AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia: ಮೊದಲ ಟೆಸ್ಟ್​ನಲ್ಲೇ ನಿರ್ಮಾಣವಾಗುತ್ತಾ 5 ವಿಶ್ವ ದಾಖಲೆಗಳು?

IND vs AUS 1st Test: ಉಭಯ ತಂಡಗಳ ಆಟಗಾರರು ವಿಶ್ವ ದಾಖಲೆಗಳ ಹೊಸ್ತಿಲಲ್ಲಿದ್ದು, ಮೊದಲ ಪಂದ್ಯದಲ್ಲೇ ಮಿಂಚಿದರೆ ಹೊಸ ರೆಕಾರ್ಡ್​ಗಳು ಸೃಷ್ಟಿಯಾಗಲಿವೆ. ಆ ದಾಖಲೆಗಳು ಯಾವುವು ಎಂದು ನೋಡುವುದಾದರೆ...

TV9 Web
| Edited By: |

Updated on: Feb 08, 2023 | 8:30 PM

Share
ಭಾರತ-ಆಸ್ಟ್ರೇಲಿಯಾ ನಡುವಣ ಟೆಸ್ಟ್ ಸರಣಿಯು ನಾಳೆಯಿಂದ (ಫೆ.9) ಶುರುವಾಗಲಿದೆ. 4 ಪಂದ್ಯಗಳ ಈ ಸರಣಿಯ ಮೊದಲ ಪಂದ್ಯವು ನಾಗ್ಪುರದ ವಿದರ್ಭ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ವಿಶೇಷ ಎಂದರೆ ಈ ಪಂದ್ಯದಲ್ಲೇ ಐದು ದಾಖಲೆಗಳು ನಿರ್ಮಾಣವಾಗುವ ಸಾಧ್ಯತೆಯಿದೆ.

1 / 7
ಅಂದರೆ ಉಭಯ ತಂಡಗಳ ಆಟಗಾರರು ವಿಶ್ವ ದಾಖಲೆಗಳ ಹೊಸ್ತಿಲಲ್ಲಿದ್ದು, ಮೊದಲ ಪಂದ್ಯದಲ್ಲೇ ಮಿಂಚಿದರೆ ಹೊಸ ರೆಕಾರ್ಡ್​ಗಳು ಸೃಷ್ಟಿಯಾಗಲಿವೆ. ಆ ದಾಖಲೆಗಳು ಯಾವುವು ಎಂದು ನೋಡುವುದಾದರೆ....

2 / 7
ಕಿಂಗ್ ಕೊಹ್ಲಿ: ಮೊದಲ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ 64 ರನ್​ ಬಾರಿಸಿದರೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 25 ಸಾವಿರ ರನ್ ಪೂರೈಸಲಿದ್ದಾರೆ. ಈ ಮೂಲಕ ಸಾಧನೆ ಮಾಡಿದ ವಿಶ್ವದ 6ನೇ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. ಸದ್ಯ ಈ ಪಟ್ಟಿಯಲ್ಲಿ 34357 ರನ್​ ಕಲೆಹಾಕಿರುವ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ.

3 / 7
ಅಶ್ವಿನ್: ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್​ಗೆ ಟೆಸ್ಟ್ ಕ್ರಿಕೆಟ್​ನಲ್ಲಿ 450 ವಿಕೆಟ್ ಪೂರೈಸಲು ಕೇವಲ 1 ವಿಕೆಟ್​ನ ಅಗತ್ಯವಿದೆ. ಆಸೀಸ್ ವಿರುದ್ಧದ ಮೊದಲ ಪಂದ್ಯದಲ್ಲಿ 1 ವಿಕೆಟ್ ಕಬಳಿಸಿದರೆ ಟೆಸ್ಟ್ ಕ್ರಿಕೆಟ್‌ನಲ್ಲಿ ವೇಗವಾಗಿ 450 ವಿಕೆಟ್ ಪಡೆದ ಭಾರತೀಯ ಬೌಲರ್ ಎನಿಸಿಕೊಳ್ಳಲಿದ್ದಾರೆ.

