IND vs AUS: ದಾಖಲೆಗಳ ಮೇಲೆ ದಾಖಲೆ ನಿರ್ಮಿಸಿದ ಯಶಸ್ವಿ ಜೈಸ್ವಾಲ್

Australia vs India: ಪರ್ತ್​ನ ಒಪ್ಟಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾದ ಯುವ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಶತಕದೊಂದಿಗೆ ಜೈಸ್ವಾಲ್ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 24, 2024 | 10:55 AM

ಪರ್ತ್​ ಟೆಸ್ಟ್​ನಲ್ಲಿ ಭರ್ಜರಿ ಸೆಂಚುರಿ ಸಿಡಿಸಿ ಯಶಸ್ವಿ ಜೈಸ್ವಾಲ್ ದಾಖಲೆಗಳ ಮೇಲೆ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ತಮ್ಮ 22ನೇ ವಯಸ್ಸಿನಲ್ಲಿ ಎಂಬುದು ವಿಶೇಷ. ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದ 2ನೇ ಇನಿಂಗ್ಸ್​ನಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಜೈಸ್ವಾಲ್ 205 ಎಸೆತಗಳಲ್ಲಿ ಶತಕ ಪೂರೈಸಿದರು.

1 / 7
ಈ ಶತಕದ ಬಳಿಕ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಯುವ ದಾಂಡಿಗ 275 ಎಸೆತಗಳಲ್ಲಿ 150 ರನ್ ಬಾರಿಸಿದರು. ಈ ಮೂಲಕ ಆಸ್ಟ್ರೇಲಿಯಾದಲ್ಲಿ ಆಡಿದ ಮೊದಲ ಟೆಸ್ಟ್ ಪಂದ್ಯದಲ್ಲೇ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ಜೈಸ್ವಾಲ್ ತಮ್ಮದಾಗಿಸಿಕೊಂಡರು.

2 / 7
ಇದಕ್ಕೂ ಮುನ್ನ ಈ ದಾಖಲೆ ಸುನಿಲ್ ಗವಾಸ್ಕರ್ ಹೆಸರಿನಲ್ಲಿತ್ತು. 1977 ರಲ್ಲಿ ಆಸ್ಟ್ರೇಲಿಯಾದಲ್ಲಿ ಮೊದಲ ಟೆಸ್ಟ್ ಪಂದ್ಯವಾಡಿದ್ದ ಗವಾಸ್ಕರ್ 113 ರನ್​ ಬಾರಿಸಿ ಮಿಂಚಿದ್ದರು. ಇದೀಗ 150* ರನ್​ಗಳೊಂದಿಗೆ ಯಶಸ್ವಿ ಜೈಸ್ವಾಲ್ ಈ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.

3 / 7
ಇನ್ನು ಒಂದು ಕ್ಯಾಲೆಂಡರ್ ವರ್ಷದಲ್ಲಿ ಅತ್ಯಧಿಕ ಟೆಸ್ಟ್ ಶತಕ ಸಿಡಿಸಿದ ಭಾರತದ ಅತ್ಯಂತ ಕಿರಿಯ ಬ್ಯಾಟರ್​ಗಳ ಪಟ್ಟಿಯಲ್ಲಿ ಯಶಸ್ವಿ ಜೈಸ್ವಾಲ್ 2ನೇ ಸ್ಥಾನಕ್ಕೇರಿದ್ದಾರೆ. 2024 ರಲ್ಲಿ 22 ವರ್ಷದ ಜೈಸ್ವಾಲ್ ಒಟ್ಟು 3 ಸೆಂಚುರಿ ಸಿಡಿಸಿದ್ದಾರೆ. ಈ ಪಟ್ಟಿಯಲ್ಲಿ ಸುನಿಲ್ ಗವಾಸ್ಕರ್ (1971) ಹಾಗೂ ವಿನೋದ್ ಕಾಂಬ್ಳಿ (1993) ತಲಾ 4 ಶತಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.

4 / 7
ಪರ್ತ್​ ಮೈದಾನದಲ್ಲಿ ಟೆಸ್ಟ್ ಶತಕ ಬಾರಿಸಿದ ಭಾರತದ ಮೂರನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಯಶಸ್ವ ಜೈಸ್ವಾಲ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್ (1992) ಹಾಗೂ ವಿರಾಟ್ ಕೊಹ್ಲಿ (2018) ಮಾತ್ರ ಪರ್ತ್​ನಲ್ಲಿ ಟೆಸ್ಟ್ ಸೆಂಚುರಿ ಸಿಡಿಸಿದ್ದರು. ಇದೀಗ ಯಶಸ್ವಿ ಜೈಸ್ವಾಲ್ ಕೂಡ ಈ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

5 / 7
ಹಾಗೆಯೇ 23 ವರ್ಷದೊಳಗೆ ಟೀಮ್ ಇಂಡಿಯಾ ಪರ ಅತ್ಯಧಿಕ ಟೆಸ್ಟ್ ಸೆಂಚುರಿ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಯಶಸ್ವಿ ಜೈಸ್ವಾಲ್ 3ನೇ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ (8 ಶತಕಗಳು) ಹಾಗೂ ರವಿ ಶಾಸ್ತ್ರಿ (5 ಶತಕಗಳು) ಮೊದಲೆರಡು ಸ್ಥಾನಗಳಲ್ಲಿದ್ದಾರೆ.

6 / 7
ಇನ್ನು ಆಸ್ಟ್ರೇಲಿಯಾದಲ್ಲಿ ಆಡಿದ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ 150+ ಸ್ಕೋರ್​ಗಳಿಸಿದ ಭಾರತದ ಮೊದಲ ಬ್ಯಾಟರ್ ಎಂಬ ದಾಖಲೆ ಕೂಡ ಯಶಸ್ವಿ ಜೈಸ್ವಾಲ್ ಪಾಲಾಗಿದೆ.

7 / 7
Follow us