- Kannada News Photo gallery Cricket photos IND vs AFG 3rd t20i team indias records in m chinnaswamy stadium bengaluru
IND vs AFG: ಬೆಂಗಳೂರಿನಲ್ಲಿ 6 ವರ್ಷಗಳ ಹಿಂದೆ ರನ್‌ಗಳ ಮಳೆ ಸುರಿಸಿದ್ದ ಟೀಂ ಇಂಡಿಯಾ..!
IND vs AFG: ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನ ಬ್ಯಾಟರ್ಗಳಿಗೆ ಹೆಚ್ಚು ನೆರವಾಗುತ್ತದೆ. ಹೀಗಾಗಿ ಬೆಂಗಳೂರಿನಲ್ಲಿ ಟಿ20ಯೇ ಇರಲಿ ಅಥವಾ ಏಕದಿನ ಪಂದ್ಯವೇ ಇರಲಿ. ಇಲ್ಲಿ ಸಾಕಷ್ಟು ರನ್‌ಗಳ ಮಳೆ ಸುರಿಯುತ್ತದೆ. ಇದಕ್ಕೆ ಪೂರಕವಾಗಿ ಸುಮಾರು 6 ವರ್ಷಗಳ ಹಿಂದೆ ಈ ನೆಲದಲ್ಲಿಯೇ ಟೀಂ ಇಂಡಿಯಾ ದಾಖಲೆ ನಿರ್ಮಿಸಿತ್ತು.
Updated on: Jan 15, 2024 | 7:46 PM

ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಮೂರನೇ ಟಿ20 ಪಂದ್ಯ ಬೆಂಗಳೂರಿನಲ್ಲಿ ಇದೇ ಜನವರಿ 17 ರಂದು ನಡೆಯಲ್ಲಿದೆ. ಭಾರತ ಈಗಾಗಲೇ ಟಿ20 ಸರಣಿ ಗೆದ್ದಿರುವುದರಿಂದ ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಟಾಸ್ ಗೆದ್ದರೆ ಮೊದಲು ಬ್ಯಾಟಿಂಗ್ ಮಾಡುವ ಸಾಧ್ಯತೆಗಳು ಹೆಚ್ಚಿವೆ. ಇದರೊಂದಿಗೆ ಈ ಪಂದ್ಯದಲ್ಲಿ ರನ್‌ಗಳ ಮಳೆ ಹರಿಯುವ ನಿರೀಕ್ಷೆ ಹೆಚ್ಚಾಗಿದೆ.

ವಾಸ್ತವವಾಗಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನ ಬ್ಯಾಟರ್ಗಳಿಗೆ ಹೆಚ್ಚು ನೆರವಾಗುತ್ತದೆ. ಹೀಗಾಗಿ ಬೆಂಗಳೂರಿನಲ್ಲಿ ಟಿ20ಯೇ ಇರಲಿ ಅಥವಾ ಏಕದಿನ ಪಂದ್ಯವೇ ಇರಲಿ. ಇಲ್ಲಿ ಸಾಕಷ್ಟು ರನ್‌ಗಳ ಮಳೆ ಸುರಿಯುತ್ತದೆ. ಇದಕ್ಕೆ ಪೂರಕವಾಗಿ ಸುಮಾರು 6 ವರ್ಷಗಳ ಹಿಂದೆ ಈ ನೆಲದಲ್ಲಿಯೇ ಟೀಂ ಇಂಡಿಯಾ ದಾಖಲೆ ನಿರ್ಮಿಸಿತ್ತು.

2017ರಲ್ಲಿ ಈ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಟಿ20 ಅಂತಾರಾಷ್ಟ್ರೀಯ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 202 ರನ್ ಗಳಿಸಿತ್ತು. ಭಾರತದ ಪರ ಸುರೇಶ್ ರೈನಾ 45 ಎಸೆತಗಳಲ್ಲಿ 65 ರನ್ ಮತ್ತು ಎಂಎಸ್ ಧೋನಿ 36 ಎಸೆತಗಳಲ್ಲಿ 56 ರನ್ ಗಳಿಸಿ ಅತ್ಯುತ್ತಮ ಇನ್ನಿಂಗ್ಸ್ ಆಡಿದರು.

ಈ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಅವರು ಕೆಎಲ್ ರಾಹುಲ್ ಅವರೊಂದಿಗೆ ಓಪನಿಂಗ್ ಮಾಡಿದರು. ಆದರೆ ಕೊಹ್ಲಿ ಕೇವಲ 2 ರನ್ ಮತ್ತು ರಾಹುಲ್ 22 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇದಾದ ಬಳಿಕ 203 ರನ್‌ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡವು ಕೇವಲ 16.3 ಓವರ್‌ಗಳಲ್ಲಿ 127 ರನ್‌ಗಳಿಗೆ ಆಲೌಟ್ ಆಗಿತ್ತು.

ಈ ಪಂದ್ಯದಲ್ಲಿ ಯಜುವೇಂದ್ರ ಚಹಾಲ್ ಟೀಂ ಇಂಡಿಯಾ ಪರ ಅತ್ಯಧಿಕ 6 ವಿಕೆಟ್ ಕಬಳಿಸಿದ್ದರು. ಇವರೊಂದಿಗೆ ಜಸ್ಪ್ರೀತ್ ಬುಮ್ರಾ ಕೂಡ ಮೂರು ವಿಕೆಟ್ ಪಡೆದರು. ಈ ಪಂದ್ಯದಲ್ಲಿ 202 ರನ್ ಕಲೆಹಾಕಿದ್ದ ಭಾರತ ಅಂತಾರಾಷ್ಟ್ರೀಯ ಟಿ20 ಯಲ್ಲಿ ಅಧಿಕ ರನ್ ಕಲೆಹಾಕಿದ ಮೊದಲ ತಂಡ ಎನಿಸಿಕೊಂಡಿತು.

ಇದರೊಂದಿಗೆ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಟಿ20ಯಲ್ಲಿ ತಂಡವೊಂದು ಕಲೆಹಾಕಿದ ಎರಡನೇ ಅತ್ಯಧಿಕ ಸ್ಕೋರ್ ಬಗ್ಗೆ ಮಾತನಾಡುವುದಾದರೆ, 2019 ರಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಪಂದ್ಯದಲ್ಲಿ ಭಾರತ ನೀಡಿದ 190 ರನ್‌ಗಳ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಕೇವಲ ಮೂರು ವಿಕೆಟ್ ಕಳೆದುಕೊಂಡು 194 ರನ್ ಕಲೆಹಾಕಿತ್ತು.




