AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AFG: ಮೊಹಾಲಿ ಮೈದಾನದಲ್ಲಿ ಟೀಂ ಇಂಡಿಯಾ ಆಡಿರುವ ಪಂದ್ಯಗಳೆಷ್ಟು? ಪ್ರದರ್ಶನ ಹೇಗಿದೆ?

IND vs AFG: ಮೊಹಾಲಿಯ ಐಎಸ್ ಬಿಂದ್ರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಟೀಂ ಇಂಡಿಯಾ ಇದುವರೆಗೆ ನಾಲ್ಕು ಟಿ20 ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಟೀಂ ಇಂಡಿಯಾ ಮೂರು ಪಂದ್ಯಗಳಲ್ಲಿ ಗೆದ್ದಿದೆ. ಆದರೆ 2022ರಲ್ಲಿ ಆಸ್ಟ್ರೇಲಿಯ ವಿರುದ್ಧ ಇಲ್ಲಿ ತನ್ನ ಕೊನೆಯ ಪಂದ್ಯವನ್ನು ಆಡಿದ್ದ ಭಾರತ 4 ವಿಕೆಟ್‌ಗಳಿಂದ ಸೋಲನುಭವಿಸಬೇಕಾಯಿತು.

ಪೃಥ್ವಿಶಂಕರ
|

Updated on: Jan 10, 2024 | 3:55 PM

Share
ಅತಿಥೇಯ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಜನವರಿ 11 ರಂದು ಮೊಹಾಲಿಯ ಐಎಸ್ ಬಿಂದ್ರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಉಭಯ ತಂಡಗಳ ನಡುವಿನ ಮೊದಲ ದ್ವಿಪಕ್ಷೀಯ ಸರಣಿ ಇದಾಗಿದ್ದು, ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಮೂಡಿಸಿದೆ.

1 / 9
ಈ ಸರಣಿಗಾಗಿ ಎರಡೂ ತಂಡಗಳನ್ನು ಪ್ರಕಟಿಸಲಾಗಿದ್ದು, ಟೀಂ ಇಂಡಿಯಾದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಬರೋಬ್ಬರಿ 14 ತಿಂಗಳ ಬಳಿಕ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಟಿ20 ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾ ಆಡುತ್ತಿರುವ ಕೊನೆಯ ಟಿ20 ಸರಣಿ ಇದಾಗಿದೆ.

2 / 9
ಹೀಗಾಗಿ ನಾಯಕ ರೋಹಿತ್ ಶರ್ಮಾಗೆ ಟಿ20 ವಿಶ್ವಕಪ್‌ಗೆ ಸಿದ್ಧತೆಗಳನ್ನು ಅಂತಿಮಗೊಳಿಸಲು ಮತ್ತು ಸರಿಯಾದ ತಂಡದ ಸಂಯೋಜನೆಯನ್ನು ಕಂಡುಕೊಳ್ಳಲು ಇದು ಸೂಕ್ತ ಸಮಯವಾಗಿದೆ.

3 / 9
ಮೊಹಾಲಿಯ ಐಎಸ್ ಬಿಂದ್ರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಟೀಂ ಇಂಡಿಯಾ ಇದುವರೆಗೆ ನಾಲ್ಕು ಟಿ20 ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಟೀಂ ಇಂಡಿಯಾ ಮೂರು ಪಂದ್ಯಗಳಲ್ಲಿ ಗೆದ್ದಿದೆ. ಆದರೆ 2022ರಲ್ಲಿ ಆಸ್ಟ್ರೇಲಿಯ ವಿರುದ್ಧ ಇಲ್ಲಿ ತನ್ನ ಕೊನೆಯ ಪಂದ್ಯವನ್ನು ಆಡಿದ್ದ ಭಾರತ 4 ವಿಕೆಟ್‌ಗಳಿಂದ ಸೋಲನುಭವಿಸಬೇಕಾಯಿತು.

4 / 9
ಇನ್ನು ವಿರಾಟ್ ಕೊಹ್ಲಿ ಮೊಹಾಲಿ ಮೈದಾನದಲ್ಲಿ ಅತಿ ಹೆಚ್ಚು ಟಿ20 ಅಂತಾರಾಷ್ಟ್ರೀಯ ರನ್ ಗಳಿಸಿದ ಅಟಗಾರ ಎನಿಸಿಕೊಂಡಿದ್ದಾರೆ. ಕೊಹ್ಲಿ ಆಡಿರುವ 3 ಪಂದ್ಯಗಳಲ್ಲಿ 156 ರನ್ ಕಲೆ ಹಾಕಿದ್ದಾರೆ. ಹಾಗೆಯೇ ಗರಿಷ್ಠ 2 ಅರ್ಧಶತಕಗಳನ್ನು ಸಿಡಿಸಿದ್ದಾರೆ.

5 / 9
ಕೊಹ್ಲಿ ನಂತರ, ಆಸೀಸ್ ಬ್ಯಾಟರ್ ಸ್ಟೀವ್ ಸ್ಮಿತ್ ಎರಡನೇ ಸ್ಥಾನದಲ್ಲಿದ್ದು, ಅವರು ಈ ಮೈದಾನದಲ್ಲಿ 98 ರನ್ ಗಳಿಸಿದ್ದಾರೆ.

6 / 9
ಇನ್ನು ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್​ಗಳನ್ನು ನೋಡುವುದಾದರೆ, ಈ ಮೈದಾನದಲ್ಲಿ ಆಸೀಸ್ ತಂಡದ ಜೇಮ್ಸ್ ಫಾಕ್ನರ್ ಆಡಿರುವ 2 ಪಂದ್ಯಗಳಲ್ಲಿ ಗರಿಷ್ಠ 6 ವಿಕೆಟ್ ಪಡೆದಿದ್ದಾರೆ. ಹಾಗೆಯೇ ಭಾರತದ ಯುವರಾಜ್ ಸಿಂಗ್ 4 ವಿಕೆಟ್ ಪಡೆದು ಎರಡನೇ ಸ್ಥಾನದಲ್ಲಿದ್ದಾರೆ.

7 / 9
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಮುಖೇಶ್ ಕುಮಾರ್.

8 / 9
ಅಫ್ಘಾನಿಸ್ತಾನ ತಂಡ: ಇಬ್ರಾಹಿಂ ಝದ್ರಾನ್ (ನಾಯಕ), ರಹಮಾನುಲ್ಲಾ ಗುರ್ಬಾಜ್, ಇಕ್ರಮ್ ಅಲಿಖಿಲ್, ಹಜರತುಲ್ಲಾ ಝಜೈ, ರಹಮತ್ ಷಾ, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಕರೀಂ ಜನತ್, ಅಜ್ಮುಲ್ಲಾ ಉಮರ್ಜಾಯ್, ಶರಫುದ್ದೀನ್ ಅಶ್ರಫ್, ಮುಜೀಬ್ ಉರ್ ರೆಹಮಾಲ್, ಫಜಲ್ ಹಕ್ಮಾನ್, ನವೀನ್ ಉಲ್ ಹಕ್, ನೂರ್ ಅಹ್ಮದ್, ಮೊಹಮ್ಮದ್ ಸಲೀಮ್, ಖೈಸ್ ಅಹ್ಮದ್, ಗುಲ್ಬದಿನ್ ನೈಬ್ ಮತ್ತು ರಶೀದ್ ಖಾನ್.

9 / 9