- Kannada News Photo gallery Cricket photos IND vs AUS 3rd Test: Umesh Yadav Equals Virat Kohli's Record
IND vs AUS 3rd Test: ವಿರಾಟ್ ಕೊಹ್ಲಿಯ ದಾಖಲೆ ಸರಿಗಟ್ಟಿದ ಉಮೇಶ್ ಯಾದವ್
India vs Australia 3rd Test: ಈ ಪಂದ್ಯದಲ್ಲಿ ಮೊದಲ ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಕೇವಲ 109 ರನ್ಗಳಿಗೆ ಆಲೌಟ್ ಆಗಿತ್ತು. ಈ ವೇಳೆ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಉಮೇಶ್ ಯಾದವ್ 2 ಭರ್ಜರಿ ಸಿಕ್ಸ್ ಹಾಗೂ 1 ಫೋರ್ನೊಂದಿಗೆ 17 ರನ್ ಬಾರಿಸಿದ್ದರು.
Updated on: Mar 01, 2023 | 6:33 PM

ಇಂದೋರ್ನಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಣ 3ನೇ ಟೆಸ್ಟ್ ಪಂದ್ಯದಲ್ಲಿ ಉಮೇಶ್ ಯಾದವ್ ವಿಶೇಷ ದಾಖಲೆ ಬರೆದಿದ್ದಾರೆ. ಈ ದಾಖಲೆ ಬರೆಯುವುದರೊಂದಿಗೆ ವಿರಾಟ್ ಕೊಹ್ಲಿಯ ರೆಕಾರ್ಡ್ ಅನ್ನು ಸರಿಗಟ್ಟಿರುವುದು ವಿಶೇಷ.

ಈ ಪಂದ್ಯದಲ್ಲಿ ಮೊದಲ ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಕೇವಲ 109 ರನ್ಗಳಿಗೆ ಆಲೌಟ್ ಆಗಿತ್ತು. ಈ ವೇಳೆ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಉಮೇಶ್ ಯಾದವ್ 2 ಭರ್ಜರಿ ಸಿಕ್ಸ್ ಹಾಗೂ 1 ಫೋರ್ನೊಂದಿಗೆ 17 ರನ್ ಬಾರಿಸಿದ್ದರು. ಈ 2 ಸಿಕ್ಸ್ಗಳೊಂದಿಗೆ ಉಮೇಶ್ ಯಾದವ್ ಟೆಸ್ಟ್ ಕ್ರಿಕೆಟ್ನಲ್ಲಿ ಹೊಸ ದಾಖಲೆ ನಿರ್ಮಿಸಿದರು.

ಹೌದು, ಈ ಎರಡು ಸಿಕ್ಸ್ನೊಂದಿಗೆ ಟೆಸ್ಟ್ ಕ್ರಿಕೆಟ್ನಲ್ಲಿ ಉಮೇಶ್ ಯಾದವ್ 24 ಸಿಕ್ಸರ್ಗಳನ್ನು ಪೂರೈಸಿದ್ದಾರೆ. ವಿಶೇಷ ಎಂದರೆ ಈ ಸಿಕ್ಸ್ಗಳ ಮೂಲಕ ಟೀಮ್ ಇಂಡಿಯಾದ ಮಾಜಿ ಆಟಗಾರ ರವಿ ಶಾಸ್ತ್ರಿಯನ್ನು ಹಿಂದಿಕ್ಕಿದ್ದಾರೆ.

ಟೀಮ್ ಇಂಡಿಯಾ ಪರ 121 ಟೆಸ್ಟ್ ಇನಿಂಗ್ಸ್ ಆಡಿರುವ ರವಿ ಶಾಸ್ತ್ರಿ ಅವರು ಕೇವಲ 22 ಸಿಕ್ಸ್ ಬಾರಿಸುವಲ್ಲಿ ಮಾತ್ರ ಯಶಸ್ವಿಯಾಗಿದ್ದರು.

ಇಂದೋರ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ 64ನೇ ಟೆಸ್ಟ್ ಇನಿಂಗ್ಸ್ ಆಡಿದ್ದ ಉಮೇಶ್ ಯಾದವ್ ಒಟ್ಟು 24 ಸಿಕ್ಸ್ಗಳನ್ನು ಬಾರಿಸಿದ್ದಾರೆ. ಈ ಮೂಲಕ ರವಿ ಶಾಸ್ತ್ರಿಯನ್ನು ಟೆಸ್ಟ್ ಸಿಕ್ಸರ್ಗಳ ಪಟ್ಟಿಯಲ್ಲಿ ಹಿಂದಿಕ್ಕಿದ್ದಾರೆ.

ಹಾಗೆಯೇ ವಿರಾಟ್ ಕೊಹ್ಲಿಯ ದಾಖಲೆಯನ್ನು ಉಮೇಶ್ ಯಾದವ್ ಸರಿಗಟ್ಟಿದ್ದಾರೆ. ಕಿಂಗ್ ಕೊಹ್ಲಿ 181 ಟೆಸ್ಟ್ ಇನಿಂಗ್ಸ್ಗಳಲ್ಲಿ ಒಟ್ಟು 24 ಸಿಕ್ಸ್ಗಳನ್ನು ಬಾರಿಸಿದ್ದಾರೆ. ಇದೀಗ 64 ಇನಿಂಗ್ಸ್ ಮೂಲಕ ಉಮೇಶ್ ಯಾದವ್ ಕೂಡ 24 ಸಿಕ್ಸ್ ಬಾರಿಸಿ ಕೊಹ್ಲಿಯ ಸಾಧನೆಯನ್ನು ಸರಿಗಟ್ಟಿರುವುದು ವಿಶೇಷ.

ಇನ್ನು ಟೀಮ್ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆ ವೀರೇಂದ್ರ ಸೆಹ್ವಾಗ್ ಹೆಸರಿನಲ್ಲಿದೆ. ಭಾರತದ ಪರ 180 ಟೆಸ್ಟ್ ಇನಿಂಗ್ಸ್ ಆಡಿದ್ದ ಸೆಹ್ವಾಗ್ ಒಟ್ಟು 91 ಸಿಕ್ಸ್ಗಳನ್ನು ಬಾರಿಸಿದ್ದರು.

ಹಾಗೆಯೇ ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ವಿಶ್ವ ದಾಖಲೆ ಇಂಗ್ಲೆಂಡ್ನ ಬೆನ್ ಸ್ಟೋಕ್ಸ್ ಹೆಸರಿನಲ್ಲಿದೆ. 166 ಟೆಸ್ಟ್ ಇನಿಂಗ್ಸ್ ಆಡಿರುವ ಸ್ಟೋಕ್ಸ್ ಒಟ್ಟು 109 ಸಿಕ್ಸ್ ಬಾರಿಸಿ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.
