IND vs AFG: ಐತಿಹಾಸಿಕ 150ನೇ ಟಿ20 ಪಂದ್ಯದಲ್ಲಿ ಸೊನ್ನೆ ಸುತ್ತಿ ಬೇಡದ ದಾಖಲೆ ಬರೆದ ರೋಹಿತ್ ಶರ್ಮಾ..!

IND vs AFG: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾಗೆ ಅಫ್ಘಾನಿಸ್ತಾನ ವಿರುದ್ಧದ ಈ ಪಂದ್ಯ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನ 150 ನೇ ಪಂದ್ಯವಾಗಿತ್ತು. ಈ ಮೂಲಕ ರೋಹಿತ್, ಕ್ರಿಕೆಟ್‌ನ ಅತ್ಯಂತ ಕಡಿಮೆ ಸ್ವರೂಪದಲ್ಲಿ 150 ಪಂದ್ಯಗಳನ್ನು ಆಡಿದ ವಿಶ್ವದ ಮೊದಲ ಪುರುಷ ಕ್ರಿಕೆಟಿಗ ಎನಿಸಿಕೊಂಡರು.

ಪೃಥ್ವಿಶಂಕರ
|

Updated on: Jan 14, 2024 | 10:40 PM

ಇಂದೊರ್​​ನಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್‌ಗಳ ಜಯ ಸಾಧಿಸಿದೆ. ಈ ಮೂಲಕ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಟಿ20 ಸರಣಿಯನ್ನು ತನ್ನದಾಗಿಸಿಕೊಂಡಿದೆ. ಇತ್ತ ಭಾರತದ ನೆಲದಲ್ಲಿ ಟಿ20 ಸರಣಿ ಗೆಲ್ಲಬೇಕು ಎಂಬ ಅಫ್ಘಾನಿಸ್ತಾನದ ಕನಸು ನುಚ್ಚು ನೂರಾಗಿದೆ.

1 / 8
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡ ನಿಗದಿತ 20 ಓವರ್​ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 173 ರನ್ ಟಾರ್ಗೆಟ್ ನೀಡಿತು. ಈ ಗುರಿ ಬೆನ್ನಟ್ಟಿದ ಭಾರತ ಯಶಸ್ವಿ ಜೈಸ್ವಾಲ್ ಹಾಗೂ ಶಿವಂ ದುಬೆ ಅವರ ಅರ್ಧಶತಕದ ನೆರವಿನಿಂದ  15.4 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಸವಾಲನ್ನು ಪೂರ್ಣಗೊಳಿಸಿತು.

2 / 8
ಈ ಇಬ್ಬರನ್ನು ಹೊರತುಪಡಿಸಿ ಬರೋಬ್ಬರಿ 14 ತಿಂಗಳ ನಂತರ ಟಿ20 ಕ್ರಿಕೆಟ್​ಗೆ ಮರಳಿದ ವಿರಾಟ್ ಕೊಹ್ಲಿ ಕೇವಲ  16 ಎಸೆತಗಳಲ್ಲಿ 5 ಬೌಂಡರಿ ಸಹಿತ 29 ರನ್ ಕಲೆಹಾಕಿ ಆಯ್ಕೆಗಾರರಿಗೆ ತಕ್ಕ ತಿರುಗೇಟು ನೀಡಿದರು. ಆದರೆ ಕೊಹ್ಲಿಯಂತೆ ಬಹಳ ತಿಂಗಳುಗಳ ನಂತರ ಟಿ20 ಮಾದರಿಗೆ ಮರಳಿದ್ದ ನಾಯಕ ರೋಹಿತ್​ಗೆ ಈ ಸರಣಿ ದುಸ್ವಪ್ನದಂತೆ ಕಾಡಿದೆ.

