ಇಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಮೊದಲ ಏಕದಿನ ಪಂದ್ಯ ಆಯೋಜಿಸಲಾಗಿದೆ. ಮಧ್ಯಾಹ್ನ 1:30ಕ್ಕೆ ಪಂದ್ಯ ಶುರುವಗಲಿದೆ. ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸ ನಡೆಸುತ್ತಿದ್ದಾರೆ.
ಟೀಮ್ ಇಂಡಿಯಾ ಪರ ಓಪನರ್ಗಳಾಗಿ ಶುಭ್ಮನ್ ಗಿಲ್ ಹಾಗೂ ಇಶಾನ್ ಕಿಶನ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಕೊನೆಯ ಟೆಸ್ಟ್ ಪಂದ್ಯದಲ್ಲಿ ಗಿಲ್ ಆಕರ್ಷಕ ಶತಕ ಸಿಡಿಸಿ ಮಿಂಚಿದ್ದು ಭರ್ಜರಿ ಫಾರ್ಮ್ನಲ್ಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿದ್ದಾರೆ.
4ನೇ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್ ಆಡಲಿದ್ದಾರೆ. ವಿಕೆಟ್ ಕೀಪರ್ ಜವಾಬ್ದಾರಿ ಕೆಎಲ್ ರಾಹುಲ್ ವಹಿಸಿಗೊಳ್ಳಲಿದ್ದಾರೆ. ಆಲ್ರೌಂಡರ್ಗಳಾಗಿ ನಾಯಕ ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ಇದ್ದಾರೆ.
ಸತತ ಕಳಪೆ ಫಾರ್ಮ್ನಿಂದ ಕಂಗೆಟ್ಟಿರುವ ಕೆಎಲ್ ರಾಹುಲ್ಗೆ ಇದು ಬಹುಮುಖ್ಯದ ಪಂದ್ಯ. ಇಲ್ಲಿ ರನ್ ಗಳಿಸಬೇಕಾದ ಒತ್ತಡಕ್ಕೆ ಸಿಲುಕಿಗೊಂಡಿದ್ದಾರೆ. ಇದಕ್ಕಾಗಿ ಭರ್ಜರಿ ಪ್ರ್ಯಾಕ್ಟೀಸ್ ಕೂಡ ನಡೆಸುತ್ತಿದ್ದಾರೆ.
ಭಾರತದ ಬೌಲಿಂಗ್ ವಿಭಾಗ ಕೂಡ ಬಲಿಷ್ಠವಾಗಿದೆ. ಸ್ಪಿನ್ ವಿಭಾಗದ ಪೈಕಿ ಯುಜ್ವೇಂದ್ರ ಚಹಲ್ ಮತ್ತು ಕುಲ್ದೀಪ್ ಯಾದವ್ ಪೈಕಿ ಯಾರಿಗೆ ಸ್ಥಾನ ಎಂಬುದು ನೋಡಬೇಕಿದೆ.
ವೇಗಿಗಳಾಗಿ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಮತ್ತು ಉಮ್ರಾನ್ ಮಲಿಕ್ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆದುಕೊಳ್ಳಬಹುದು. ಶಾರ್ದೂಲ್ ಥಾಕೂರ್, ಜಯದೇವ್ ಉನದ್ಕಟ್ ಆಯ್ಕೆ ಕೂಡ ಇದೆ.
ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಲಭ್ಯವಿರುತ್ತದೆ. ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿದೆ. ಅಲ್ಲದೆ, ಡಿಡಿ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ಕೂಡ ನೀವು ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದು.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ/ ಮೊದಲ ಪಂದ್ಯಕ್ಕಿಲ್ಲ),ಇಶಾನ್ ಕಿಶನ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಉಮ್ರಾನ್ ಮಲಿಕ್, ಜಯದೇವ್ ಉನಾದ್ಕಟ್,
Published On - 9:06 am, Fri, 17 March 23