IND vs AFG: ಅಫ್ಘಾನ್ ವಿರುದ್ಧ ಕಿಂಗ್ ಕೊಹ್ಲಿಯ ಟಿ20 ದಾಖಲೆ ಹೇಗಿದೆ ಗೊತ್ತಾ?

|

Updated on: Jan 08, 2024 | 6:34 PM

Virat Kohli, IND vs AFG: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಟಿ20 ಸರಣಿಯಲ್ಲಿ ಕಿಂಗ್ ಕೊಹ್ಲಿಯ ದಾಖಲೆ ಹೇಗಿದೆ ಎಂಬುದನ್ನು ನೋಡುವುದಾದರೆ.. ವಾಸ್ತವವಾಗಿ ಉಭಯ ತಂಡಗಳ ನಡುವೆ ಹೆಚ್ಚು ಟಿ20 ಪಂದ್ಯಗಳು ನಡೆದಿಲ್ಲ ಆದರೆ ಆಡಿದ ಕೆಲವೇ ಪಂದ್ಯಗಳಲ್ಲಿ ವಿರಾಟ್ ಅವರ ಪ್ರದರ್ಶನವು ಅದ್ಭುತವಾಗಿದೆ.

1 / 7
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಜನವರಿ 11 ರಿಂದ ಪ್ರಾರಂಭವಾಗಲಿದೆ. ಈ ಸರಣಿಗೆ ಈಗಾಗಲೇ ಉಭಯ ತಂಡಗಳನ್ನು ಪ್ರಕಟಿಸಲಾಗಿದೆ. ಈ ಸರಣಿಯೊಂದಿಗೆ ಟೀಂ ಇಂಡಿಯಾದ ಇಬ್ಬರು ಅನುಭವಿಗಳಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ 14 ತಿಂಗಳ ನಂತರ ಟಿ20 ಮಾದರಿಗೆ ಮರಳುತ್ತಿದ್ದಾರೆ.

2 / 7
ಈ ಇಬ್ಬರೂ ಆಟಗಾರರು ಕೊನೆಯ ಬಾರಿಗೆ 2022 ರ ಟಿ20 ವಿಶ್ವಕಪ್‌ನಲ್ಲಿ ಆಡಿದ್ದರು. ಇದೀಗ ಮತ್ತೊಂದು ವಿಶ್ವಕಪ್ ಸಮೀಪಿಸುತ್ತಿರುವ ಬೆನ್ನಲ್ಲೇ ಈ ಇಬ್ಬರು ಅನುಭವಿಗಳಿಗೆ ಟಿ20 ತಂಡದಲ್ಲಿ ಸ್ಥಾನ ಸಿಕ್ಕಿದೆ. ರೋಹಿತ್ ಶರ್ಮಾಗೆ ತಂಡದ ನಾಯಕತ್ವ ಸಿಕ್ಕಿದ್ದರೆ, ವಿರಾಟ್ ಕೊಹ್ಲಿ ಎಂದನಂತೆ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ.

3 / 7
ಇನ್ನು ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಟಿ20 ಸರಣಿಯಲ್ಲಿ ಕಿಂಗ್ ಕೊಹ್ಲಿಯ ದಾಖಲೆ ಹೇಗಿದೆ ಎಂಬುದನ್ನು ನೋಡುವುದಾದರೆ.. ವಾಸ್ತವವಾಗಿ ಉಭಯ ತಂಡಗಳ ನಡುವೆ ಹೆಚ್ಚು ಟಿ20 ಪಂದ್ಯಗಳು ನಡೆದಿಲ್ಲ ಆದರೆ ಆಡಿದ ಕೆಲವೇ ಪಂದ್ಯಗಳಲ್ಲಿ ವಿರಾಟ್ ಅವರ ಪ್ರದರ್ಶನವು ಅದ್ಭುತವಾಗಿದೆ.

4 / 7
ವಿರಾಟ್ ಕೊಹ್ಲಿ ಅಫ್ಘಾನಿಸ್ತಾನ ವಿರುದ್ಧ ಇದುವರೆಗೆ ಮೂರು ಟಿ20 ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು 172 ಸ್ಟ್ರೈಕ್ ರೇಟ್‌ನಲ್ಲಿ 172 ರನ್ ಗಳಿಸಿದ್ದಾರೆ. ಇದರಲ್ಲಿ ಭರ್ಜರಿ ಶತಕ ಹಾಗೂ ಅರ್ಧಶತಕ ಕೂಡ ಸೇರಿದೆ.

5 / 7
2022ರ ಏಷ್ಯಾಕಪ್‌ನಲ್ಲಿ ವಿರಾಟ್ ಕೊಹ್ಲಿ ಅಫ್ಘಾನಿಸ್ತಾನ ವಿರುದ್ಧ ಶತಕ ಸಿಡಿಸಿದ್ದರು. ಇದು ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿರಾಟ್ ಅವರ ಮೊದಲ ಶತಕವಾಗಿದ್ದು, ಸುದೀರ್ಘ ಕಾಯುವಿಕೆಯ ನಂತರ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ಅಂತಾರಾಷ್ಟ್ರೀಯ ಶತಕ ಬಂದಿತ್ತು.

6 / 7
ವಿರಾಟ್ ಕೊಹ್ಲಿ 14 ತಿಂಗಳಿನಿಂದ ಟೀಂ ಇಂಡಿಯಾ ಪರ ಯಾವುದೇ ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿಲ್ಲವಾದರೂ, ಇಲ್ಲಿಯವರೆಗೆ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವಿರಾಟ್ ಕೊಹ್ಲಿ 107 ಟಿ20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ಅದರಲ್ಲಿ 4008 ರನ್ ಕಲೆಹಾಕಿದ್ದಾರೆ.

7 / 7
137.97ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿರುವ ವಿರಾಟ್, ಟಿ20 ಕ್ರಿಕೆಟ್‌ನಲ್ಲಿ ಒಂದು ಶತಕ ಮತ್ತು 37 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಟಿ20 ವಿಶ್ವಕಪ್‌ನಂತಹ ದೊಡ್ಡ ಟೂರ್ನಿಗಳಲ್ಲಿ ವಿರಾಟ್ ಕೊಹ್ಲಿ ಎರಡು ಬಾರಿ ಪಂದ್ಯಾವಳಿಯ ಆಟಗಾರ ಪ್ರಶಸ್ತಿಗೂ ಭಾಜನರಾಗಿದ್ದಾರೆ.