / 6
ರೋಹಿತ್​ಗೂ ಮೊದಲು, ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಸೌರವ್ ಗಂಗೂಲಿ ಮತ್ತು ರಾಹುಲ್ ದ್ರಾವಿಡ್ ಲಿಸ್ಟ್ ಎ ಕ್ರಿಕೆಟ್‌ನಲ್ಲಿ 14000 ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಆದಾಗ್ಯೂ ಅತಿ ಕಡಿಮೆ ಇನ್ನಿಂಗ್ಸ್​ಗಳಲ್ಲಿ  14,000 ಲಿಸ್ಟ್ ಎ ರನ್‌ಗಳನ್ನು ಪೂರೈಸಿದ ಭಾರತದ ಎರಡನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ರೋಹಿತ್ ಪಾತ್ರರಾಗಿದ್ದಾರೆ (PC-PTI).

5 / 6
ರೋಹಿತ್ ಶರ್ಮಾ ತಮ್ಮ 345 ನೇ ಇನ್ನಿಂಗ್ಸ್‌ನಲ್ಲಿ 14,000 ಲಿಸ್ಟ್ ಎ ರನ್‌ಗಳನ್ನು ಪೂರೈಸಿದ್ದಾರೆ. 290 ಇನ್ನಿಂಗ್ಸ್‌ಗಳಲ್ಲಿ ಈ ಮೈಲಿಗಲ್ಲು ತಲುಪಿರುವ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಸಚಿನ್ ತೆಂಡೂಲ್ಕರ್ ಈ ಮೈಲಿಗಲ್ಲು ದಾಟಲು 348 ಇನ್ನಿಂಗ್ಸ್‌ಗಳನ್ನು ತೆಗೆದುಕೊಂಡಿದ್ದರು (PC-PTI).

6 / 6

Published On - 3:01 pm, Wed, 17 June 26

Follow Us
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ

ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು

ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ

ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ

ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!

ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್

ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ

ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು

ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!

ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು