AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: 50 ವರ್ಷಗಳಲ್ಲಿ 2ನೇ ಬಾರಿ; ಜೀವಮಾನದ ಸರ್ವಶ್ರೇಷ್ಠ ಪ್ರದರ್ಶನ ನೀಡಿದ ಜಡೇಜಾ..!

Ravindra Jadeja: ಜಡೇಜಾ ಎರಡನೇ ಇನಿಂಗ್ಸ್‌ನಲ್ಲಿ 12.1 ಓವರ್‌ ಬೌಲ್ ಮಾಡಿ 42 ರನ್‌ಗಳಿಗೆ 7 ವಿಕೆಟ್ ಪಡೆದಿದ್ದಾರೆ. ಇದು ಟೆಸ್ಟ್ ಕ್ರಿಕೆಟ್‌ನ ಒಂದು ಇನ್ನಿಂಗ್ಸ್‌ನಲ್ಲಿ ಜಡೇಜಾ ಅವರ ವೃತ್ತಿಜೀವನದ ಅತ್ಯುತ್ತಮ ಪ್ರದರ್ಶನವಾಗಿದೆ.

ಪೃಥ್ವಿಶಂಕರ
|

Updated on: Feb 19, 2023 | 1:10 PM

Share
ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲೂ ಆಸೀಸ್ ಪಡೆ ಸೋಲಿನ ಸುಳಿಗೆ ಸಿಲುಕಿದೆ. ದೆಹಲಿ ಟೆಸ್ಟ್​ನಲ್ಲಿ ಆಸ್ಟ್ರೇಲಿಯಾ ತನ್ನ ಎರಡನೇ ಇನ್ನಿಂಗ್ಸ್​ನಲ್ಲಿ ಕೇವಲ 113 ರನ್‌ಗಳಿಗೆ ಆಲೌಟ್ ಆಗುವುದರೊಂದಿಗೆ ಭಾರತಕ್ಕೆ ಸುಲಭದ ಟಾರ್ಗೆಟ್ ನೀಡಿದೆ. ಆಸೀಸ್ ಪಾಳಯವನ್ನು ಇನ್ನಿಲ್ಲದಂತೆ ಕಾಡಿದ ರವೀಂದ್ರ ಜಡೇಜಾ ಈ ಪಂದ್ಯದಲ್ಲೂ ವಿಶೇಷ ದಾಖಲೆಯೊಂದನ್ನು ಬರೆದಿದ್ದಾರೆ.

1 / 5
ಜಡೇಜಾ ಎರಡನೇ ಇನಿಂಗ್ಸ್‌ನಲ್ಲಿ 12.1 ಓವರ್‌ ಬೌಲ್ ಮಾಡಿ 42 ರನ್‌ಗಳಿಗೆ 7 ವಿಕೆಟ್ ಪಡೆದಿದ್ದಾರೆ. ಇದು ಟೆಸ್ಟ್ ಕ್ರಿಕೆಟ್‌ನ ಒಂದು ಇನ್ನಿಂಗ್ಸ್‌ನಲ್ಲಿ ಜಡೇಜಾ ಅವರ ವೃತ್ತಿಜೀವನದ ಅತ್ಯುತ್ತಮ ಪ್ರದರ್ಶನವಾಗಿದೆ. ಇದಕ್ಕೂ ಮೊದಲು, 2016 ರಲ್ಲಿ ಇಂಗ್ಲೆಂಡ್ ವಿರುದ್ಧದ ಚೆನ್ನೈ ಟೆಸ್ಟ್‌ನಲ್ಲಿ ಜಡೇಜಾ 48 ರನ್‌ಗಳಿಗೆ 7 ವಿಕೆಟ್ ಪಡೆದಿದ್ದು ಅವರ ಅತ್ಯುತ್ತಮ ಪ್ರದರ್ಶನವಾಗಿತ್ತು.

2 / 5
ಅದರಲ್ಲೂ ಜಡೇಜಾ ಪಡೆದ 7 ವಿಕೆಟ್‌ಗಳಲ್ಲಿ 5 ವಿಕೆಟ್‌ಗಳನ್ನು ಕ್ಲೀನ್ ಬೌಲ್ಡ್ ಮಾಡಿದರು. ಕಳೆದ 50 ವರ್ಷಗಳಲ್ಲಿ ಸ್ಪಿನ್ನರ್ ಒಬ್ಬರು ಇನ್ನಿಂಗ್ಸ್‌ನಲ್ಲಿ 5 ಬ್ಯಾಟ್ಸ್‌ಮನ್‌ಗಳನ್ನು ಬೌಲ್ಡ್ ಮಾಡಿರುವುದು ಇದು ಎರಡನೇ ಬಾರಿ. ಇದಕ್ಕೂ ಮೊದಲು, 1992 ರಲ್ಲಿ ಜೋಹಾನ್ಸ್‌ಬರ್ಗ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಅನಿಲ್ ಕುಂಬ್ಳೆ ಈ ಸಾಧನೆ ಮಾಡಿದ್ದರು. ಮತ್ತೊಂದೆಡೆ, ವೇಗದ ಬೌಲರ್‌ಗಳಲ್ಲಿ ಪಾಕಿಸ್ತಾನದ ಶೋಯೆಬ್ ಅಖ್ತರ್ ಈ ಸಾಧನೆ ಮಾಡಿದ ಕೊನೆಯ ಬೌಲರ್ ಎನಿಸಿಕೊಂಡಿದ್ದಾರೆ. ಅವರು 2002 ರಲ್ಲಿ ನ್ಯೂಜಿಲೆಂಡ್ ವಿರುದ್ಧ ಲಾಹೋರ್‌ನಲ್ಲಿ ಈ ಸಾಧನೆ ಮಾಡಿದ್ದರು.

3 / 5
ಎರಡನೇ ಇನ್ನಿಂಗ್ಸ್‌ನಲ್ಲಿ 7 ವಿಕೆಟ್‌ಗಳನ್ನು ಕಬಳಿಸುವುದರೊಂದಿಗೆ ದೆಹಲಿ ಟೆಸ್ಟ್‌ನಲ್ಲಿ ಜಡೇಜಾ ಅವರ ಒಟ್ಟು ವಿಕೆಟ್‌ಗಳ ಸಂಖ್ಯೆ ಈಗ 10 ಕ್ಕೆ ಏರಿದೆ. ಇದಕ್ಕಾಗಿ ಅವರು 110 ರನ್ ವ್ಯಯಿಸಿದ್ದಾರೆ.

4 / 5
ಪ್ರಸಕ್ತ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಎರಡು ಟೆಸ್ಟ್‌ಗಳಲ್ಲಿ ಜಡೇಜಾ ಒಟ್ಟು 17 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಇದರಲ್ಲಿ ಅವರು ಎರಡು ಬಾರಿ 5 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್‌ಗಳನ್ನು ಪಡೆದಿದ್ದಾರೆ. ದೆಹಲಿಯಲ್ಲಿ 10 ವಿಕೆಟ್ ಪಡೆಯುವ ಮೊದಲು ಅವರು ನಾಗ್ಪುರದಲ್ಲಿ 7 ವಿಕೆಟ್ ಪಡೆದಿದ್ದರು.

5 / 5
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ

ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ

ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?

ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!

ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು

ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ

ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ

ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು

ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು