India vs Australia: ಮೊದಲ ಟೆಸ್ಟ್ನಲ್ಲೇ ನಿರ್ಮಾಣವಾಗುತ್ತಾ 5 ವಿಶ್ವ ದಾಖಲೆಗಳು?
TV9 Web | Updated By: ಝಾಹಿರ್ ಯೂಸುಫ್
Updated on:
Feb 08, 2023 | 8:30 PM
IND vs AUS 1st Test: ಉಭಯ ತಂಡಗಳ ಆಟಗಾರರು ವಿಶ್ವ ದಾಖಲೆಗಳ ಹೊಸ್ತಿಲಲ್ಲಿದ್ದು, ಮೊದಲ ಪಂದ್ಯದಲ್ಲೇ ಮಿಂಚಿದರೆ ಹೊಸ ರೆಕಾರ್ಡ್ಗಳು ಸೃಷ್ಟಿಯಾಗಲಿವೆ. ಆ ದಾಖಲೆಗಳು ಯಾವುವು ಎಂದು ನೋಡುವುದಾದರೆ...
1 / 7
ಭಾರತ-ಆಸ್ಟ್ರೇಲಿಯಾ ನಡುವಣ ಟೆಸ್ಟ್ ಸರಣಿಯು ನಾಳೆಯಿಂದ (ಫೆ.9) ಶುರುವಾಗಲಿದೆ. 4 ಪಂದ್ಯಗಳ ಈ ಸರಣಿಯ ಮೊದಲ ಪಂದ್ಯವು ನಾಗ್ಪುರದ ವಿದರ್ಭ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ವಿಶೇಷ ಎಂದರೆ ಈ ಪಂದ್ಯದಲ್ಲೇ ಐದು ದಾಖಲೆಗಳು ನಿರ್ಮಾಣವಾಗುವ ಸಾಧ್ಯತೆಯಿದೆ.
2 / 7
ಅಂದರೆ ಉಭಯ ತಂಡಗಳ ಆಟಗಾರರು ವಿಶ್ವ ದಾಖಲೆಗಳ ಹೊಸ್ತಿಲಲ್ಲಿದ್ದು, ಮೊದಲ ಪಂದ್ಯದಲ್ಲೇ ಮಿಂಚಿದರೆ ಹೊಸ ರೆಕಾರ್ಡ್ಗಳು ಸೃಷ್ಟಿಯಾಗಲಿವೆ. ಆ ದಾಖಲೆಗಳು ಯಾವುವು ಎಂದು ನೋಡುವುದಾದರೆ....
3 / 7
ಕಿಂಗ್ ಕೊಹ್ಲಿ: ಮೊದಲ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ 64 ರನ್ ಬಾರಿಸಿದರೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 25 ಸಾವಿರ ರನ್ ಪೂರೈಸಲಿದ್ದಾರೆ. ಈ ಮೂಲಕ ಸಾಧನೆ ಮಾಡಿದ ವಿಶ್ವದ 6ನೇ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. ಸದ್ಯ ಈ ಪಟ್ಟಿಯಲ್ಲಿ 34357 ರನ್ ಕಲೆಹಾಕಿರುವ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ.
4 / 7
ಅಶ್ವಿನ್: ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ಗೆ ಟೆಸ್ಟ್ ಕ್ರಿಕೆಟ್‌ನಲ್ಲಿ 450 ವಿಕೆಟ್ ಪೂರೈಸಲು ಕೇವಲ 1 ವಿಕೆಟ್ನ ಅಗತ್ಯವಿದೆ. ಆಸೀಸ್ ವಿರುದ್ಧದ ಮೊದಲ ಪಂದ್ಯದಲ್ಲಿ 1 ವಿಕೆಟ್ ಕಬಳಿಸಿದರೆ ಟೆಸ್ಟ್ ಕ್ರಿಕೆಟ್‌ನಲ್ಲಿ ವೇಗವಾಗಿ 450 ವಿಕೆಟ್ ಪಡೆದ ಭಾರತೀಯ ಬೌಲರ್ ಎನಿಸಿಕೊಳ್ಳಲಿದ್ದಾರೆ.
