IND vs AUS 2nd Test: 4 ಪ್ರಮುಖ ಬದಲಾವಣೆ: ಆಸ್ಟ್ರೇಲಿಯಾ ತಂಡದ ಮಾಸ್ಟರ್ ಪ್ಲ್ಯಾನ್

India vs Australia 2nd Test: ಈ ನಾಲ್ಕು ಪ್ರಮುಖ ಬದಲಾವಣೆಯೊಂದಿಗೆ ಆಸ್ಟ್ರೇಲಿಯಾ ತಂಡವು ದೆಹಲಿಯಲ್ಲಿ ಟೀಮ್ ಇಂಡಿಯಾವನ್ನು ಎದುರಿಸಲು ಪ್ಲ್ಯಾನ್ ರೂಪಿಸಿದೆ. ಈ ಮೂಲಕ 2ನೇ ಟೆಸ್ಟ್ ಪಂದ್ಯದಲ್ಲಿ ಜಯ ಸಾಧಿಸಿ ಸರಣಿಯನ್ನು 1-1 ಅಂತರದಿಂದ ಸಮಗೊಳಿಸುವ ಇರಾದೆಯಲ್ಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Feb 13, 2023 | 3:29 PM

ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 2ನೇ ಪಂದ್ಯವು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ. ಮೊದಲ ಪಂದ್ಯದಲ್ಲಿ ಇನಿಂಗ್ಸ್ ಹಾಗೂ 132 ರನ್​ಗಳಿಂದ ಹೀನಾಯವಾಗಿ ಸೋತಿರುವ ಆಸೀಸ್ ಬಳಗವು ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ.

1 / 6
ನಾಲ್ಕು ಪಂದ್ಯಗಳ ಈ ಸರಣಿಯ 2ನೇ ಮ್ಯಾಚ್​ನಲ್ಲಿ ಪ್ಯಾಟ್ ಕಮಿನ್ಸ್ ಬಳಗವು ಗೆದ್ದರೆ ಸರಣಿಯಲ್ಲಿ ಸಮಬಲ ಸಾಧಿಸಬಹುದು. ಒಂದು ವೇಳೆ ಟೀಮ್ ಇಂಡಿಯಾ ಗೆದ್ದರೆ ಸರಣಿ ಗೆಲ್ಲುವ ಅವಕಾಶ ಭಾರತದ ಪಾಲಿಗೆ ಹೆಚ್ಚಾಗಲಿದೆ. ಹೀಗಾಗಿಯೇ 2ನೇ ಟೆಸ್ಟ್ ಪಂದ್ಯವನ್ನು ಆಸ್ಟ್ರೇಲಿಯಾ   ಗಂಭೀರವಾಗಿ ಪರಿಗಣಿಸಿದೆ.

2 / 6
ಇದಕ್ಕಾಗಿ ಪ್ಲೇಯಿಂಗ್ ಇಲೆವೆನ್​ನಲ್ಲೂ ಮಹತ್ವದ ಬದಲಾವಣೆ ತರಲು ಮುಂದಾಗಿದೆ. ಅಂದರೆ ಮೊದಲ ಪಂದ್ಯದಲ್ಲಿ ಕಣಕ್ಕಿಳಿದ 4 ಆಟಗಾರರನ್ನು 2ನೇ ಪಂದ್ಯದಿಂದ ಕೈ ಬಿಡುವ ಸಾಧ್ಯತೆಯಿದೆ. ಅದರಂತೆ ವಿಕೆಟ್ ಕೀಪರ್ ಅಲೆಕ್ಸ್ ಕ್ಯಾರಿಯನ್ನೂ ಕೂಡ ತಂಡದಿಂದ ಕೈ ಬಿಡುವ ಸಾಧ್ಯತೆಯಿದೆ. ಹಾಗೆಯೇ ರೆನ್​ಶಾ ಹಾಗೂ ಹ್ಯಾಂಡ್ಸ್​ಕಾಂಬ್ ಕೂಡ ಆಡುವ ಬಳಗದಿಂದ ಹೊರಬೀಳಲಿದ್ದಾರೆ. ಇದಲ್ಲದೆ ಬೋಲ್ಯಾಂಡ್​ಗೂ ದೆಹಲಿ ಟೆಸ್ಟ್​ನಲ್ಲಿ ಅವಕಾಶ ಸಿಗುವುದಿಲ್ಲ.

3 / 6
ಇಲ್ಲಿ ಅಲೆಕ್ಸ್ ಕ್ಯಾರಿ ಬದಲಿಗೆ ಟ್ರಾವಿಡ್ ಹೆಡ್​ ಅವರನ್ನು ಕಣಕ್ಕಿಳಿಸಲು ಆಸ್ಟ್ರೇಲಿಯಾ ಪ್ಲ್ಯಾನ್ ರೂಪಿಸಿದೆ. ಈ ಮೂಲಕ ಡೇವಿಡ್ ವಾರ್ನರ್​ಗೆ ಮತ್ತೊಂದು ಅವಕಾಶ ನೀಡುವ ಬಗ್ಗೆ ಚಿಂತಿಸಿದೆ. ಇನ್ನು ಹ್ಯಾಂಡ್ಸ್‌ಕಾಂಬ್ ಬದಲಿಗೆ ಕ್ರಿಸ್ ಗ್ರೀನ್, ರೆನ್‌ಶಾ ಬದಲಿಗೆ ಕುಹ್ನೆಮನ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಷ್ಟೇ ಅಲ್ಲದೆ ಮೊದಲ ಪಂದ್ಯದಿಂದ ಹೊರಗುಳಿದಿದ್ದ ವೇಗಿ ಮಿಚೆಲ್ ಸ್ಟಾರ್ಕ್​ ಬೋಲ್ಯಾಂಡ್ ಬದಲಿಗೆ 2ನೇ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.

4 / 6
ಈ ನಾಲ್ಕು ಪ್ರಮುಖ ಬದಲಾವಣೆಯೊಂದಿಗೆ ಆಸ್ಟ್ರೇಲಿಯಾ ತಂಡವು ದೆಹಲಿಯಲ್ಲಿ ಟೀಮ್ ಇಂಡಿಯಾವನ್ನು ಎದುರಿಸಲು ಪ್ಲ್ಯಾನ್ ರೂಪಿಸಿದೆ. ಈ ಮೂಲಕ 2ನೇ ಟೆಸ್ಟ್ ಪಂದ್ಯದಲ್ಲಿ ಜಯ ಸಾಧಿಸಿ ಸರಣಿಯನ್ನು 1-1 ಅಂತರದಿಂದ ಸಮಗೊಳಿಸುವ ಇರಾದೆಯಲ್ಲಿದೆ.

5 / 6
ಆಸ್ಟ್ರೇಲಿಯಾ ಟೆಸ್ಟ್ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮರೋನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್ , ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲಾಬುಶೇನ್, ನಾಥನ್ ಲಿಯಾನ್, ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್‌ಶಾ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್, ಮ್ಯಾಟ್‌ ಕುಹ್ನೆಮನ್‌.

6 / 6
Follow us