IND vs AUS: ಟಿ20 ಕ್ರಿಕೆಟ್​ನಲ್ಲಿ ಇತಿಹಾಸ ಸೃಷ್ಟಿಯಲು ಸೂರ್ಯ ಒಂದು ಹೆಜ್ಜೆ ದೂರ

|

Updated on: Nov 25, 2023 | 5:32 PM

IND vs AUS, Suryakumar Yadav: ತಿರುವನಂತಪುರಂನಲ್ಲಿರುವ ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಎರಡೂ ತಂಡಗಳು ಮುಖಾಮುಖಿಯಾಗಲಿವೆ. ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್‌ಗೆ ಈ ಪಂದ್ಯ ವಿಶೇಷವಾಗಿದ್ದು, ಈ ಪಂದ್ಯದಲ್ಲಿ ಅವರ ಬ್ಯಾಟ್‌ನಿಂದ ದೊಡ್ಡ ಇನ್ನಿಂಗ್ಸ್ ಬಂದರೆ ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಲಿದೆ.

1 / 7
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಕೇರಳದ ತಿರುವನಂತಪುರಂನಲ್ಲಿ ನಡೆಯಲಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ನವೆಂಬರ್ 26 ರಂದು ಸಂಜೆ 7 ಗಂಟೆಗೆ ಆರಂಭವಾಗಲಿದೆ.

2 / 7
ತಿರುವನಂತಪುರಂನಲ್ಲಿರುವ ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಎರಡೂ ತಂಡಗಳು ಮುಖಾಮುಖಿಯಾಗಲಿವೆ. ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್‌ಗೆ ಈ ಪಂದ್ಯ ವಿಶೇಷವಾಗಿದ್ದು, ಈ ಪಂದ್ಯದಲ್ಲಿ ಅವರ ಬ್ಯಾಟ್‌ನಿಂದ ದೊಡ್ಡ ಇನ್ನಿಂಗ್ಸ್ ಬಂದರೆ ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಲಿದೆ.

3 / 7
ಸೂರ್ಯಕುಮಾರ್ ಯಾದವ್ ಅಂತಾರಾಷ್ಟ್ರೀಯ ಟಿ20ಯಲ್ಲಿ 2000 ರನ್ ಪೂರೈಸಲು ಕೇವಲ 79 ರನ್‌ಗಳ ಅಂತರದಲ್ಲಿದ್ದಾರೆ. ಸೂರ್ಯಕುಮಾರ್ ಯಾದವ್ ಇದುವರೆಗೆ 51 ಇನ್ನಿಂಗ್ಸ್‌ಗಳಲ್ಲಿ 46.85 ಸರಾಸರಿ ಮತ್ತು 173.37 ಸ್ಟ್ರೈಕ್ ರೇಟ್‌ನಲ್ಲಿ 1921 ರನ್ ಗಳಿಸಿದ್ದಾರೆ.

4 / 7
ಈ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಈ ಅಂಕಿ-ಅಂಶವನ್ನು ದಾಟಿದರೆ, ಅವರು ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವೇಗವಾಗಿ 2000 ಸಾವಿರ ರನ್ ಗಳಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಳ್ಳಲಿದ್ದಾರೆ. ಸದ್ಯ ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ.

5 / 7
ಅಂತಾರಾಷ್ಟ್ರೀಯ ಟಿ20ಯಲ್ಲಿ 2000 ರನ್ ಗಳಿಸಲು ಕೊಹ್ಲಿ 56 ಇನ್ನಿಂಗ್ಸ್‌ಗಳನ್ನು ಆಡಿದ್ದರು. ಅಂದರೆ 2000 ಟಿ20 ರನ್‌ಗಳನ್ನು ವೇಗವಾಗಿ ಗಳಿಸಿದ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಲು ಸೂರ್ಯ ಇನ್ನೂ 4 ಇನ್ನಿಂಗ್ಸ್‌ಗಳನ್ನು ಹೊಂದಿದ್ದಾರೆ.

6 / 7
ಅಂತಾರಾಷ್ಟ್ರೀಯ ಟಿ20ಯಲ್ಲಿ ವೇಗವಾಗಿ 2000 ಸಾವಿರ ರನ್ ಗಳಿಸಿದ ದಾಖಲೆ ಬಾಬರ್ ಅಜಂ ಮತ್ತು ಮೊಹಮ್ಮದ್ ರಿಜ್ವಾನ್ ಹೆಸರಿನಲ್ಲಿದೆ. ಇಬ್ಬರೂ ಆಟಗಾರರು ತಲಾ 52 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಹೀಗಾಗಿ ಸೂರ್ಯಕುಮಾರ್ ಯಾದವ್ ಈ ಇಬ್ಬರು ಆಟಗಾರರ ಪಟ್ಟಿ ತಲುಪಲು ಮುಂದಿನ ಇನ್ನಿಂಗ್ಸ್​ನಲ್ಲಿ 79 ರನ್ ಗಳಿಸಬೇಕಿದೆ.

7 / 7
ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಕೇವಲ 42 ಎಸೆತಗಳಲ್ಲಿ 9 ಬೌಂಡರಿ ಹಾಗೂ ನಾಲ್ಕು ಸಿಕ್ಸರ್‌ಗಳ ನೆರವಿನಿಂದ 80 ರನ್ ಬಾರಿಸಿದ್ದರು.