5 / 7
ಸ್ಟೀವ್ ಸ್ಮಿತ್: ಟೀಮ್ ಇಂಡಿಯಾ ವಿರುದ್ದದ ಮೊದಲ ಟೆಸ್ಟ್ ಪಂದ್ಯದಲ್ಲಿ ಸ್ಟೀವ್ ಸ್ಮಿತ್ ಶತಕ ಬಾರಿಸಿದ ಸಚಿನ್ ತೆಂಡೂಲ್ಕರ್ ಅವರ ವಿಶೇಷ ದಾಖಲೆಯನ್ನು ಸರಿಗಟ್ಟಬಹುದು. ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಅತ್ಯಧಿಕ ಶತಕ ಬಾರಿಸಿದ ದಾಖಲೆ ಸಚಿನ್ ಹೆಸರಿನಲ್ಲಿದೆ. ತೆಂಡೂಲ್ಕರ್ 9 ಶತಕ ಬಾರಿಸಿದರೆ, ಇದೀಗ 8 ಸೆಂಚುರಿಗಳೊಂದಿಗೆ ಸ್ಟೀವ್ ಸ್ಮಿತ್ 2ನೇ ಸ್ಥಾನದಲ್ಲಿದ್ದಾರೆ. ಹೀಗಾಗಿ ಈ ದಾಖಲೆಯನ್ನು ಸರಿಗಟ್ಟುವ ಉತ್ತಮ ಅವಕಾಶ ಸ್ಮಿತ್ ಮುಂದಿದೆ.
6 / 7
ಚೇತೇಶ್ವರ ಪೂಜಾರ: ಬಾರ್ಡರ್ - ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಲು ಚೇತೇಶ್ವರ ಪೂಜಾರಾಗೆ ಕೇವಲ 20 ರನ್ಗಳ ಅಗತ್ಯವಿದೆ. ಮೊದಲ ಪಂದ್ಯದಲ್ಲಿ ಪೂಜಾರ 20 ರನ್ ಬಾರಿಸಿದರೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 2000 ರನ್ ಪೂರೈಸಿದ ದಾಖಲೆ ನಿರ್ಮಿಸಲಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ನಾಲ್ಕನೇ ಭಾರತೀಯ ಹಾಗೂ 6ನೇ ಬ್ಯಾಟ್ಸ್ಮನ್ ಎನಿಸಿಕೊಳ್ಳಲಿದ್ದಾರೆ.
7 / 7
ನಾಥನ್ ಲಿಯಾನ್: ಆಸ್ಟ್ರೇಲಿಯಾ ಸ್ಪಿನ್ನರ್ ನಾಥನ್ ಲಿಯಾನ್ ಟೀಮ್ ಇಂಡಿಯಾ ವಿರುದ್ಧ ಟೆಸ್ಟ್ನಲ್ಲಿ 94 ವಿಕೆಟ್ ಕಬಳಿಸಿದ್ದಾರೆ. ಒಂದು ವೇಳೆ ಮೊದಲ ಪಂದ್ಯದಲ್ಲಿ 6 ವಿಕೆಟ್ ಕಬಳಿಸಿದರೆ ಭಾರತದ ವಿರುದ್ಧ 100 ವಿಕೆಟ್ ಪಡೆದ ಮೊದಲ ಆಸ್ಟ್ರೇಲಿಯಾ ಸ್ಪಿನ್ನರ್ ಎನಿಸಿಕೊಳ್ಳಲಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 3ನೇ ಬೌಲರ್ ಎಂಬ ವಿಶ್ವ ದಾಖಲೆಯನ್ನೂ ಕೂಡ ನಿರ್ಮಿಸಲಿದ್ದಾರೆ.