IND vs AUS: ಜಡೇಜಾ 1, ಅಶ್ವಿನ್ 2, ಸಿರಾಜ್ 4! ಇಂದೋರ್​ ಟೆಸ್ಟ್​ನಲ್ಲಿ ವಿಶ್ವ ದಾಖಲೆ ನಿರ್ಮಾಣ?

IND vs AUS: ತಂಡದಲ್ಲಿ ಆಲ್​ರೌಂಡರ್​ ಆಗಿ ಸ್ಥಾನ ಪಡೆದಿರುವ ಅಶ್ವಿನ್ ಹಾಗೂ ಜಡೇಜಾಗೆ ಈ ಪಂದ್ಯದಲ್ಲಿ ವಿಶ್ವ ದಾಖಲೆ ಸೃಷ್ಟಿಸುವ ಅವಕಾಶವಿದ್ದು, ಅವರೊಂದಿಗೆ ಸಿರಾಜ್​ ಕೂಡ ಮಹತ್ವದ ಮೈಲಿಗಲ್ಲು ಸ್ಥಾಪಿಸಲಿದ್ದಾರೆ.

ಪೃಥ್ವಿಶಂಕರ
|

Updated on: Mar 01, 2023 | 10:19 AM

ಇಂದೋರ್ ಟೆಸ್ಟ್‌ನಲ್ಲಿ ಟಾಸ್ ಗೆದ್ದ ಭಾರತ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ 2 ಬದಲಾವಣೆಗಳನ್ನು ಮಾಡಿದೆ. ಆರಂಭಿಕ ಕೆಎಲ್ ರಾಹುಲ್ ಬದಲು ಶುಭ್​ಮನ್ ಗಿಲ್ ತಂಡಕ್ಕೆ ಎಂಟ್ರಿಕೊಟ್ಟಿದ್ದಾರೆ. ವೇಗಿ ಮೊಹಮ್ಮದ್ ಶಮಿ ಬದಲು ಉಮೇಶ್ ಯಾದವ್ ಆಡುತ್ತಿದ್ದಾರೆ. ಇನ್ನುಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ.

1 / 6
ಇನ್ನು ತಂಡದಲ್ಲಿ ಆಲ್​ರೌಂಡರ್​ ಆಗಿ ಸ್ಥಾನ ಪಡೆದಿರುವ ಅಶ್ವಿನ್ ಹಾಗೂ ಜಡೇಜಾಗೆ ಈ ಪಂದ್ಯದಲ್ಲಿ ವಿಶ್ವ ದಾಖಲೆ ಸೃಷ್ಟಿಸುವ ಅವಕಾಶವಿದ್ದು, ಅವರೊಂದಿಗೆ ಸಿರಾಜ್​ ಕೂಡ ಮಹತ್ವದ ಮೈಲಿಗಲ್ಲು ಸ್ಥಾಪಿಸಲಿದ್ದಾರೆ. ಹಾಗಿದ್ದರೆ ಈ ಮೂವರು ಆಟಗಾರರು ಸೃಷ್ಟಿಸುವ ಆ ದಾಖಲೆಗಳೇನು ಎಂಬುದರ ವಿವರ ಇಲ್ಲಿದೆ.

2 / 6
ಇಂದೋರ್ ಟೆಸ್ಟ್‌ನಲ್ಲಿ ರವೀಂದ್ರ ಜಡೇಜಾ 1 ವಿಕೆಟ್ ಪಡೆದರೆ, ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 5000 ರನ್ ಮತ್ತು 500 ವಿಕೆಟ್‌ಗಳನ್ನು ಗಳಿಸಿದ ಎರಡನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಅವರಿಗಿಂತ ಮೊದಲು ಭಾರತದ ಪರ ಕಪಿಲ್ ದೇವ್ ಈ ಸಾಧನೆ ಮಾಡಿದ್ದರು. ಸದ್ಯ ಜಡೇಜಾ 297 ಅಂತರಾಷ್ಟ್ರೀಯ ಪಂದ್ಯಗಳಲ್ಲಿ 499 ವಿಕೆಟ್ ಪಡೆದಿದ್ದು, ಇದಲ್ಲದೆ ಬ್ಯಾಟಿಂಗ್‌ನಲ್ಲಿ 240 ಅಂತಾರಾಷ್ಟ್ರೀಯ ಇನ್ನಿಂಗ್ಸ್‌ಗಳಲ್ಲಿ 5523 ರನ್ ಗಳಿಸಿದ್ದಾರೆ.

3 / 6
ಹಾಗೆಯೇ ಅಶ್ವಿನ್ ಕೂಡ ಈ ಟೆಸ್ಟ್​ನಲ್ಲಿ 2 ವಿಕೆಟ್ ಪಡೆದ ತಕ್ಷಣ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಮೂರನೇ ಬೌಲರ್ ಎನಿಸಿಕೊಳ್ಳಲಿದ್ದಾರೆ. ಜೊತೆಗೆ 687 ಅಂತಾರಾಷ್ಟ್ರೀಯ ವಿಕೆಟ್‌ಗಳನ್ನು ಹೊಂದಿರುವ ಕಪಿಲ್ ದೇವ್ ಅವರನ್ನು ಹಿಂದಿಕ್ಕಲಿದ್ದಾರೆ.

4 / 6
ಪ್ರಸ್ತುತ 686 ಅಂತರಾಷ್ಟ್ರೀಯ ವಿಕೆಟ್ಗಳನ್ನು ಪಡೆದಿರುವ ಅಶ್ವಿನ್ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ವಿಚಾರದಲ್ಲಿ 3ನೇ ಸ್ಥಾನದಲ್ಲಿದ್ದರೆ, ಅನಿಲ್ ಕುಂಬ್ಳೆ ಗರಿಷ್ಠ 953 ವಿಕೆಟ್ ಪಡೆದು ಮೊದಲ ಸ್ಥಾನದಲ್ಲಿದ್ದಾರೆ. ಅವರ ನಂತರ 707 ವಿಕೆಟ್ ಪಡೆದಿರುವ ಹರ್ಭಜನ್ ಸಿಂಗ್ ಎರಡನೇ ಸ್ಥಾನದಲ್ಲಿದ್ದಾರೆ.

5 / 6
ಇಂದೋರ್ ಟೆಸ್ಟ್​ನಲ್ಲಿ ಮೊಹಮ್ಮದ್ ಸಿರಾಜ್ 4 ವಿಕೆಟ್ ಪಡೆದರೆ ಅಂತರಾಷ್ಟ್ರೀಯ ಕ್ರಿಕೆಟ್​ನಲ್ಲಿ 100 ವಿಕೆಟ್ ಪೂರೈಸಲಿದ್ದಾರೆ. ಈ ಸಾಧನೆ ಮಾಡಿದ 49ನೇ ಭಾರತೀಯ ಎನಿಸಿಕೊಳ್ಳಲಿದ್ದಾರೆ.

6 / 6
Follow us
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?

ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ

ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ

ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ

ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!

ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ

ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು

ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ

ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು

ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