3 / 8
ವಾಸ್ತವವಾಗಿ ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾಗೆ ಅಫ್ಘಾನಿಸ್ತಾನ ವಿರುದ್ಧದ ಈ ಪಂದ್ಯ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನ 150 ನೇ ಪಂದ್ಯವಾಗಿತ್ತು. ಈ ಮೂಲಕ ರೋಹಿತ್, ಕ್ರಿಕೆಟ್‌ನ ಅತ್ಯಂತ ಕಡಿಮೆ ಸ್ವರೂಪದಲ್ಲಿ 150 ಪಂದ್ಯಗಳನ್ನು ಆಡಿದ ವಿಶ್ವದ ಮೊದಲ ಪುರುಷ ಕ್ರಿಕೆಟಿಗ ಎನಿಸಿಕೊಂಡರು.

4 / 8
ಆದರೆ ಈ ಐತಿಹಾಸಿಕ ಪಂದ್ಯದಲ್ಲಿ ರೋಹಿತ್ ತಮ್ಮ ಅಭಿಮಾನಿಗಳನ್ನು ಬಹಳವಾಗಿ ನಿರಾಶೆಗೊಳಿಸಿದರು. ಅಫ್ಘಾನಿಸ್ತಾನ ವಿರುದ್ಧದ ಮೊದಲ ಪಂದ್ಯದಲ್ಲಿ ಶೂನ್ಯ ಸ್ಕೋರ್‌ನಲ್ಲಿ ರನ್ ಔಟ್ ಆಗಿದ್ದ ರೋಹಿತ್, ಎರಡನೇ ಟಿ20 ಪಂದ್ಯದಲ್ಲೂ ಗೋಲ್ಡನ್ ಡಕ್‌ ಆದರು.

5 / 8
ಚುಟುಕು ಮಾದರಿಯಲ್ಲಿ ಇದು ರೋಹಿತ್ ಅವರ 12ನೇ ಶೂನ್ಯ ಸಂಪಾದನೆಯಾಗಿದೆ. ಈ ಮೂಲಕ ಈ ಸ್ವರೂಪದಲ್ಲಿ 12 ಬಾರಿ ಡಕ್‌ಗೆ ಔಟಾಗಿದ್ದ ಕೆವಿನ್ ಒ'ಬ್ರಿಯನ್ ಅವರ ಬೇಡದ ದಾಖಲೆಯನ್ನು ರೋಹಿತ್ ಸರಿಗಟ್ಟಿದರು. ಅಲ್ಲದೆ ಅಂತಾರಾಷ್ಟ್ರೀಯ ಟಿ20ಯಲ್ಲಿ ಅಧಿಕ ಬಾರಿ ಡಕ್ ಔಟ್ ಆದ ವಿಷಯದಲ್ಲಿ ರೋಹಿತ್ ಇದೀಗ ಎರಡನೇ ಸ್ಥಾನ ತಲುಪಿದ್ದಾರೆ.

6 / 8
ಹಾಗೆಯೇ ಟಿ20 ಮಾದರಿಯಲ್ಲಿ ಭಾರತ ಪರ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ರೋಹಿತ್ ಶರ್ಮಾ ಮೊದಲ ಸ್ಥಾನದಲ್ಲಿದ್ದರೆ, ಕೆಎಲ್ ರಾಹುಲ್ ಎರಡನೇ ಸ್ಥಾನದಲ್ಲಿದ್ದಾರೆ. ಹಾಗೆಯೇ ವಿರಾಟ್ ಕೊಹ್ಲಿ , ಶ್ರೇಯಸ್ ಅಯ್ಯರ್ ಮತ್ತು ವಾಷಿಂಗ್ಟನ್ ಸುಂದರ್ ಜಂಟಿಯಾಗಿ ಮೂರನೇ ಸ್ಥಾನದಲ್ಲಿದ್ದಾರೆ.

7 / 8
ಇದರೊಂದಿಗೆ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ20ಯಲ್ಲಿ ನಾಯಕನಾಗಿ ಗರಿಷ್ಠ ಬಾರಿ ಡಕ್​ಗೆ ವಿಕೆಟ್ ಒಪ್ಪಿಸಿದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ರೋಹಿತ್ ಇದುವರೆಗೆ ನಾಯಕನಾಗಿ 6 ಬಾರಿ ಶೂನ್ಯ ಸಾಧನೆ ಮಾಡಿದ್ದಾರೆ.

8 / 8
Follow us
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ

ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು

ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?

ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!

ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!

ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ

ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್

ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ

ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ

ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು