- Kannada News Photo gallery Cricket photos IND vs AUS 2nd Test: Ex-India batter makes 2 big changes in playing XI
IND vs AUS 2nd Test: ಇಬ್ಬರು ಔಟ್, ಮತ್ತಿಬ್ಬರು ಇನ್: ಹೀಗಿರಲಿದೆಯಂತೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್
India vs Australia 2nd Test Playing 11: ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳಿದ್ದಾರೆ. ಹೀಗಾಗಿ ಒಂದು ಬದಲಾವಣೆ ಖಚಿತ ಎನ್ನಬಹುದು.
Updated on: Feb 16, 2023 | 10:24 PM

4 ಪಂದ್ಯಗಳ ಸರಣಿಯನ್ನು ಸಮಬಲದಲ್ಲಿ ಅಂತ್ಯಗೊಳಿಸಲು ಆಸ್ಟ್ರೇಲಿಯಾ ತಂಡವು ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿದೆ. ಮತ್ತೊಂದೆಡೆ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೇರಲು ಈ ಪಂದ್ಯವನ್ನು ಗೆಲ್ಲಲೇಬೇಕು. ಹೀಗಾಗಿ ಅಹಮದಾಬಾದ್ ಮೈದಾನದಲ್ಲಿ ಉಭಯ ತಂಡಗಳಿಂದ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

ಇನ್ನು ಈ ಮಹತ್ವದ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲೂ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಮೊದಲ 3 ಪಂದ್ಯಗಳಲ್ಲಿ ಕೇವಲ 57 ರನ್ ಕಲೆಹಾಕಿರುವ ಕೆಎಸ್ ಭರತ್ ಅವರನ್ನು ಈ ಪಂದ್ಯದಿಂದ ಕೈ ಬಿಡಬಹುದು. ಬದಲಾಗಿ ಯುವ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ಗೆ ಚಾನ್ಸ್ ನೀಡಬಹುದು.

ವಾಸಿಂ ಜಾಫರ್ ಪ್ರಕಾರ, ದೆಹಲಿ ಟೆಸ್ಟ್ನಲ್ಲಿ ಟೀಮ್ ಇಂಡಿಯಾ 2 ಬದಲಾವಣೆ ಮಾಡಿಕೊಳ್ಳುವುದು ಖಚಿತ. ಶ್ರೇಯಸ್ ಅಯ್ಯರ್ ಆಗಮನದಿಂದಾಗಿ ಸೂರ್ಯಕುಮಾರ್ ಯಾದವ್ ತಂಡದಿಂದ ಹೊರಬೀಳಲಿದ್ದಾರೆ. ಹಾಗೆಯೇ ಮೊದಲ ಪಂದ್ಯದಲ್ಲಿ ವಿಫಲರಾಗಿದ್ದ ಕೆಎಲ್ ರಾಹುಲ್ ಬದಲಿಗೆ ಶುಭ್ಮನ್ ಗಿಲ್ಗೆ ಅವಕಾಶ ಸಿಗಲಿದೆ ಎಂದಿದ್ದಾರೆ ಜಾಫರ್. ಅದರಂತೆ ವಾಸಿಂ ಜಾಫರ್ ಅವರ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ.

ರೋಹಿತ್ ಶರ್ಮಾ (ನಾಯಕ)

ಶುಭ್ಮನ್ ಗಿಲ್

ಚೇತೇಶ್ವರ ಪೂಜಾರ

ವಿರಾಟ್ ಕೊಹ್ಲಿ

ಶ್ರೇಯಸ್ ಅಯ್ಯರ್

ಕೆಎಸ್ ಭರತ್ (ವಿಕೆಟ್ ಕೀಪರ್)

ರವೀಂದ್ರ ಜಡೇಜಾ

ಅಕ್ಷರ್ ಪಟೇಲ್

ರವಿಚಂದ್ರನ್ ಅಶ್ವಿನ್

ಮೊಹಮ್ಮದ್ ಸಿರಾಜ್

ಮೊಹಮ್ಮದ್ ಶಮಿ

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್.
