- Kannada News Photo gallery Cricket photos IND vs AUS 2nd test Ravindra Jadeja took seven wicket in 42 runs career best performance in Delhi Test vs Australia
IND vs AUS: 50 ವರ್ಷಗಳಲ್ಲಿ 2ನೇ ಬಾರಿ; ಜೀವಮಾನದ ಸರ್ವಶ್ರೇಷ್ಠ ಪ್ರದರ್ಶನ ನೀಡಿದ ಜಡೇಜಾ..!
Ravindra Jadeja: ಜಡೇಜಾ ಎರಡನೇ ಇನಿಂಗ್ಸ್‌ನಲ್ಲಿ 12.1 ಓವರ್ ಬೌಲ್ ಮಾಡಿ 42 ರನ್‌ಗಳಿಗೆ 7 ವಿಕೆಟ್ ಪಡೆದಿದ್ದಾರೆ. ಇದು ಟೆಸ್ಟ್ ಕ್ರಿಕೆಟ್‌ನ ಒಂದು ಇನ್ನಿಂಗ್ಸ್‌ನಲ್ಲಿ ಜಡೇಜಾ ಅವರ ವೃತ್ತಿಜೀವನದ ಅತ್ಯುತ್ತಮ ಪ್ರದರ್ಶನವಾಗಿದೆ.
Updated on: Feb 19, 2023 | 1:10 PM

ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲೂ ಆಸೀಸ್ ಪಡೆ ಸೋಲಿನ ಸುಳಿಗೆ ಸಿಲುಕಿದೆ. ದೆಹಲಿ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 113 ರನ್‌ಗಳಿಗೆ ಆಲೌಟ್ ಆಗುವುದರೊಂದಿಗೆ ಭಾರತಕ್ಕೆ ಸುಲಭದ ಟಾರ್ಗೆಟ್ ನೀಡಿದೆ. ಆಸೀಸ್ ಪಾಳಯವನ್ನು ಇನ್ನಿಲ್ಲದಂತೆ ಕಾಡಿದ ರವೀಂದ್ರ ಜಡೇಜಾ ಈ ಪಂದ್ಯದಲ್ಲೂ ವಿಶೇಷ ದಾಖಲೆಯೊಂದನ್ನು ಬರೆದಿದ್ದಾರೆ.

ಜಡೇಜಾ ಎರಡನೇ ಇನಿಂಗ್ಸ್‌ನಲ್ಲಿ 12.1 ಓವರ್ ಬೌಲ್ ಮಾಡಿ 42 ರನ್‌ಗಳಿಗೆ 7 ವಿಕೆಟ್ ಪಡೆದಿದ್ದಾರೆ. ಇದು ಟೆಸ್ಟ್ ಕ್ರಿಕೆಟ್‌ನ ಒಂದು ಇನ್ನಿಂಗ್ಸ್‌ನಲ್ಲಿ ಜಡೇಜಾ ಅವರ ವೃತ್ತಿಜೀವನದ ಅತ್ಯುತ್ತಮ ಪ್ರದರ್ಶನವಾಗಿದೆ. ಇದಕ್ಕೂ ಮೊದಲು, 2016 ರಲ್ಲಿ ಇಂಗ್ಲೆಂಡ್ ವಿರುದ್ಧದ ಚೆನ್ನೈ ಟೆಸ್ಟ್‌ನಲ್ಲಿ ಜಡೇಜಾ 48 ರನ್‌ಗಳಿಗೆ 7 ವಿಕೆಟ್ ಪಡೆದಿದ್ದು ಅವರ ಅತ್ಯುತ್ತಮ ಪ್ರದರ್ಶನವಾಗಿತ್ತು.

ಅದರಲ್ಲೂ ಜಡೇಜಾ ಪಡೆದ 7 ವಿಕೆಟ್‌ಗಳಲ್ಲಿ 5 ವಿಕೆಟ್‌ಗಳನ್ನು ಕ್ಲೀನ್ ಬೌಲ್ಡ್ ಮಾಡಿದರು. ಕಳೆದ 50 ವರ್ಷಗಳಲ್ಲಿ ಸ್ಪಿನ್ನರ್ ಒಬ್ಬರು ಇನ್ನಿಂಗ್ಸ್‌ನಲ್ಲಿ 5 ಬ್ಯಾಟ್ಸ್‌ಮನ್‌ಗಳನ್ನು ಬೌಲ್ಡ್ ಮಾಡಿರುವುದು ಇದು ಎರಡನೇ ಬಾರಿ. ಇದಕ್ಕೂ ಮೊದಲು, 1992 ರಲ್ಲಿ ಜೋಹಾನ್ಸ್‌ಬರ್ಗ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಅನಿಲ್ ಕುಂಬ್ಳೆ ಈ ಸಾಧನೆ ಮಾಡಿದ್ದರು. ಮತ್ತೊಂದೆಡೆ, ವೇಗದ ಬೌಲರ್‌ಗಳಲ್ಲಿ ಪಾಕಿಸ್ತಾನದ ಶೋಯೆಬ್ ಅಖ್ತರ್ ಈ ಸಾಧನೆ ಮಾಡಿದ ಕೊನೆಯ ಬೌಲರ್ ಎನಿಸಿಕೊಂಡಿದ್ದಾರೆ. ಅವರು 2002 ರಲ್ಲಿ ನ್ಯೂಜಿಲೆಂಡ್ ವಿರುದ್ಧ ಲಾಹೋರ್‌ನಲ್ಲಿ ಈ ಸಾಧನೆ ಮಾಡಿದ್ದರು.

ಎರಡನೇ ಇನ್ನಿಂಗ್ಸ್‌ನಲ್ಲಿ 7 ವಿಕೆಟ್‌ಗಳನ್ನು ಕಬಳಿಸುವುದರೊಂದಿಗೆ ದೆಹಲಿ ಟೆಸ್ಟ್‌ನಲ್ಲಿ ಜಡೇಜಾ ಅವರ ಒಟ್ಟು ವಿಕೆಟ್‌ಗಳ ಸಂಖ್ಯೆ ಈಗ 10 ಕ್ಕೆ ಏರಿದೆ. ಇದಕ್ಕಾಗಿ ಅವರು 110 ರನ್ ವ್ಯಯಿಸಿದ್ದಾರೆ.

ಪ್ರಸಕ್ತ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಎರಡು ಟೆಸ್ಟ್‌ಗಳಲ್ಲಿ ಜಡೇಜಾ ಒಟ್ಟು 17 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಇದರಲ್ಲಿ ಅವರು ಎರಡು ಬಾರಿ 5 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್‌ಗಳನ್ನು ಪಡೆದಿದ್ದಾರೆ. ದೆಹಲಿಯಲ್ಲಿ 10 ವಿಕೆಟ್ ಪಡೆಯುವ ಮೊದಲು ಅವರು ನಾಗ್ಪುರದಲ್ಲಿ 7 ವಿಕೆಟ್ ಪಡೆದಿದ್ದರು.



















