- Kannada News Photo gallery Cricket photos IND vs AFG Rohit Sharma breaks virat kohli’s unique record
IND vs AFG: ಕಿಂಗ್ ಕೊಹ್ಲಿ ದಾಖಲೆ ಮುರಿದು ವಿಶ್ವದ ನಂ.1 ಬ್ಯಾಟರ್ ಎನಿಸಿಕೊಂಡ ರೋಹಿತ್..!
IND vs AFG, Rohit Sharma: ಅಫ್ಘಾನಿಸ್ತಾನ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ದಾಖಲೆಯ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಕೇವಲ 69 ಎಸೆತಗಳನ್ನು ಎದುರಿಸಿದ ರೋಹಿತ್ 11 ಬೌಂಡರಿ ಹಾಗೂ 8 ಸಿಕ್ಸರ್ ಸಹಿತ ಅಜೇಯ 121 ರನ್ ಕಲೆಹಾಕಿದರು. ಈ ಮೂಲಕ ಅನೇಕ ದಾಖಲೆಗಳನ್ನು ರೋಹಿತ್ ಸೃಷ್ಟಿಸಿದರು.
Updated on:Jan 17, 2024 | 9:38 PM

ಅಫ್ಘಾನಿಸ್ತಾನ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ದಾಖಲೆಯ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಕೇವಲ 69 ಎಸೆತಗಳನ್ನು ಎದುರಿಸಿದ ರೋಹಿತ್ 11 ಬೌಂಡರಿ ಹಾಗೂ 8 ಸಿಕ್ಸರ್ ಸಹಿತ ಅಜೇಯ 121 ರನ್ ಕಲೆಹಾಕಿದರು. ಈ ಮೂಲಕ ಅನೇಕ ದಾಖಲೆಗಳನ್ನು ರೋಹಿತ್ ಸೃಷ್ಟಿಸಿದರು.

ವಾಸ್ತವವಾಗಿ ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಖಾತೆಯನ್ನೂ ತೆರೆಯದ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಶತಕದ ಇನ್ನಿಂಗ್ಸ್ ಆಡಿದರು. ಈ ಮೂಲಕ ರೋಹಿತ್ ಶರ್ಮಾ, ಈ ಚುಟುಕು ಮಾದರಿಯಲ್ಲಿ ಕಿಂಗ್ ಕೊಹ್ಲಿಯ ದಾಖಲೆಯನ್ನೂ ಮುರಿದರು.

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ನಾಯಕನಾಗಿ ಅಧಿಕ ರನ್ ಗಳಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಇದುವರೆಗೆ ಕಿಂಗ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದರು. ಇದೀಗ 54ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿರುವ ರೋಹಿತ್ ಶರ್ಮಾ, 44 ರನ್ ಕಲೆಹಾಕುತ್ತಿದ್ದಂತೆ ಅಧಿಕ ರನ್ ಕಲೆಹಾಕಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂರಿಸಿದರು.

ವಿರಾಟ್ ಕೊಹ್ಲಿ 50 ಟಿ20 ಪಂದ್ಯಗಳಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಿದರು. ಈ ಅವಧಿಯಲ್ಲಿ ಅವರು 47.57 ಸರಾಸರಿಯಲ್ಲಿ 1,570 ರನ್ ಕಲೆಹಾಕಿದ್ದರು. ಇದರಲ್ಲಿ 13 ಅರ್ಧಶತಕಗಳೂ ಸೇರಿದ್ದವು. ಆದರೆ ಈಗ ರೋಹಿತ್ ಶರ್ಮಾ, ವಿರಾಟ್ ಅವರನ್ನು ಹಿಂದಿಕ್ಕಿದ್ದಾರೆ.

ನಾಯಕನಾಗಿ ಅಂತಾರಾಷ್ಟ್ರೀಯ ಟಿ20ಯಲ್ಲಿ ಅಧಿಕ ರನ್ ಕಲೆಹಾಕಿದವರ ಪಟ್ಟಿಯಲ್ಲಿ ರೋಹಿತ್ ಈಗ ಆರೋನ್ ಫಿಂಚ್, ಬಾಬರ್ ಆಝಂ ಮತ್ತು ಕೇನ್ ವಿಲಿಯಮ್ಸನ್ ಅವರನ್ನು ಹಿಂದಿಕ್ಕಿದ್ದಾರೆ.

ರೋಹಿತ್, ಕೊಹ್ಲಿ ಮತ್ತು ಮಹೇಂದ್ರ ಸಿಂಗ್ ಧೋನಿ ನಾಯಕರಾಗಿ 1,000 ಕ್ಕೂ ಹೆಚ್ಚು ಟಿ20 ರನ್ ಗಳಿಸಿರುವ ಆಟಗಾರರಾಗಿದ್ದಾರೆ. ರೋಹಿತ್ ಮತ್ತು ಕೊಹ್ಲಿ ಇಬ್ಬರೂ ತಮ್ಮ ಖಾತೆಯಲ್ಲಿ 1,500 ಕ್ಕೂ ಹೆಚ್ಚು ರನ್ ಗಳಿಸಿದ್ದರೆ, ಧೋನಿ ನಾಯಕನಾಗಿ 1,112 ರನ್ ಸಿಡಿಸಿದ್ದರು.

ಹಾಗೆಯೇ ಈ ಪಂದ್ಯದಲ್ಲಿ ದಾಖಲೆಯ 5ನೇ ಟಿ20 ಶತಕ ಸಿಡಿಸಿದ ರೋಹಿತ್ ಶರ್ಮಾ, ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ಅಧಿಕ ಶತಕ ಸಿಡಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ರೋಹಿತ್ ನಂತರ ತಲಾ 4 ಶತಕ ಸಿಡಿಸಿರುವ ಸೂರ್ಯಕುಮಾರ್ ಯಾದವ್ ಹಾಗೂ ಗ್ಲೆನ್ ಮ್ಯಾಕ್ಸ್ವೆಲ್ ಇದ್ದಾರೆ.
Published On - 9:36 pm, Wed, 17 January 24



















