ಟೀಮ್ ಇಂಡಿಯಾದಿಂದ 8 ಆಟಗಾರರು ಔಟ್

Updated on: Sep 02, 2026 | 8:27 AM

India vs Afghanistan: ಭಾರತ ಮತ್ತು ಅಫ್ಘಾನಿಸ್ತಾನ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಸೆಪ್ಟೆಂಬರ್ 13 ರಿಂದ ಶುರುವಾಗಲಿದೆ. ಈ ಸರಣಿಗಾಗಿ ಈಗಾಗಲೇ ಭಾರತ ತಂಡವನ್ನು ಘೋಷಿಸಲಾಗಿದ್ದು, ಈ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿರುವ 8 ಆಟಗಾರರ ಪಟ್ಟಿ ಇಲ್ಲಿದೆ.

1 / 10
ಅಫ್ಘಾನಿಸ್ತಾನ್ ವಿರುದ್ದದ ಟಿ20 ಸರಣಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ ಈ ಬಾರಿ 8 ಆಟಗಾರರು ಸ್ಥಾನ ಪಡೆದಿಲ್ಲ. ಅಂದರೆ ಕಳೆದ ಸರಣಿಯಲ್ಲಿ ಭಾರತ ಟಿ20 ತಂಡದಲ್ಲಿ ಕಾಣಿಸಿಕೊಂಡಿದ್ದ ಎಂಟು ಆಟಗಾರರನ್ನು ಈ ಬಾರಿ ಕೈ ಬಿಡಲಾಗಿದೆ. ಆ ಆಟಗಾರರು ಯಾರೆಂದರೆ... (PC: BCCI)

ಅಫ್ಘಾನಿಸ್ತಾನ್ ವಿರುದ್ದದ ಟಿ20 ಸರಣಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ ಈ ಬಾರಿ 8 ಆಟಗಾರರು ಸ್ಥಾನ ಪಡೆದಿಲ್ಲ. ಅಂದರೆ ಕಳೆದ ಸರಣಿಯಲ್ಲಿ ಭಾರತ ಟಿ20 ತಂಡದಲ್ಲಿ ಕಾಣಿಸಿಕೊಂಡಿದ್ದ ಎಂಟು ಆಟಗಾರರನ್ನು ಈ ಬಾರಿ ಕೈ ಬಿಡಲಾಗಿದೆ. ಆ ಆಟಗಾರರು ಯಾರೆಂದರೆ... (PC: BCCI)

2 / 10

ರಿಂಕು ಸಿಂಗ್: ಝಿಂಬಾಬ್ವೆ ವಿರುದ್ಧದ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಕಣಕ್ಕಿಳಿದಿದ್ದ ರಿಂಕು ಸಿಂಗ್, ಕೇವಲ 14 ಎಸೆತಗಳಲ್ಲಿ 25 ರನ್ ಗಳಿಸುವ ಮೂಲಕ ತಂಡದ ಗೆಲುವಿಗೆ ಪ್ರಮುಖ ಕೊಡುಗೆ ನೀಡಿದ್ದರು. ಆದಾಗ್ಯೂ, ಅಫ್ಘಾನಿಸ್ತಾನ್ ವಿರುದ್ಧದ ಮುಂಬರುವ ಸರಣಿಯಿಂದ ಅವರನ್ನು ಕೈಬಿಡಲಾಗಿದೆ. (PC: BCCI)

3 / 10

ಮಯಾಂಕ್ ಯಾದವ್: ಝಿಂಬಾಬ್ವೆ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯಲ್ಲಿ ಕಣಕ್ಕಿಳಿದಿದ್ದ ಮಯಾಂಕ್ ಯಾದವ್, ಭರ್ಜರಿ ಮೂಲಕ ಒಟ್ಟು 5 ವಿಕೆಟ್ ಪಡೆದು ಮಿಂಚಿದ್ದರು. ಅಲ್ಲದೆ ಸರಣಿಯ ಮೊದಲ ಪಂದ್ಯದಲ್ಲೇ 2/18 ಅದ್ಭುತ ಪ್ರದರ್ಶನ ನೀಡಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಇದಾಗ್ಯೂ, ಅಫ್ಘಾನಿಸ್ತಾನ್ ವಿರುದ್ಧದ ಮುಂಬರುವ ಸರಣಿಯಿಂದ ಇವರನ್ನು ಕೈಬಿಡಲಾಗಿದೆ. (PC: BCCI)

