IND vs AFG: ಕ್ರಿಕೆಟ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟರ್ ರೋಹಿತ್ ಶರ್ಮಾ..!

Updated on: Jan 18, 2024 | 6:43 PM

IND vs AFG, Rohit Sharma: ಅಫ್ಘಾನಿಸ್ತಾನ ವಿರುದ್ಧದ ಈ ಪಂದ್ಯದಲ್ಲಿ ರೋಹಿತ್ ಶರ್ಮಾ 69 ಎಸೆತಗಳಲ್ಲಿ ಅಜೇಯ 121 ರನ್ ಗಳಿಸಿದ್ದರು. ಇದರಲ್ಲಿ 11 ಬೌಂಡರಿ ಹಾಗೂ 8 ಸಿಕ್ಸರ್‌ಗಳು ಸೇರಿದ್ದವು. ಇದರೊಂದಿಗೆ ಭಾರತದಲ್ಲಿ 300 ಅಂತಾರಾಷ್ಟ್ರೀಯ ಸಿಕ್ಸರ್‌ಗಳನ್ನು ರೋಹಿತ್ ಪೂರೈಸಿದರು.

1 / 8
ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯ ಕೊನೆಯ ಪಂದ್ಯ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಸ್ಮರಣೀಯವಾಗಿತ್ತು. ಈ ಪಂದ್ಯದಲ್ಲಿ ದಾಖಲೆಯ ಐದನೇ ಟಿ20 ಶತಕ ಸಡಿಸಿದ ನಾಯಕ ರೋಹಿತ್, ಇದಾದ ಬಳಿಕ ಸೂಪರ್ ಓವರ್‌ನಲ್ಲಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯ ಕೊನೆಯ ಪಂದ್ಯ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಸ್ಮರಣೀಯವಾಗಿತ್ತು. ಈ ಪಂದ್ಯದಲ್ಲಿ ದಾಖಲೆಯ ಐದನೇ ಟಿ20 ಶತಕ ಸಡಿಸಿದ ನಾಯಕ ರೋಹಿತ್, ಇದಾದ ಬಳಿಕ ಸೂಪರ್ ಓವರ್‌ನಲ್ಲಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

2 / 8

ಅದೇ ಸಮಯದಲ್ಲಿ, ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಡಬಲ್ ಸೂಪರ್ ಓವರ್ ಪಂದ್ಯವನ್ನು ಗೆದ್ದ ಮೊದಲ ನಾಯಕ ಎಂಬ ದಾಖಲೆಯನ್ನು ರೋಹಿತ್ ಬರೆದರು. ಇದರೊಂದಿಗೆ 179 ವರ್ಷಗಳ ಕ್ರಿಕೆಟ್ ಇತಿಹಾಸದಲ್ಲಿ ಯಾವೊಬ್ಬ ಆಟಗಾರನ ಹೆಸರಲ್ಲೂ ಇಲ್ಲದ ದಾಖಲೆಯನ್ನು ರೋಹಿತ್ ತಮ್ಮ ಖಾತೆಗೆ ಹಾಕಿಕೊಂಡರು.

3 / 8

ಅಫ್ಘಾನಿಸ್ತಾನ ವಿರುದ್ಧದ ಈ ಪಂದ್ಯದಲ್ಲಿ ರೋಹಿತ್ ಶರ್ಮಾ 69 ಎಸೆತಗಳಲ್ಲಿ ಅಜೇಯ 121 ರನ್ ಗಳಿಸಿದ್ದರು. ಇದರಲ್ಲಿ 11 ಬೌಂಡರಿ ಹಾಗೂ 8 ಸಿಕ್ಸರ್‌ಗಳು ಸೇರಿದ್ದವು. ಇದರೊಂದಿಗೆ ಭಾರತದಲ್ಲಿ 300 ಅಂತಾರಾಷ್ಟ್ರೀಯ ಸಿಕ್ಸರ್‌ಗಳನ್ನು ರೋಹಿತ್ ಪೂರೈಸಿದರು.

4 / 8

ಈ ಮೂಲಕ ಕ್ರಿಕೆಟ್ ಇತಿಹಾಸದಲ್ಲಿ 300 ಸಿಕ್ಸರ್‌ಗಳ ಗಡಿ ದಾಟಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ರೋಹಿತ್ ಪಾತ್ರರಾದರು. ಭಾರತದಲ್ಲಿ 173 ಪಂದ್ಯಗಳನ್ನು ಆಡಿರುವ ರೋಹಿತ್ ಇದುವರೆಗೆ 301 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

5 / 8

ಇನ್ನು ಈ ಪಟ್ಟಿಯಲ್ಲಿ ತಮ್ಮ ದೇಶದಲ್ಲಿ 256 ಸಿಕ್ಸರ್‌ಗಳನ್ನು ಬಾರಿಸಿರುವ ನ್ಯೂಜಿಲೆಂಡ್‌ನ ಮಾರ್ಟಿನ್ ಗಪ್ಟಿಲ್ ಎರಡನೇ ಸ್ಥಾನದಲ್ಲಿದ್ದರೆ, ಬ್ರೆಂಡನ್ ಮೆಕಲಮ್ 230 ಸಿಕ್ಸರ್‌ಗಳೊಂದಿಗೆ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

6 / 8

ಅಷ್ಟೆ ಅಲ್ಲದೆ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನಾಯಕ ರೋಹಿತ್ ಶರ್ಮಾ ಟಿ20ಯಲ್ಲಿ ಇದುವರೆಗೆ 90 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

7 / 8

ಈ ಮೂಲಕ ಟಿ20ಯಲ್ಲಿ ನಾಯಕನಾಗಿ 86 ಸಿಕ್ಸರ್ ಬಾರಿಸಿದ್ದ ಇಯಾನ್​ ಮಾರ್ಗನ್​ರನ್ನು ರೋಹಿತ್ ಹಿಂದಿಕ್ಕಿದ್ದಾರೆ. ಆರನ್ ಫಿಂಚ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು, ನಾಯಕನಾಗಿ ಅವರು 82 ಸಿಕ್ಸರ್ ಬಾರಿಸಿದ್ದರು. ವಿರಾಟ್ ಕೊಹ್ಲಿ 59 ಸಿಕ್ಸರ್‌ಗಳೊಂದಿಗೆ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

8 / 8

ಟಿ20 ಯಲ್ಲಿ ನಾಯಕನಾಗಿ ರೋಹಿತ್ ಶರ್ಮಾ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಪ್ರಸ್ತುತ ರೋಹಿತ್ 1648 ರನ್​ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ವಿರಾಟ್ ಕೊಹ್ಲಿ 50 ಟಿ20 ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ್ದು, 47.57 ಸರಾಸರಿಯಲ್ಲಿ 1,570 ರನ್ ಕಲೆಹಾಕಿ ಎರಡನೇ ಸ್ಥಾನದಲ್ಲಿದ್ದಾರೆ.

Published On - 6:42 pm, Thu, 18 January 24

Loading...
Unable to load recommendations.
Follow Us