Updated on:Mar 18, 2023 | 12:32 PM
ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ತಂಡದ ನಾಯಕತ್ವವಹಿಸಿಕೊಂಡಿದ್ದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತಕ್ಕೆ ಐತಿಹಾಸಿಕ ಗೆಲುವು ತಂದುಕೊಟ್ಟಿದ್ದಾರೆ.
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 188 ರನ್‌ಗಳಿಗೆ ಆಲೌಟ್ ಆಯಿತು. 189 ರನ್‌ಗಳ ಗುರಿಯೊಂದಿಗೆ ಅಖಾಡಕ್ಕಿಳಿದ ಹಾರ್ದಿಕ್ ಸೇನಾ 5 ವಿಕೆಟ್‌ಗಳ ಜಯ ಸಾಧಿಸಿತು.
ಮೊದಲ ಏಕದಿನ ಪಂದ್ಯದ ಗೆಲುವಿನೊಂದಿಗೆ ಟೀಂ ಇಂಡಿಯಾ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ. ಅಲ್ಲದೆ ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಸುಮಾರು 16 ವರ್ಷಗಳ ನಂತರ ಅಪರೂಪದ ಸಾಧನೆಯೊಂದನ್ನು ಮಾಡಿದೆ.
16 ವರ್ಷಗಳ ನಂತರ ವಾಂಖೆಡೆ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾದ ಮೊದಲ ಗೆಲುವು ಇದಾಗಿದೆ. ಇದುವರೆಗೆ ಉಭಯ ತಂಡಗಳು ಈ ಮೈದಾನದಲ್ಲಿ 5 ಪಂದ್ಯಗಳನ್ನು ಆಡಿದ್ದು, ಈ 5 ಪಂದ್ಯಗಳಲ್ಲಿ ಟೀಂ ಇಂಡಿಯಾಗೆ ಇದು ಎರಡನೇ ಗೆಲುವಾಗಿದೆ.
ಏಕದಿನ ಮಾದರಿಯಲ್ಲಿ 17 ಅಕ್ಟೋಬರ್ 2007 ರಂದು ಇದೇ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣಸಿದ್ದ ಟೀಂ ಇಂಡಿಯಾ ಈ ಪಂದ್ಯದಲ್ಲಿ 2 ವಿಕೆಟ್‌ಗಳಿಂದ ಜಯ ಸಾಧಿಸಿತ್ತು.
Published On - 12:32 pm, Sat, 18 March 23