
ಹದಿನೈದನೆ ಆವೃತ್ತಿಯ ಏಷ್ಯಾಕಪ್ ಟೂರ್ನಿಯ ಲೀಗ್ ಹಂತದಲ್ಲಿ ಆಡಿದ ಎರಡೂ ಪಂದ್ಯವನ್ನು ಗೆದ್ದು ಭಾರತ ಸೂಪರ್ 4 ಹಂತಕ್ಕೆ ಪ್ರವೇಶ ಪಡೆದಿತ್ತು. ಆದರೆ, ಇಲ್ಲಿ ಪಾಕಿಸ್ತಾನ ಹಾಗೂ ಶ್ರೀಲಂಕಾ ವಿರುದ್ಧ ಸೋಲುವ ಮೂಲಕ ಭಾರತ ಟೂರ್ನಿಯಿಂದ ಹೊರಬಿದ್ದಿದೆ. ಇದರ ನಡುವೆ ಇಂದು ಭಾರತ ಹಾಗೂ ಅಫ್ಘಾನಿಸ್ತಾನ ನಡುವೆ ಔಪಚಾರಿಕ ಪಂದ್ಯ ನಡೆಯಲಿದೆ.

ರೋಹಿತ್ ಪಡೆ ಇದರಲ್ಲಾದರು ಗೆದ್ದು ಮಾನ ಉಳಿಸಿಕೊಳ್ಳಲು ಹೋರಾಟ ನಡೆಸಬೇಕಿದೆ. ಟೂರ್ನಿಯುದ್ದಕ್ಕೂ ಎದುರಾಳಿಗರಿಗೆ ಕಠಿಣ ಸವಾಲು ನೀಡಿರುದ ನಬಿ ಪಡೆ ಭಾರತ ವಿರುದ್ಧ ಹೇಗೆ ಆಡುತ್ತೆ ಎಂಬುದು ಕುತೂಹಲ ಕೆರಳಿಸಿದೆ. ಹೀಗಾಗಿ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಹೈವೋಲ್ಟೇಜ್ ಪಂದ್ಯ ನಿರೀಕ್ಷಿಸಲಾಗಿದೆ.

ಇಂದಿನ ಪಂದ್ಯ ಉಭಯ ತಂಡಗಳಿಗೆ ಯಾವುದೇ ಪ್ರಯೋಜನ ನೀಡುವುದಿಲ್ಲ. ಆದರೂ ಮುಂದಿನ ತಿಂಗಳು ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ದೃಷ್ಟಿಯಲ್ಲಿಟ್ಟುಕೊಂಡು ತಂಡದಲ್ಲಿ ಬದಲಾವಣೆ ಮಾಡಿ ಕೆಲವರಿಗೆ ಅವಕಾಶ ನೀಡುವ ಸಾಧ್ಯತೆ ಇದೆ.

ಟೀಮ್ ಇಂಡಿಯಾ ಪರ ಸತತ ಕಳಪೆ ಫಾರ್ಮ್ ನಿಂದ ತತ್ತರಿಸಿರುವ ಕೆಎಲ್ ರಾಹುಲ್ ಹೊರಗುಳಿಯಬಹುದು. ಇವರ ಬದಲು ದಿನೇಶ್ ಕಾರ್ತಿಕ್ ಸ್ಥಾನ ಪಡೆಯುವ ಸಂಭವವಿದೆ.

ಯುಜ್ವೇಂದ್ರ ಚಹಲ್ ಕೈಬಿಟ್ಟು ಅಕ್ಷರ್ ಪಟೇಲ್ ಪ್ಲೇಯಿಂಗ್ XI ನಲ್ಲಿ ಕಾಣಿಸಿಕೊಳ್ಳಬಹುದು. ಟೂರ್ನಿಯುದ್ದಕ್ಕೂ ದುಬಾರಿ ಎನಿಸಿರುವ ಅರ್ಶ್ ದೀಪ್ ಸಿಂಗ್ ಬದಲು ದೀಪಕ್ ಚಹರ್ ಆಡಿದರೆ ಅಚ್ಚರಿ ಪಡಬೇಕಿಲ್ಲ.

ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಪಿಚ್ ಸಮಯೋಜಿತವಾಗಿದೆ. ಹೊಸ ಚೆಂಡಿನಲ್ಲಿ ವೇಗಿಗಳು ಲಾಭ ಪಡೆದುಕೊಳ್ಳಬಹುದಾಗಿದೆ. ಆದರೆ, ಈ ಪಿಚ್‌ನಲ್ಲಿ ವಿಕೆಟ್‌ಗಳನ್ನು ಉಳಿಸಿಕೊಳ್ಳುವುದು ಬಹುಮುಖ್ಯ ಸಂಗತಿಯಾಗಿದೆ. ಪಂದ್ಯ ಸಾಗುತ್ತಿದ್ದಂತೆ ಬ್ಯಾಟಿಂಗ್ ಸ್ವಲ್ಪ ಸುಲಭವಾಗುತ್ತದೆ.

ಭಾರತ ಸಂಭಾವ್ಯ ಪ್ಲೇಯಿಂಗ್ XI:: ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆಟ್‌ಕೀಪರ್), ದೀಪಕ್ ಹೂಡ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ದೀಪಕ್ ಚಹರ್, ಭುವನೇಶ್ವರ್ ಕುಮಾರ್, ಆರ್. ಅಶ್ವಿನ್.