ಪವರ್‌ಪ್ಲೇಯಲ್ಲಿ ಸಿಡಿಲಬ್ಬರದ ಬ್ಯಾಟಿಂಗ್; ರೋಹಿತ್-ರಾಹುಲ್ ದಾಖಲೆ ಮುರಿದ ಯಶಸ್ವಿ ಜೈಸ್ವಾಲ್..!
Yashasvi Jaiswal: ತಿರುವನಂತಪುರದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧ ನಡೆದ ಎರಡನೇ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತದ ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ತಮ್ಮ ಬಿರುಗಾಳಿಯ ಇನ್ನಿಂಗ್ಸ್‌ನೊಂದಿಗೆ ಅನೇಕ ವಿಶೇಷ ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
1 / 8
ತಿರುವನಂತಪುರದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧ ನಡೆದ ಎರಡನೇ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತದ ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ತಮ್ಮ ಬಿರುಗಾಳಿಯ ಇನ್ನಿಂಗ್ಸ್‌ನೊಂದಿಗೆ ಅನೇಕ ವಿಶೇಷ ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
2 / 8
ಈ ಪಂದ್ಯದಲ್ಲಿ 25 ಎಸೆತಗಳನ್ನು ಎದುರಿಸಿದ ಜೈಸ್ವಾಲ್ 212ರ ಸ್ಟ್ರೈಕ್ ರೇಟ್‌ನಲ್ಲಿ 9 ಬೌಂಡರಿ ಹಾಗೂ 2 ಸಿಕ್ಸರ್‌ಗಳ ನೆರವಿನಿಂದ 53 ರನ್ ಕಲೆಹಾಕಿದರು. ಬಳಿಕ ಇನಿಂಗ್ಸ್‌ನ ಆರನೇ ಓವರ್‌ನ ಐದನೇ ಎಸೆತದಲ್ಲಿ ನಾಥನ್ ಎಲ್ಲಿಸ್‌ಗೆ ಬಲಿಯಾದರು.
3 / 8
ಕೇವಲ 25 ಎಸೆತಗಳಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದ ಯಶಸ್ವಿ ಅಂತರಾಷ್ಟ್ರೀಯ ಟಿ20 ಪಂದ್ಯದ ಪವರ್‌ಪ್ಲೇಯಲ್ಲಿ ಹೆಚ್ಚು ರನ್ ದಾಖಲಿಸಿದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಯಶಸ್ವಿ ಪಾತ್ರರಾಗಿದ್ದಾರೆ.
4 / 8
ಈ ಮೊದಲು ಈ ದಾಖಲೆ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಹೆಸರಿನಲ್ಲಿತ್ತು. 2020ರಲ್ಲಿ ನ್ಯೂಜಿಲೆಂಡ್ ವಿರುದ್ಧ ರೋಹಿತ್ 50, ರಾಹುಲ್ 2021ರಲ್ಲಿ ಸ್ಕಾಟ್ಲೆಂಡ್ ವಿರುದ್ಧ ಪವರ್ ಪ್ಲೇನಲ್ಲಿ 50 ರನ್ ದಾಖಸಿದ್ದರು.
5 / 8
ಹಾಗೆಯೇ ಯಶಸ್ವಿ ಕೇವಲ 21ನೇ ವಯಸ್ಸಿನಲ್ಲಿ ಭಾರತದ ಪರ ಅತಿ ಹೆಚ್ಚು ಬಾರಿ ಪಂದ್ಯಶ್ರೇಷ್ಠ ಪ್ರಶಸ್ಸಿ ಗೆದ್ದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ಇದುವರೆಗೆ ಯಶಸ್ವಿ ಎರಡನೇ ಬಾರಿಗೆ ಈ ಪ್ರಶಸ್ತಿಯನ್ನು ಪಡೆದುಕೊಂಡು ಈ ಸಾಧನೆ ಮಾಡಿದ್ದಾರೆ.
6 / 8
ಯಶಸ್ವಿಗೂ ಮೊದಲು ರೋಹಿತ್ ಶರ್ಮಾ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್ ಮತ್ತು ರವಿ ಬಿಷ್ಣೋಯ್ ಈ ವಯಸ್ಸಿನಲ್ಲಿ ತಲಾ ಒಮ್ಮೆ ಮಾತ್ರ ಪಂದ್ಯದ ಆಟಗಾರ ಪ್ರಶಸ್ತಿ ಪಡೆದಿದ್ದರು.
7 / 8
ಇದಲ್ಲದೆ, ಸೀನ್ ಅಬಾಟ್ ಎಸೆದ ಇನಿಂಗ್ಸ್‌ನ ನಾಲ್ಕನೇ ಓವರ್ನಲ್ಲಿ ಯಶಸ್ವಿ 24 ರನ್ ಚಚ್ಚಿದರು. ಇದರೊಂದಿಗೆ ಟಿ20 ಅಂತಾರಾಷ್ಟ್ರೀಯ ಪಂದ್ಯವೊಂದರಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರರ ಪೈಕಿ ಜಂಟಿ ಐದನೇ ಸ್ಥಾನಕ್ಕೆ ಜೈಸ್ವಾಲ್ ತಲುಪಿದರು. ಇದಕ್ಕೂ ಮುನ್ನ ರೋಹಿತ್ 2017ರಲ್ಲಿ ಶ್ರೀಲಂಕಾ ವಿರುದ್ಧ 24 ರನ್ ಗಳಿಸಿದ್ದರು.
8 / 8
ಎರಡನೇ ಟಿ-20ಯಲ್ಲಿ ಆಸ್ಟ್ರೇಲಿಯಾವನ್ನು 44 ರನ್‌ಗಳಿಂದ ಸೋಲಿಸುವ ಮೂಲಕ ಭಾರತ ಕ್ರಿಕೆಟ್ ತಂಡ ಐದು ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ ಎಂಬುದು ಗಮನಾರ್ಹ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 4 ವಿಕೆಟ್ ನಷ್ಟಕ್ಕೆ 235 ರನ್ ಕಲೆಹಾಕಿತು. ಇದಕ್ಕೆ ಉತ್ತರವಾಗಿ ಆಸ್ಟ್ರೇಲಿಯಾ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 191 ರನ್ ಗಳಿಸಲಷ್ಟೇ ಶಕ್ತವಾಯಿತು.