4 / 7
ಸ್ಟೀವ್ ಸ್ಮಿತ್: ಟೀಮ್ ಇಂಡಿಯಾ ವಿರುದ್ದದ ಮೊದಲ ಟೆಸ್ಟ್ ಪಂದ್ಯದಲ್ಲಿ ಸ್ಟೀವ್ ಸ್ಮಿತ್ ಶತಕ ಬಾರಿಸಿದ ಸಚಿನ್ ತೆಂಡೂಲ್ಕರ್ ಅವರ ವಿಶೇಷ ದಾಖಲೆಯನ್ನು ಸರಿಗಟ್ಟಬಹುದು. ಬಾರ್ಡರ್-ಗವಾಸ್ಕರ್ ಟೆಸ್ಟ್​ ಸರಣಿಯಲ್ಲಿ ಅತ್ಯಧಿಕ ಶತಕ ಬಾರಿಸಿದ ದಾಖಲೆ ಸಚಿನ್ ಹೆಸರಿನಲ್ಲಿದೆ. ತೆಂಡೂಲ್ಕರ್ 9 ಶತಕ ಬಾರಿಸಿದರೆ, ಇದೀಗ 8 ಸೆಂಚುರಿಗಳೊಂದಿಗೆ ಸ್ಟೀವ್ ಸ್ಮಿತ್ 2ನೇ ಸ್ಥಾನದಲ್ಲಿದ್ದಾರೆ. ಹೀಗಾಗಿ ಈ ದಾಖಲೆಯನ್ನು ಸರಿಗಟ್ಟುವ ಉತ್ತಮ ಅವಕಾಶ ಸ್ಮಿತ್ ಮುಂದಿದೆ.

5 / 7
ಚೇತೇಶ್ವರ ಪೂಜಾರ: ಬಾರ್ಡರ್ - ಗವಾಸ್ಕರ್ ಟೆಸ್ಟ್​ ಸರಣಿಯಲ್ಲಿ ಅತ್ಯಧಿಕ ರನ್​ ಕಲೆಹಾಕಿದ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಲು ಚೇತೇಶ್ವರ ಪೂಜಾರಾಗೆ ಕೇವಲ 20 ರನ್​ಗಳ ಅಗತ್ಯವಿದೆ. ಮೊದಲ ಪಂದ್ಯದಲ್ಲಿ ಪೂಜಾರ 20 ರನ್ ಬಾರಿಸಿದರೆ ಬಾರ್ಡರ್-ಗವಾಸ್ಕರ್ ಟೆಸ್ಟ್​ ಸರಣಿಯಲ್ಲಿ 2000 ರನ್ ಪೂರೈಸಿದ ದಾಖಲೆ ನಿರ್ಮಿಸಲಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ನಾಲ್ಕನೇ ಭಾರತೀಯ ಹಾಗೂ 6ನೇ ಬ್ಯಾಟ್ಸ್​ಮನ್ ಎನಿಸಿಕೊಳ್ಳಲಿದ್ದಾರೆ.

6 / 7
ನಾಥನ್ ಲಿಯಾನ್: ಆಸ್ಟ್ರೇಲಿಯಾ ಸ್ಪಿನ್ನರ್ ನಾಥನ್ ಲಿಯಾನ್ ಟೀಮ್ ಇಂಡಿಯಾ ವಿರುದ್ಧ ಟೆಸ್ಟ್​ನಲ್ಲಿ 94 ವಿಕೆಟ್ ಕಬಳಿಸಿದ್ದಾರೆ. ಒಂದು ವೇಳೆ ಮೊದಲ ಪಂದ್ಯದಲ್ಲಿ 6 ವಿಕೆಟ್ ಕಬಳಿಸಿದರೆ ಭಾರತದ ವಿರುದ್ಧ 100 ವಿಕೆಟ್ ಪಡೆದ ಮೊದಲ ಆಸ್ಟ್ರೇಲಿಯಾ ಸ್ಪಿನ್ನರ್ ಎನಿಸಿಕೊಳ್ಳಲಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 3ನೇ ಬೌಲರ್ ಎಂಬ ವಿಶ್ವ ದಾಖಲೆಯನ್ನೂ ಕೂಡ ನಿರ್ಮಿಸಲಿದ್ದಾರೆ.

7 / 7
Web contact
Web contact

TV9 Kannada

Read More
Follow Us
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ

Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​

ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