4 / 10

ಪ್ರಭ್​ಸಿಮ್ರಾನ್ ಸಿಂಗ್: ಝಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಭಾರತದ 15 ಸದಸ್ಯರ ಅಧಿಕೃತ ಸ್ಕ್ವಾಡ್‌ನಲ್ಲಿ ಬ್ಯಾಕಪ್ ವಿಕೆಟ್ ಕೀಪರ್ ಆಗಿ ಆಯ್ಕೆಯಾಗಿದ್ದರು. ಆದರೆ, ಪ್ರಮುಖ ವಿಕೆಟ್ ಕೀಪರ್ ಆಗಿ ಇಶಾನ್ ಕಿಶನ್ ಸರಣಿಯ ಎಲ್ಲಾ ಪಂದ್ಯಗಳಲ್ಲಿ ಆಡಿದ್ದರಿಂದ ಪ್ರಭ್‌ಸಿಮ್ರಾನ್​​ಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಸಿಗಲಿಲ್ಲ. ಇದೀಗ ಮುಂಬರುವ ಅಫ್ಘಾನಿಸ್ತಾನ ವಿರುದ್ಧದ ಸರಣಿಯಿಂದ ಇವರನ್ನು ಕೈಬಿಡಲಾಗಿದೆ. (PC: BCCI)

5 / 10

ಹರ್ಷ್ ದುಬೆ: ಝಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಸ್ಪಿನ್ ಆಲ್​ರೌಂಡರ್ ಆಗಿ ಸ್ಥಾನ ಪಡೆದಿದ್ದ ಹರ್ಷ್ ದುಬೆಗೂ ಕೂಡ ಒಂದೇ ಒಂದು ಮ್ಯಾಚ್ ಆಡಲು ಅವಕಾಶ ಸಿಕ್ಕಿರಲಿಲ್ಲ. ಇದೀಗ ಅಕ್ಷರ್ ಪಟೇಲ್ ಆಗಮನದೊಂದಿಗೆ ಅಫ್ಘಾನಿಸ್ತಾನ್ ವಿರುದ್ಧದ ಸರಣಿಯಿಂದ ಹರ್ಷ್ ದುಬೆ ಹೊರಬಿದ್ದಿದ್ದಾರೆ. (PC: BCCI)

6 / 10

ಸೂರ್ಯಾಂಶ್ ಶೇಡ್ಗೆ: ಝಿಂಬಾಬ್ವೆ ವಿರುದ್ಧದ ಟಿ20 ಸರಣಿಯಲ್ಲಿ ಕೇವಲ 1 ಪಂದ್ಯದಲ್ಲಿ ಕಾಣಿಸಿಕೊಂಡಿದ್ದ ಸೂರ್ಯಾಂಶ್ ಶೇಡ್ಗೆ ಅವರಿಗೆ ಆ ಪಂದ್ಯದಲ್ಲಿ ಬ್ಯಾಟಿಂಗ್ ಮಾಡಲು ಅವಕಾಶ ಸಿಗಲಿಲ್ಲ. ಬೌಲಿಂಗ್‌ನಲ್ಲಿ 2 ಓವರ್ ಎಸೆದು 15 ರನ್ ನೀಡಿದ್ದಾರಾದರೂ ಯಾವುದೇ ವಿಕೆಟ್ ಪಡೆಯಲು ಸಾಧ್ಯವಾಗಲಿಲ್ಲ. ಕೇವಲ ಒಂದೇ ಪಂದ್ಯದ ಅವಕಾಶದ ಬಳಿಕ, ಅಫ್ಘಾನಿಸ್ತಾನ್ ವಿರುದ್ಧದ ಮುಂಬರುವ ಸರಣಿಯಿಂದ ಇವರನ್ನು ತಂಡದಿಂದ ಹೊರಗಿಡಲಾಗಿದೆ. (PC: BCCI)

