- Kannada News Photo gallery Cricket photos IND vs AUS 2nd test Virat Kohli leaves behind Sachin Tendulkar to score fastest 25000 runs in international cricket
IND vs AUS: ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 25000 ರನ್! ಸಚಿನ್ ಹಿಂದಿಕ್ಕಿದ ಕಿಂಗ್ ಕೊಹ್ಲಿ
Virat Kohli: ಆಸೀಸ್ ವಿರುದ್ಧದ ಎರಡನೇ ಟೆಸ್ಟ್ 2ನೇ ಇನ್ನಿಂಗ್ಸ್ನಲ್ಲಿ ಬೌಂಡರಿ ಬಾರಿಸಿದ ವಿರಾಟ್ ಇದರೊಂದಿಗೆ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 25 ಸಾವಿರ ರನ್ ಪೂರೈಸಿದ ದಾಖಲೆ ಬರೆದಿದ್ದಾರೆ.
Updated on:Feb 19, 2023 | 3:40 PM

ಮೈದಾನಕ್ಕಿಳಿದಾಗಲೆಲ್ಲ ಒಂದಿಲ್ಲೊಂದು ದಾಖಲೆ ಬರೆಯುವ ಕಿಂಗ್ ಕೊಹ್ಲಿ, ಇದೀಗ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೂರನೇ ದಿನದಲ್ಲೂ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ್ದಾರೆ.

ಆಸೀಸ್ ವಿರುದ್ಧದ ಎರಡನೇ ಟೆಸ್ಟ್ 2ನೇ ಇನ್ನಿಂಗ್ಸ್ನಲ್ಲಿ ಬೌಂಡರಿ ಬಾರಿಸಿದ ವಿರಾಟ್ ಇದರೊಂದಿಗೆ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 25 ಸಾವಿರ ರನ್ ಪೂರೈಸಿದ ದಾಖಲೆ ಬರೆದಿದ್ದಾರೆ. ಇದರೊಂದಿಗೆ ಈ ಸಾಧನೆ ಮಾಡಿದ ಎರಡನೇ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಕೊಹ್ಲಿ ಪಾತ್ರರಾಗಿದ್ದಾರೆ.

ಹೆಚ್ಚು ಅಂತಾರಾಷ್ಟ್ರೀಯ ರನ್ ಕಲೆ ಹಾಕಿದ ಆಟಗಾರರ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಮೊದಲ ಸ್ಥಾನದಲ್ಲಿದ್ದು, ಸಚಿನ್ ಒಟ್ಟು 664 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 34 ಸಾವಿರದ 357 ರನ್ ಕಲೆ ಹಾಕಿದ್ದಾರೆ.

ಹಾಗೆಯೇ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 25 ಸಾವಿರ ರನ್ ಪೂರೈಸಿದ ಮೊದಲ ಆಟಗಾರ ಎಂಬ ದಾಖಲೆಯನ್ನೂ ಕೊಹ್ಲಿ ಬರೆದಿದ್ದಾರೆ. ಇದರೊಂದಿಗೆ ಕೊಹ್ಲಿ, ಈ ಹಿಂದೆ ಸಚಿನ್ ಹೆಸರಿನಲ್ಲಿದ್ದ ದಾಖಲೆಯನ್ನೂ ಮುರಿದಿದ್ದಾರೆ.

ಅಲ್ಲದೆ 25,000 ಅಂತಾರಾಷ್ಟ್ರೀಯ ರನ್ ಪೂರೈಸಿದ ವಿಶ್ವದ ಆರನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಕೊಹ್ಲಿ ಪಾತ್ರರಾಗಿದ್ದಾರೆ.

ವಿಶ್ವ ಮಟ್ಟದಲ್ಲಿ ಕೊಹ್ಲಿಗಿಂತ ಮೊದಲು ಸಚಿನ್ ತೆಂಡೂಲ್ಕರ್, ಕುಮಾರ ಸಂಗಕ್ಕಾರ, ರಿಕಿ ಪಾಂಟಿಂಗ್, ಮಹೇಲಾ ಜಯವರ್ಧನೆ ಮತ್ತು ಜಾಕ್ವೆಸ್ ಕಾಲಿಸ್ ಈ ಸಾಧನೆ ಮಾಡಿದ್ದಾರೆ.
Published On - 3:36 pm, Sun, 19 February 23




