IND vs AFG: ಕಿಂಗ್ ಕೊಹ್ಲಿ ದಾಖಲೆ ಮುರಿದು ವಿಶ್ವದ ನಂ.1 ಬ್ಯಾಟರ್ ಎನಿಸಿಕೊಂಡ ರೋಹಿತ್..!

Updated on: Jan 17, 2024 | 9:38 PM

IND vs AFG, Rohit Sharma: ಅಫ್ಘಾನಿಸ್ತಾನ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ದಾಖಲೆಯ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಕೇವಲ 69 ಎಸೆತಗಳನ್ನು ಎದುರಿಸಿದ ರೋಹಿತ್ 11 ಬೌಂಡರಿ ಹಾಗೂ 8 ಸಿಕ್ಸರ್ ಸಹಿತ ಅಜೇಯ 121 ರನ್ ಕಲೆಹಾಕಿದರು. ಈ ಮೂಲಕ ಅನೇಕ ದಾಖಲೆಗಳನ್ನು ರೋಹಿತ್ ಸೃಷ್ಟಿಸಿದರು.

1 / 7
ಅಫ್ಘಾನಿಸ್ತಾನ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ದಾಖಲೆಯ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಕೇವಲ 69 ಎಸೆತಗಳನ್ನು ಎದುರಿಸಿದ ರೋಹಿತ್ 11 ಬೌಂಡರಿ ಹಾಗೂ 8 ಸಿಕ್ಸರ್ ಸಹಿತ ಅಜೇಯ 121 ರನ್ ಕಲೆಹಾಕಿದರು. ಈ ಮೂಲಕ ಅನೇಕ ದಾಖಲೆಗಳನ್ನು ರೋಹಿತ್ ಸೃಷ್ಟಿಸಿದರು.

ಅಫ್ಘಾನಿಸ್ತಾನ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ದಾಖಲೆಯ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಕೇವಲ 69 ಎಸೆತಗಳನ್ನು ಎದುರಿಸಿದ ರೋಹಿತ್ 11 ಬೌಂಡರಿ ಹಾಗೂ 8 ಸಿಕ್ಸರ್ ಸಹಿತ ಅಜೇಯ 121 ರನ್ ಕಲೆಹಾಕಿದರು. ಈ ಮೂಲಕ ಅನೇಕ ದಾಖಲೆಗಳನ್ನು ರೋಹಿತ್ ಸೃಷ್ಟಿಸಿದರು.

2 / 7

ವಾಸ್ತವವಾಗಿ ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಖಾತೆಯನ್ನೂ ತೆರೆಯದ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಶತಕದ ಇನ್ನಿಂಗ್ಸ್ ಆಡಿದರು. ಈ ಮೂಲಕ ರೋಹಿತ್ ಶರ್ಮಾ, ಈ ಚುಟುಕು ಮಾದರಿಯಲ್ಲಿ ಕಿಂಗ್ ಕೊಹ್ಲಿಯ ದಾಖಲೆಯನ್ನೂ ಮುರಿದರು.

3 / 7

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ನಾಯಕನಾಗಿ ಅಧಿಕ ರನ್ ಗಳಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಇದುವರೆಗೆ ಕಿಂಗ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದರು. ಇದೀಗ 54ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿರುವ ರೋಹಿತ್ ಶರ್ಮಾ, 44 ರನ್ ಕಲೆಹಾಕುತ್ತಿದ್ದಂತೆ ಅಧಿಕ ರನ್ ಕಲೆಹಾಕಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂರಿಸಿದರು.

4 / 7

ವಿರಾಟ್ ಕೊಹ್ಲಿ 50 ಟಿ20 ಪಂದ್ಯಗಳಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಿದರು. ಈ ಅವಧಿಯಲ್ಲಿ ಅವರು 47.57 ಸರಾಸರಿಯಲ್ಲಿ 1,570 ರನ್ ಕಲೆಹಾಕಿದ್ದರು. ಇದರಲ್ಲಿ 13 ಅರ್ಧಶತಕಗಳೂ ಸೇರಿದ್ದವು. ಆದರೆ ಈಗ ರೋಹಿತ್ ಶರ್ಮಾ, ವಿರಾಟ್ ಅವರನ್ನು ಹಿಂದಿಕ್ಕಿದ್ದಾರೆ.

5 / 7

ನಾಯಕನಾಗಿ ಅಂತಾರಾಷ್ಟ್ರೀಯ ಟಿ20ಯಲ್ಲಿ ಅಧಿಕ ರನ್ ಕಲೆಹಾಕಿದವರ ಪಟ್ಟಿಯಲ್ಲಿ ರೋಹಿತ್ ಈಗ ಆರೋನ್ ಫಿಂಚ್, ಬಾಬರ್ ಆಝಂ ಮತ್ತು ಕೇನ್ ವಿಲಿಯಮ್ಸನ್ ಅವರನ್ನು ಹಿಂದಿಕ್ಕಿದ್ದಾರೆ.

6 / 7

ರೋಹಿತ್, ಕೊಹ್ಲಿ ಮತ್ತು ಮಹೇಂದ್ರ ಸಿಂಗ್ ಧೋನಿ ನಾಯಕರಾಗಿ 1,000 ಕ್ಕೂ ಹೆಚ್ಚು ಟಿ20 ರನ್ ಗಳಿಸಿರುವ ಆಟಗಾರರಾಗಿದ್ದಾರೆ. ರೋಹಿತ್ ಮತ್ತು ಕೊಹ್ಲಿ ಇಬ್ಬರೂ ತಮ್ಮ ಖಾತೆಯಲ್ಲಿ 1,500 ಕ್ಕೂ ಹೆಚ್ಚು ರನ್ ಗಳಿಸಿದ್ದರೆ, ಧೋನಿ ನಾಯಕನಾಗಿ 1,112 ರನ್ ಸಿಡಿಸಿದ್ದರು.

7 / 7

ಹಾಗೆಯೇ ಈ ಪಂದ್ಯದಲ್ಲಿ ದಾಖಲೆಯ 5ನೇ ಟಿ20 ಶತಕ ಸಿಡಿಸಿದ ರೋಹಿತ್ ಶರ್ಮಾ, ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ಅಧಿಕ ಶತಕ ಸಿಡಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ರೋಹಿತ್ ನಂತರ ತಲಾ 4 ಶತಕ ಸಿಡಿಸಿರುವ ಸೂರ್ಯಕುಮಾರ್ ಯಾದವ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಇದ್ದಾರೆ.

Published On - 9:36 pm, Wed, 17 January 24

Loading...
Unable to load recommendations.
Follow Us