AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AFG: ಟಿ20ಯಲ್ಲಿ ವಿಶ್ವ ದಾಖಲೆ ನಿರ್ಮಿಸಿದ ರೋಹಿತ್-ರಿಂಕು ಜೋಡಿ..!

IND vs AFG: ಅಫ್ಘಾನಿಸ್ತಾನ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಐದನೇ ವಿಕೆಟ್​ಗಳ 190 ರನ್​ಗಳ ಜೊತೆಯಾಟವನ್ನಾಡಿದ ನಾಯಕ ರೋಹಿತ್ ಶರ್ಮಾ ಹಾಗೂ ರಿಂಕು ಸಿಂಗ್ ಈ ಚುಟುಕು ಮಾದರಿಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

ಪೃಥ್ವಿಶಂಕರ
|

Updated on: Jan 17, 2024 | 10:20 PM

Share
ಅಫ್ಘಾನಿಸ್ತಾನ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಐದನೇ ವಿಕೆಟ್​ಗಳ 190 ರನ್​ಗಳ ಜೊತೆಯಾಟವನ್ನಾಡಿದ ನಾಯಕ ರೋಹಿತ್ ಶರ್ಮಾ ಹಾಗೂ ರಿಂಕು ಸಿಂಗ್ ಈ ಚುಟುಕು ಮಾದರಿಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

1 / 7
ಬೆಂಗಳೂರಿನಲ್ಲಿ ನಡೆಯುತ್ತಿರುವ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 212 ರನ್ ಕಲೆಹಾಕಿತು. ಆದರೆ ಒಂದು ಹಂತದಲ್ಲಿ ತಂಡ ಕೇವಲ 22 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

2 / 7
ಆದರೆ ಇಲ್ಲಿಂದ ತಂಡದ ಇನ್ನಿಂಗ್ಸ್ ಜವಾಬ್ದಾರಿ ಹೊತ್ತ ನಾಯಕ ರೋಹಿತ್ ಶರ್ಮಾ ಮತ್ತು ರಿಂಕು ಸಿಂಗ್ ಅವರ ಸ್ಫೋಟಕ ಬ್ಯಾಟಿಂಗ್ ತಂಡವನ್ನು 200 ರನ್​ಗಳ ಗಡಿ ದಾಟುವಂತೆ ಮಾಡಿತು. ಈ ಹಂತದಲ್ಲಿ ರೋಹಿತ್ ಶತಕ ಸಿಡಿಸಿ ಮಿಂಚಿದರೆ, ರಿಂಕು ಅರ್ಧಶತಕದ ಇನ್ನಿಂಗ್ಸ್ ಆಡಿದರು. ಈ ಮೂಲಕ ಈ ಇಬ್ಬರೂ ಆಟಗಾರರು ತಮ್ಮ ಹೆಸರಿನಲ್ಲಿ ವಿಶ್ವದಾಖಲೆ ಕೂಡ ನಿರ್ಮಿಸಿದರು.

3 / 7
ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಕೇವಲ 69 ಎಸೆತಗಳಲ್ಲಿ 11 ಬೌಂಡರಿ ಹಾಗೂ 8 ಸಿಕ್ಸರ್‌ಗಳ ಸಹಿತ ಅಜೇಯ 121 ರನ್ ಸಿಡಿಸಿದರೆ, ನಾಯಕನಿಗೆ ಉತ್ತಮ ಸಾಥ್ ನೀಡಿದ ರಿಂಕು ಸಿಂಗ್ 39 ಎಸೆತಗಳಲ್ಲಿ 2 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ ಅಜೇಯ 69 ರನ್​ಗಳ ಇನ್ನಿಂಗ್ಸ್ ಆಡಿದರು.

4 / 7
ಹೀಗಾಗಿ ಈ ಇಬ್ಬರೂ ಆಟಗಾರರು 5ನೇ ವಿಕೆಟ್‌ಗೆ ಅಜೇಯ 190 ರನ್​ಗಳ ಜೊತೆಯಾಟ ನೀಡಿದರು. ಇದು ಟಿ20 ಕ್ರಿಕೆಟ್‌ನಲ್ಲಿ 5ನೇ ವಿಕೆಟ್‌ಗೆ ದಾಖಲಾದ ದೊಡ್ಡ ಜೊತೆಯಾಟವಾಗಿದೆ. ಇದಕ್ಕೂ ಮುನ್ನ ನೇಪಾಳದ ಕುಶಾಲ್ ಮಾಲ್ ಮತ್ತು ದೀಪೇಂದ್ರ ಸಿಂಗ್ ಐರಿ 2023ರಲ್ಲಿ 5ನೇ ವಿಕೆಟ್‌ಗೆ 145 ರನ್ ಸೇರಿಸಿದ್ದು, ಇದುವರೆಗಿನ ದಾಖಲೆಯಾಗಿತ್ತು.

5 / 7
ರೋಹಿತ್ ಶರ್ಮಾ ಮತ್ತು ರಿಂಕು ಸಿಂಗ್ ಕಲೆಹಾಕಿದ 190 ರನ್​ಗಳ ಜೊತೆಯಾಟ ಅಂತಾರಾಷ್ಟ್ರೀಯ ಟಿ20ಯಲ್ಲಿ ಭಾರತದ ಪರ ಯಾವುದೇ ವಿಕೆಟ್‌ಗೆ ಕಲೆಹಾಕಿದ ಗರಿಷ್ಠ ಜೊತೆಯಾಟವಾಗಿದೆ. ಈ ಮೊದಲು ಈ ದಾಖಲೆ ದೀಪಕ್ ಹೂಡಾ ಮತ್ತು ಸಂಜು ಸ್ಯಾಮ್ಸನ್ ಜೋಡಿ ಹೆಸರಿನಲ್ಲಿತ್ತು.

6 / 7
ಇವರಿಬ್ಬರು ಐರ್ಲೆಂಡ್ ವಿರುದ್ಧ ನಡೆದ ಎರಡನೇ ಟಿ20 ಪಂದ್ಯದಲ್ಲಿ 176 ರನ್‌ಗಳ ಜೊತೆಯಾಟವಾಡಿದ್ದರು. ಹಾಗೆಯೇ 2017 ರಲ್ಲಿ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ 165 ರನ್ಗಳ ಜೊತೆಯಾಟ ನಡೆಸಿ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು.

7 / 7
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