7 / 10

ಅಶೋಕ್ ಶರ್ಮಾ: ಝಿಂಬಾಬ್ವೆ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡದ ಪರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಅಶೋಕ್ ಶರ್ಮಾ, ಈ ಸರಣಿಯಲ್ಲಿ ಒಟ್ಟು 2 ಪಂದ್ಯಗಳನ್ನು ಆಡಿದ್ದಾರೆ. ಆದರೆ ಕೇವಲ 1 ವಿಕೆಟ್ ಪಡೆಯಲಷ್ಟೇ ಶಕ್ತರಾಗಿದ್ದರು. ಹೀಗಾಗಿ ಇದೀಗ ಅಫ್ಘಾನಿಸ್ತಾನ್ ವಿರುದ್ಧದ ಸರಣಿಯಿಂದ ಕೈ ಬಿಡಲಾಗಿದೆ. (PC: BCCI)

8 / 10

ಯಶ್ ಠಾಕೂರ್: ಝಿಂಬಾಬ್ವೆ ವಿರುದ್ಧದ ಟಿ20 ಸರಣಿಯ 2ನೇ ಪಂದ್ಯದಲ್ಲಿ ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿದ ಯಶ್ ಠಾಕೂರ್, ಸರಣಿಯಲ್ಲಿ ಒಟ್ಟು 2 ಪಂದ್ಯಗಳನ್ನು ಆಡುವ ಅವಕಾಶ ಪಡೆದಿದ್ದರು. ತಮ್ಮ ಚಾಣಾಕ್ಷ ಬೌಲಿಂಗ್ ಪ್ರದರ್ಶನದ ಮೂಲಕ ಒಟ್ಟು 3 ವಿಕೆಟ್ ಕಸಿದುಕೊಂಡು ಗಮನ ಸೆಳೆದಿದ್ದರು. ಆದರೆ ಇದೀಗ ಅಫ್ಘಾನ್ ವಿರುದ್ಧದ ಸರಣಿಗೆ ಆಯ್ಕೆಯಾಗಿಲ್ಲ. (PC: BCCI)

9 / 10

ಪ್ರಿನ್ಸ್ ಯಾದವ್: ಝಿಂಬಾಬ್ವೆ ವಿರುದ್ಧದ ಟಿ20 ಸರಣಿಯ ಮೊದಲ 2 ಪಂದ್ಯಗಳಲ್ಲಿ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದ ಪ್ರಿನ್ಸ್ ಯಾದವ್, ಭರ್ಜರಿ ಬೌಲಿಂಗ್ ಮೂಲಕ ಒಟ್ಟು 4 ವಿಕೆಟ್ ಪಡೆದು ಮಿಂಚಿದ್ದರು. ಇದಾಗ್ಯೂ ಅಫ್ಘಾನಿಸ್ತಾನ್ ವಿರುದ್ಧದ ಸರಣಿಗೆ ಆಯ್ಕೆ ಮಾಡಲಾದ ಭಾರತ ಟಿ20 ತಂಡದಲ್ಲಿ ಪ್ರಿನ್ಸ್ ಯಾದವ್ ಸ್ಥಾನ ಪಡೆದಿಲ್ಲ. (PC: BCCI)

10 / 10

ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ (ಉಪನಾಯಕ), ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ*, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್*, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್. ಹರ್ಷಿತ್ ರಾಣಾ*, ರವಿ ಬಿಷ್ಣೋಯ್, ಜಸ್​ಪ್ರೀತ್ ಬುಮ್ರಾ*.

Loading...
Unable to load recommendations.
Follow Us