- Kannada News Photo gallery Cricket photos Ind vs aus 1st odi team india beats australia after 16 years in wankhede stadium at mumbai
IND vs AUS: 16 ವರ್ಷಗಳ ನಂತರ ಮೊದಲ ಬಾರಿಗೆ; ಮುಂಬೈನಲ್ಲಿ ಇತಿಹಾಸ ಸೃಷ್ಟಿಸಿದ ಟೀಂ ಇಂಡಿಯಾ
IND vs AUS: 16 ವರ್ಷಗಳ ನಂತರ ವಾಂಖೆಡೆ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾದ ಮೊದಲ ಗೆಲುವು ಇದಾಗಿದೆ.
Updated on:Mar 18, 2023 | 12:32 PM

ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ತಂಡದ ನಾಯಕತ್ವವಹಿಸಿಕೊಂಡಿದ್ದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತಕ್ಕೆ ಐತಿಹಾಸಿಕ ಗೆಲುವು ತಂದುಕೊಟ್ಟಿದ್ದಾರೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 188 ರನ್‌ಗಳಿಗೆ ಆಲೌಟ್ ಆಯಿತು. 189 ರನ್‌ಗಳ ಗುರಿಯೊಂದಿಗೆ ಅಖಾಡಕ್ಕಿಳಿದ ಹಾರ್ದಿಕ್ ಸೇನಾ 5 ವಿಕೆಟ್‌ಗಳ ಜಯ ಸಾಧಿಸಿತು.

ಮೊದಲ ಏಕದಿನ ಪಂದ್ಯದ ಗೆಲುವಿನೊಂದಿಗೆ ಟೀಂ ಇಂಡಿಯಾ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ. ಅಲ್ಲದೆ ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಸುಮಾರು 16 ವರ್ಷಗಳ ನಂತರ ಅಪರೂಪದ ಸಾಧನೆಯೊಂದನ್ನು ಮಾಡಿದೆ.

16 ವರ್ಷಗಳ ನಂತರ ವಾಂಖೆಡೆ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾದ ಮೊದಲ ಗೆಲುವು ಇದಾಗಿದೆ. ಇದುವರೆಗೆ ಉಭಯ ತಂಡಗಳು ಈ ಮೈದಾನದಲ್ಲಿ 5 ಪಂದ್ಯಗಳನ್ನು ಆಡಿದ್ದು, ಈ 5 ಪಂದ್ಯಗಳಲ್ಲಿ ಟೀಂ ಇಂಡಿಯಾಗೆ ಇದು ಎರಡನೇ ಗೆಲುವಾಗಿದೆ.

ಏಕದಿನ ಮಾದರಿಯಲ್ಲಿ 17 ಅಕ್ಟೋಬರ್ 2007 ರಂದು ಇದೇ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣಸಿದ್ದ ಟೀಂ ಇಂಡಿಯಾ ಈ ಪಂದ್ಯದಲ್ಲಿ 2 ವಿಕೆಟ್‌ಗಳಿಂದ ಜಯ ಸಾಧಿಸಿತ್ತು.
Published On - 12:32 pm, Sat, 18 March 23

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.
Read More
