IND vs AUS: ಜಡೇಜಾ 1, ಅಶ್ವಿನ್ 2, ಸಿರಾಜ್ 4! ಇಂದೋರ್ ಟೆಸ್ಟ್‌ನಲ್ಲಿ ವಿಶ್ವ ದಾಖಲೆ ನಿರ್ಮಾಣ?
IND vs AUS: ತಂಡದಲ್ಲಿ ಆಲ್ರೌಂಡರ್ ಆಗಿ ಸ್ಥಾನ ಪಡೆದಿರುವ ಅಶ್ವಿನ್ ಹಾಗೂ ಜಡೇಜಾಗೆ ಈ ಪಂದ್ಯದಲ್ಲಿ ವಿಶ್ವ ದಾಖಲೆ ಸೃಷ್ಟಿಸುವ ಅವಕಾಶವಿದ್ದು, ಅವರೊಂದಿಗೆ ಸಿರಾಜ್ ಕೂಡ ಮಹತ್ವದ ಮೈಲಿಗಲ್ಲು ಸ್ಥಾಪಿಸಲಿದ್ದಾರೆ.
1 / 6
ಇಂದೋರ್ ಟೆಸ್ಟ್‌ನಲ್ಲಿ ಟಾಸ್ ಗೆದ್ದ ಭಾರತ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ 2 ಬದಲಾವಣೆಗಳನ್ನು ಮಾಡಿದೆ. ಆರಂಭಿಕ ಕೆಎಲ್ ರಾಹುಲ್ ಬದಲು ಶುಭ್ಮನ್ ಗಿಲ್ ತಂಡಕ್ಕೆ ಎಂಟ್ರಿಕೊಟ್ಟಿದ್ದಾರೆ. ವೇಗಿ ಮೊಹಮ್ಮದ್ ಶಮಿ ಬದಲು ಉಮೇಶ್ ಯಾದವ್ ಆಡುತ್ತಿದ್ದಾರೆ. ಇನ್ನುಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ.
2 / 6
ಇನ್ನು ತಂಡದಲ್ಲಿ ಆಲ್ರೌಂಡರ್ ಆಗಿ ಸ್ಥಾನ ಪಡೆದಿರುವ ಅಶ್ವಿನ್ ಹಾಗೂ ಜಡೇಜಾಗೆ ಈ ಪಂದ್ಯದಲ್ಲಿ ವಿಶ್ವ ದಾಖಲೆ ಸೃಷ್ಟಿಸುವ ಅವಕಾಶವಿದ್ದು, ಅವರೊಂದಿಗೆ ಸಿರಾಜ್ ಕೂಡ ಮಹತ್ವದ ಮೈಲಿಗಲ್ಲು ಸ್ಥಾಪಿಸಲಿದ್ದಾರೆ. ಹಾಗಿದ್ದರೆ ಈ ಮೂವರು ಆಟಗಾರರು ಸೃಷ್ಟಿಸುವ ಆ ದಾಖಲೆಗಳೇನು ಎಂಬುದರ ವಿವರ ಇಲ್ಲಿದೆ.
3 / 6
ಇಂದೋರ್ ಟೆಸ್ಟ್‌ನಲ್ಲಿ ರವೀಂದ್ರ ಜಡೇಜಾ 1 ವಿಕೆಟ್ ಪಡೆದರೆ, ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 5000 ರನ್ ಮತ್ತು 500 ವಿಕೆಟ್‌ಗಳನ್ನು ಗಳಿಸಿದ ಎರಡನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಅವರಿಗಿಂತ ಮೊದಲು ಭಾರತದ ಪರ ಕಪಿಲ್ ದೇವ್ ಈ ಸಾಧನೆ ಮಾಡಿದ್ದರು. ಸದ್ಯ ಜಡೇಜಾ 297 ಅಂತರಾಷ್ಟ್ರೀಯ ಪಂದ್ಯಗಳಲ್ಲಿ 499 ವಿಕೆಟ್ ಪಡೆದಿದ್ದು, ಇದಲ್ಲದೆ ಬ್ಯಾಟಿಂಗ್‌ನಲ್ಲಿ 240 ಅಂತಾರಾಷ್ಟ್ರೀಯ ಇನ್ನಿಂಗ್ಸ್‌ಗಳಲ್ಲಿ 5523 ರನ್ ಗಳಿಸಿದ್ದಾರೆ.
4 / 6
ಹಾಗೆಯೇ ಅಶ್ವಿನ್ ಕೂಡ ಈ ಟೆಸ್ಟ್‌ನಲ್ಲಿ 2 ವಿಕೆಟ್ ಪಡೆದ ತಕ್ಷಣ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಮೂರನೇ ಬೌಲರ್ ಎನಿಸಿಕೊಳ್ಳಲಿದ್ದಾರೆ. ಜೊತೆಗೆ 687 ಅಂತಾರಾಷ್ಟ್ರೀಯ ವಿಕೆಟ್‌ಗಳನ್ನು ಹೊಂದಿರುವ ಕಪಿಲ್ ದೇವ್ ಅವರನ್ನು ಹಿಂದಿಕ್ಕಲಿದ್ದಾರೆ.
5 / 6
ಪ್ರಸ್ತುತ 686 ಅಂತರಾಷ್ಟ್ರೀಯ ವಿಕೆಟ್ಗಳನ್ನು ಪಡೆದಿರುವ ಅಶ್ವಿನ್ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ವಿಚಾರದಲ್ಲಿ 3ನೇ ಸ್ಥಾನದಲ್ಲಿದ್ದರೆ, ಅನಿಲ್ ಕುಂಬ್ಳೆ ಗರಿಷ್ಠ 953 ವಿಕೆಟ್ ಪಡೆದು ಮೊದಲ ಸ್ಥಾನದಲ್ಲಿದ್ದಾರೆ. ಅವರ ನಂತರ 707 ವಿಕೆಟ್ ಪಡೆದಿರುವ ಹರ್ಭಜನ್ ಸಿಂಗ್ ಎರಡನೇ ಸ್ಥಾನದಲ್ಲಿದ್ದಾರೆ.
6 / 6
ಇಂದೋರ್ ಟೆಸ್ಟ್‌ನಲ್ಲಿ ಮೊಹಮ್ಮದ್ ಸಿರಾಜ್ 4 ವಿಕೆಟ್ ಪಡೆದರೆ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 100 ವಿಕೆಟ್ ಪೂರೈಸಲಿದ್ದಾರೆ. ಈ ಸಾಧನೆ ಮಾಡಿದ 49ನೇ ಭಾರತೀಯ ಎನಿಸಿಕೊಳ್ಳಲಿದ್ದಾರೆ.