IND vs AUS 3rd Test: ವಿರಾಟ್ ಕೊಹ್ಲಿಯ ದಾಖಲೆ ಸರಿಗಟ್ಟಿದ ಉಮೇಶ್ ಯಾದವ್

| Updated By: ಝಾಹಿರ್ ಯೂಸುಫ್

Updated on: Mar 01, 2023 | 6:33 PM

India vs Australia 3rd Test: ಈ ಪಂದ್ಯದಲ್ಲಿ ಮೊದಲ ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಕೇವಲ 109 ರನ್​ಗಳಿಗೆ ಆಲೌಟ್ ಆಗಿತ್ತು. ಈ ವೇಳೆ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಉಮೇಶ್ ಯಾದವ್ 2 ಭರ್ಜರಿ ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 17 ರನ್​ ಬಾರಿಸಿದ್ದರು.

1 / 8
ಇಂದೋರ್​ನಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಣ 3ನೇ ಟೆಸ್ಟ್ ಪಂದ್ಯದಲ್ಲಿ ಉಮೇಶ್ ಯಾದವ್ ವಿಶೇಷ ದಾಖಲೆ ಬರೆದಿದ್ದಾರೆ. ಈ ದಾಖಲೆ ಬರೆಯುವುದರೊಂದಿಗೆ ವಿರಾಟ್ ಕೊಹ್ಲಿಯ ರೆಕಾರ್ಡ್​ ಅನ್ನು ಸರಿಗಟ್ಟಿರುವುದು ವಿಶೇಷ.

2 / 8
ಈ ಪಂದ್ಯದಲ್ಲಿ ಮೊದಲ ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಕೇವಲ 109 ರನ್​ಗಳಿಗೆ ಆಲೌಟ್ ಆಗಿತ್ತು. ಈ ವೇಳೆ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಉಮೇಶ್ ಯಾದವ್ 2 ಭರ್ಜರಿ ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 17 ರನ್​ ಬಾರಿಸಿದ್ದರು. ಈ 2 ಸಿಕ್ಸ್​ಗಳೊಂದಿಗೆ ಉಮೇಶ್ ಯಾದವ್ ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ದಾಖಲೆ ನಿರ್ಮಿಸಿದರು.

3 / 8
ಹೌದು, ಈ ಎರಡು ಸಿಕ್ಸ್​ನೊಂದಿಗೆ ಟೆಸ್ಟ್​ ಕ್ರಿಕೆಟ್​ನಲ್ಲಿ ಉಮೇಶ್ ಯಾದವ್ 24 ಸಿಕ್ಸರ್​ಗಳನ್ನು ಪೂರೈಸಿದ್ದಾರೆ. ವಿಶೇಷ ಎಂದರೆ ಈ ಸಿಕ್ಸ್​ಗಳ ಮೂಲಕ ಟೀಮ್ ಇಂಡಿಯಾದ ಮಾಜಿ ಆಟಗಾರ ರವಿ ಶಾಸ್ತ್ರಿಯನ್ನು ಹಿಂದಿಕ್ಕಿದ್ದಾರೆ.

4 / 8
ಟೀಮ್ ಇಂಡಿಯಾ ಪರ 121 ಟೆಸ್ಟ್ ಇನಿಂಗ್ಸ್ ಆಡಿರುವ ರವಿ ಶಾಸ್ತ್ರಿ ಅವರು ಕೇವಲ 22 ಸಿಕ್ಸ್​ ಬಾರಿಸುವಲ್ಲಿ ಮಾತ್ರ ಯಶಸ್ವಿಯಾಗಿದ್ದರು.

5 / 8
ಇಂದೋರ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ 64ನೇ ಟೆಸ್ಟ್ ಇನಿಂಗ್ಸ್ ಆಡಿದ್ದ ಉಮೇಶ್​ ಯಾದವ್ ಒಟ್ಟು 24 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ರವಿ ಶಾಸ್ತ್ರಿಯನ್ನು ಟೆಸ್ಟ್ ಸಿಕ್ಸರ್​ಗಳ ಪಟ್ಟಿಯಲ್ಲಿ ಹಿಂದಿಕ್ಕಿದ್ದಾರೆ.

6 / 8
ಹಾಗೆಯೇ ವಿರಾಟ್ ಕೊಹ್ಲಿಯ ದಾಖಲೆಯನ್ನು ಉಮೇಶ್ ಯಾದವ್ ಸರಿಗಟ್ಟಿದ್ದಾರೆ. ಕಿಂಗ್ ಕೊಹ್ಲಿ 181 ಟೆಸ್ಟ್  ಇನಿಂಗ್ಸ್​ಗಳಲ್ಲಿ ಒಟ್ಟು 24 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಇದೀಗ 64 ಇನಿಂಗ್ಸ್​ ಮೂಲಕ ಉಮೇಶ್ ಯಾದವ್ ಕೂಡ 24 ಸಿಕ್ಸ್ ಬಾರಿಸಿ ಕೊಹ್ಲಿಯ ಸಾಧನೆಯನ್ನು ಸರಿಗಟ್ಟಿರುವುದು ವಿಶೇಷ.

7 / 8
ಇನ್ನು ಟೀಮ್ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆ ವೀರೇಂದ್ರ ಸೆಹ್ವಾಗ್ ಹೆಸರಿನಲ್ಲಿದೆ. ಭಾರತದ ಪರ 180 ಟೆಸ್ಟ್ ಇನಿಂಗ್ಸ್ ಆಡಿದ್ದ ಸೆಹ್ವಾಗ್ ಒಟ್ಟು 91 ಸಿಕ್ಸ್​ಗಳನ್ನು ಬಾರಿಸಿದ್ದರು.

8 / 8
ಹಾಗೆಯೇ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ವಿಶ್ವ ದಾಖಲೆ ಇಂಗ್ಲೆಂಡ್​ನ ಬೆನ್ ಸ್ಟೋಕ್ಸ್ ಹೆಸರಿನಲ್ಲಿದೆ. 166 ಟೆಸ್ಟ್ ಇನಿಂಗ್ಸ್​ ಆಡಿರುವ ಸ್ಟೋಕ್ಸ್ ಒಟ್ಟು 109 ಸಿಕ್ಸ್ ಬಾರಿಸಿ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.